
ನಾಟಿಂಗ್‌ಹ್ಯಾಮ್(ಜು.11): ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವಿನ ಮೂರನೇ ಟಿ20 ಪಂದ್ಯದಲ್ಲಿ ರೋಹಿತ್ ಶರ್ಮಾ (Rohit Sharma) ನೇತೃತ್ವದ ಟೀಂ ಇಂಡಿಯಾ 17 ರನ್‌ಗಳ ರೋಚಕ ಸೋಲು ಅನುಭವಿಸಿತಾದರೂ, ಸೂರ್ಯಕುಮಾರ್ ಯಾದವ್ ಅವರ ಕೆಚ್ಚೆದೆಯ ಬ್ಯಾಟಿಂಗ್ ಕ್ರಿಕೆಟ್ ಅಭಿಮಾನಿಗಳ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಸೂರ್ಯಕುಮಾರ್ ಯಾದವ್ ಕೇವಲ 48 ಎಸೆತಗಳಲ್ಲಿ ಶತಕ ಬಾರಿಸುವ ಮೂಲಕ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಶತಕ ಬಾರಿಸಿದ ಭಾರತದ 5ನೇ ಬ್ಯಾಟರ್ ಎನ್ನುವ ಕೀರ್ತಿಗೆ ಸೂರ್ಯಕುಮಾರ್ ಯಾದವ್ (Suryakumar Yadav) ಪಾತ್ರರಾಗಿದ್ದಾರೆ. ಸೂರ್ಯಕುಮಾರ್ ಯಾದವ್ ಅವರ ದಿಟ್ಟ ಬ್ಯಾಟಿಂಗ್ ಹೋರಾಟದ ಬಗ್ಗೆ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಗುಣಗಾನ ಮಾಡಿದ್ದಾರೆ.
ಇಲ್ಲಿನ ಟ್ರೆಂಟ್‌ಬ್ರಿಡ್ಜ್ ಮೈದಾನದಲ್ಲಿ ಇಂಗ್ಲೆಂಡ್ ನೀಡಿದ್ದ 216 ರನ್‌ಗಳ ಕಠಿಣ ಗುರಿ ಬೆನ್ನತ್ತಿದ ಭಾರತ ತಂಡವು ಉತ್ತಮ ಆರಂಭ ಪಡೆಯಲು ವಿಫಲವಾಯಿತು. 31 ರನ್ ಗಳಿಸುವಷ್ಟರಲ್ಲಿ ಅಗ್ರಕ್ರಮಾಂಕದ ಮೂವರು ಬ್ಯಾಟರ್‌ಗಳು ಪೆವಿಲಿಯನ್ ಸೇರಿದ್ದರು. ರಿಷಭ್ ಪಂತ್, ಎರಡನೇ ಓವರ್‌ನಲ್ಲೇ ವಿಕೆಟ್ ಒಪ್ಪಿಸಿದರೇ, ವಿರಾಟ್ ಕೊಹ್ಲಿ (Virat Kohli) ಹಾಗೂ ರೋಹಿತ್ ಶರ್ಮಾ ಕೂಡಾ ತಲಾ 11 ರನ್ ಗಳಿಸಿ ಪೆವಿಲಿಯನ್ ಪೆರೇಡ್ ನಡೆಸಿದರು. ಈ ಸಂದರ್ಭದಲ್ಲಿ ಕ್ರೀಸ್‌ಗಿಳಿದ ಸೂರ್ಯಕುಮಾರ್ ಯಾದವ್ ಚುರುಕಾಗಿ ರನ್ ಗಳಿಸುವ ಮೂಲಕ ಭಾರತೀಯ ಪಾಳಯದಲ್ಲಿ ಗೆಲುವಿನ ಅಸೆ ಮೂಡಿಸಿದರು.
ನಾವು ಅಲ್ಪ ರನ್‌ಗಳ ಅಂತರದಲ್ಲಿ ಸೋಲು ಅನುಭವಿಸಿದ್ದರೂ ಸಹಾ, ಇದೊಂದು ರೀತಿಯ ಅದ್ಭುತ ಚೇಸ್ ಆಗಿತ್ತು. ನಮ್ಮ ಹೋರಾಟದ ಬಗ್ಗೆ ಹೆಮ್ಮೆಯಿದೆ. ಸೂರ್ಯಕುಮಾರ್ ಯಾದವ್ ಅವರ ಬ್ಯಾಟಿಂಗ್ ನೋಡಲು ಅದ್ಭುತವಾಗಿತ್ತು. ನಾನು ಸಾಕಷ್ಟು ಸಮಯದಿಂದ ಅವರ ಆಟವನ್ನು ನೋಡುತ್ತಾ ಬಂದಿದ್ದೇನೆ. ಅವರು ಈ ಮಾದರಿಯ ಕ್ರಿಕೆಟ್‌ನಲ್ಲಿ ಸೊಗಸಾದ ಆಟವನ್ನು ಆಡುತ್ತಾರೆ. ಅವರು ನಮ್ಮ ತಂಡ ಕೂಡಿಕೊಂಡ ಬಳಿಕ ಹಂತ ಹಂತವಾಗಿ ಬೆಳೆಯುತ್ತಾ ಬಂದಿದ್ದಾರೆ ಎಂದು ರೋಹಿತ್ ಶರ್ಮಾ (Rohit Sharma) ಮುಂಬೈನ ಸಹ ಆಟಗಾರರನ ಪ್ರದರ್ಶನವನ್ನು ಕೊಂಡಾಡಿದ್ದಾರೆ.
Virat Kohli ಕಳಪೆ ಫಾರ್ಮ್ ಬಗ್ಗೆ ಮತ್ತೆ ತುಟಿ ಬಿಚ್ಚಿದ ನಾಯಕ ರೋಹಿತ್ ಶರ್ಮಾ..!
ಇಂಗ್ಲೆಂಡ್ ಎದುರಿನ ಮೊದಲ ಟಿ20 ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ (Team India) 50 ರನ್‌ಗಳ ಅಂತರದ ಭರ್ಜರಿ ಗೆಲುವು ಸಾಧಿಸಿತ್ತು. ಇನ್ನು ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 49 ರನ್‌ಗಳ ಅಂತರದ ಭರ್ಜರಿ ಗೆಲುವು ಸಾಧಿಸುವ ಮೂಲಕ ಮೂರು ಪಂದ್ಯಗಳ ಟಿ20 ಸರಣಿಯನ್ನು 2-0 ಅಂತರದಲ್ಲಿ ಕೈವಶ ಮಾಡಿಕೊಂಡಿತು. ಇನ್ನು ಮೂರನೇ ಟಿ20 ಪಂದ್ಯದಲ್ಲಿ ಭಾರತ 17 ರನ್‌ಗಳ ಅಂತರದ ಸೋಲು ಕಾಣುವ ಮೂಲಕ 2-1 ಅಂತರದಲ್ಲಿ ಟಿ20 ಸರಣಿ ಅಂತ್ಯವಾಗಿದೆ.
ಇಂಗ್ಲೆಂಡ್ ತಂಡದವರು ಮೊದಲು ಬ್ಯಾಟಿಂಗ್ ಮಾಡಿ ದೊಡ್ಡ ಮೊತ್ತ ಕಲೆಹಾಕುವ ಮೂಲಕ ನಮ್ಮ ಮೇಲೆ ಒತ್ತಡ ಹೇರಿದರು. ಆದರೆ ಉತ್ತಮ ಜತೆಯಾಟವು ನಮ್ಮನ್ನು ಪಂದ್ಯದಲ್ಲಿ ಕಮ್‌ಬ್ಯಾಕ್ ಮಾಡುವಂತೆ ಮಾಡಿತು. ಇಂತಹ ದೊಡ್ಡ ಸ್ಕೋರ್ ಬೆನ್ನತ್ತಿ ಯಶಸ್ವಿಯಾಗಬೇಕು. ನಾವು ಒಂದು ತಂಡವಾಗಿ ಆಡಬೇಕು. ಇಲ್ಲಿಯವರೆಗೂ ನಾವು ಒಳ್ಳೆಯ ಪ್ರದರ್ಶನವನ್ನೇ ತೋರಿದ್ದೇವೆ ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.
ಭಾರತ ಹಾಗೂ ಇಂಗ್ಲೆಂಡ್ ನಡುವಿನ 3 ಪಂದ್ಯಗಳ ಟಿ20 ಸರಣಿಯು 2-1 ಅಂತರದಲ್ಲಿ ಮುಕ್ತಾಯವಾದ ಬೆನ್ನಲ್ಲೇ ಇದೀಗ 3 ಪಂದ್ಯಗಳ ಏಕದಿನ ಸರಣಿಯು ಜುಲೈ 12, 14 ಮತ್ತು 17ಕ್ಕೆ ಕ್ರಮವಾಗಿ ಓವಲ್, ಲಾರ್ಡ್ಸ್ ಹಾಗೂ ಮ್ಯಾಂಚೆಸ್ಟರ್‌ನಲ್ಲಿ ನಡೆಯಲಿವೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.