ನಿರ್ಣಾಯಕ ಟಿ20: ವಿಂಡೀಸ್‌ಗೆ ಬೃಹತ್ ಟಾರ್ಗೆಟ್ ನೀಡಿದ ಭಾರತ!

Published : Dec 11, 2019, 08:49 PM IST
ನಿರ್ಣಾಯಕ ಟಿ20: ವಿಂಡೀಸ್‌ಗೆ ಬೃಹತ್ ಟಾರ್ಗೆಟ್ ನೀಡಿದ ಭಾರತ!

ಸಾರಾಂಶ

ಮಹತ್ವದ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಚೇಸಿಂಗ್ ಮಾಡಲು ತಯಾರಿ ಮಾಡಿಕೊಂಡಿತ್ತು. ಆದರೆ ಟಾಸ್ ಸೋತ ಕಾರಣ ಅನಿವಾರ್ಯವಾಗಿ ಬ್ಯಾಟಿಂಗ್ ಇಳಿಯಿತು. ದಿಟ್ಟ ಹೋರಾಟದ ಮೂಲಕ ಭಾರತ ಬೃಹತ್ ಮೊತ್ತ ಪೇರಿಸಿದೆ. ಬ್ಯಾಟಿಂಗ್ ಸಹಕಾರಿ ವಾಂಖೆಡೆ ಮೈದಾನದಲ್ಲಿ ರನ್ ಮಳೆ ಸುರಿಸಿರುವ ಟೀಂ ಇಂಡಿಯಾ ಇದೀಗ ಬೌಲಿಂಗ್‌ನಲ್ಲಿ ಮೋಡಿ ಮಾಡಲು ಸಜ್ಜಾಗಿದೆ. 

ಮುಂಬೈ(ಡಿ.11): ಸರಣಿ ಗೆಲುವು ನಿರ್ಧರಿಸುವು 3ನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಭಾರತ ದಿಟ್ಟ ಬ್ಯಾಟಿಂಗ್ ಪ್ರದರ್ಶನ ನೀಡಿದೆ. ಕೆಎಲ್ ರಾಹುಲ್ ಹಾಗೂ ರೋಹಿತ್ ಶರ್ಮಾ ಆಕರ್ಷಕ ಅರ್ಧಶತಕದ ನೆರವಿನಿಂದ ಟೀಂ ಇಂಡಿಯಾ 3 ವಿಕೆಟ್ ನಷ್ಟಕ್ಕೆ 240 ರನ್ ಸಿಡಿಸಿದೆ. ಈ ಮೂಲಕ ವಿಂಡೀಸ್ ಗೆಲುವಿಗೆ  241ರನ್ ಟಾರ್ಗೆಟ್ ನೀಡಿದೆ. 

ಇದನ್ನೂ ಓದಿ: ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್, ಭಾರತದಲ್ಲಿ 2 ಬದಲಾವಣೆ.

ಸತತ 2ನೇ ಬಾರಿಗೆ ಟಾಸ್ ಸೋತ ಟೀಂ ಇಂಡಿಯಾ ಒಲ್ಲದ ಮನಸ್ಸಿನಿಂದ ಬ್ಯಾಟಿಂಗ್ ಇಳಿಯಿತು. ಆದರೆ ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್ ಸ್ಫೋಟಕ ಆರಂಭ ಅಭಿಮಾನಿಗಳಿಗೆ ಖುಷಿ ನೀಡಿತು. ಮೊದಲ ವಿಕೆಟ್‌ಗೆ ಈ ಜೋಡಿ 135 ರನ್ ಚಚ್ಚಿದರು. ರೋಹಿತ್ ಶರ್ಮಾ 34 ಎಸೆತದಲ್ಲಿ 6 ಬೌಂಡರಿ ಹಾಗೂ 5 ಸಿಕ್ಸರ್ ನೆರವಿನಿಂದ 71 ರನ್ ಸಿಡಿಸಿ ಔಟಾದರು.

ಇದನ್ನೂ ಓದಿ: ಗಾಯಾಳು ಧವನ್ ಬದಲಿಗೆ ಟೀಂ ಇಂಡಿಯಾ ಸೇರಿಕೊಂಡ ಮಯಾಂಕ್!

ಕೆಎಲ್ ರಾಹುಲ್ ಬ್ಯಾಟಿಂಗ್ ಮುಂದುವರಿಸಿದರು. ಕಳೆದ ಪಂದ್ಯದಲ್ಲಿ ಶಿವಂ ದುಬೆಗೆ 3ನೇ ಕ್ರಮಾಂಕ ಬಿಟ್ಟುಕೊಟ್ಟು ಯಶಸ್ವಿಯಾಗಿದ್ದ ಕೊಹ್ಲಿ, ಈ ಪಂದ್ಯದಲ್ಲಿ ರಿಷಬ್ ಪಂತ್‌ಗೆ ನೀಡಿ ಕೈ ಸುಟ್ಟುಕೊಂಡರು. ಬ್ಯಾಟಿಂಗ್ ಕ್ರಮಾಂಕದಲ್ಲಿ ಬಡ್ತಿ ಪಡೆಗರೂ ಪಂತ್ ಹಣೆಬರಹ ಬದಲಾಗಲಿಲ್ಲ. ಪಂತ್ ಶೂನ್ಯಕ್ಕೆ ಔಟಾದರು.

ನಾಯಕ ವಿರಾಟ್ ಕೊಹ್ಲಿ ಹಾಗೂ ರಾಹುಲ್ ಜೊತೆಯಾಟದಿಂದ ಟೀಂ ಇಂಡಿಯಾ ಮತ್ತೆ ರನ್ ಗಳಿಕೆ ವೇಗವನ್ನು ಹೆಚ್ಚಿಸಿತು. ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ ಕೊಹ್ಲಿ ಕೇವಲ 21 ಎಸೆತದಲ್ಲಿ ಅರ್ಧಶತಕ ಪೂರೈಸಿದರು. ಇತ್ತ ರಾಹುಲ್ ಕೂಡ ಅಬ್ಬರ ಮುಂದುವರಿಸಿದರು. ರಾಹುಲ್ 56 ಎಸೆತದಲ್ಲಿ 9 ಬೌಂಡರಿ, 4 ಸಿಕ್ಸರ್ ನೆರವಿನಿಂದ 91 ರನ್ ಸಿಡಿಸಿ ಔಟಾದರು. ಈ ಮೂಲಕ ಶತಕ ವಂಚಿತರಾದರು.  ಕೊಹ್ಲಿ 29 ಎಸೆತದಲ್ಲಿ ಅಜೇಯ 70 ರನ್ ಭಾರಿಸಿದರು. ಈ ಮೂಲಕ ಟೀಂ ಇಂಡಿಯಾ 3 ವಿಕೆಟ್ ನಷ್ಟಕ್ಕೆ 240 ರನ್ ಸಿಡಿಸಿತು. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮುಂಬೈಗೆ ಬಂದಿಳಿದ ವಿರುಷ್ಕಾ ದಂಪತಿ; ಮೆಸ್ಸಿಯನ್ನು ಭೇಟಿಯಾಗ್ತಾರಾ ವಿರಾಟ್ ಕೊಹ್ಲಿ?
ಟೀಂ ಇಂಡಿಯಾ ಕ್ರಿಕೆಟಿಗರಿಗೆ ದುಶ್ಚಟವಿದೆ, ಆದರೆ ನನ್ನ ಪತಿಗಿಲ್ಲ! ಈ ಕ್ರಿಕೆಟರ್ ಪತ್ನಿಯಿಂದ ವಿವಾದಾತ್ಮಕ ಹೇಳಿಕೆ