IPL ಆರಂಭಕ್ಕೂ ಮುನ್ನ ಅಭಿಮಾನಿಗಳಿಗೆ ಗುಡ್‌ ನ್ಯೂಸ್ ನೀಡಿದ ವಿರುಷ್ಕಾ ಜೋಡಿ

By Suvarna NewsFirst Published Aug 27, 2020, 11:38 AM IST
Highlights

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಪತ್ನಿ ಅನುಷ್ಕಾ ಶರ್ಮಾ ಅಭಿಮಾನಿಗಳಿಗೆ ಗುಡ್‌ ನ್ಯೂಸ್‌ ನೀಡಿದ್ದಾರೆ. ಏನದು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ

ದುಬೈ(ಆ.27): 13ನೇ ಆವೃತ್ತಿಯ ಐಪಿಎಲ್ ಟೂರ್ನಿಗೆ ದಿನಗಣನೆ ಆರಂಭವಾಗಿದೆ. ಇದರ ಬೆನ್ನಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ದಂಪತಿ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.

"

ಹೌದು, ಇದೀಗ ವಿರುಷ್ಕಾ ಜೋಡಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ಈ ವಿಚಾರವನ್ನು ಖಚಿತಪಡಿಸಿದ್ದಾರೆ. ವಿರಾಟ್ ಹಾಗೂ ಅನುಷ್ಕಾ ಮುದ್ದಾದ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ್ದಾರೆ. ಇದರೊಂದಿಗೆ ಜನವರಿ 2021ರಲ್ಲಿ ನಾವು ಮೂರು ಮಂದಿ ಎಂದು ವಿರುಷ್ಕಾ ಜೋಡಿ ಟ್ವೀಟ್ ಮಾಡಿದ್ದಾರೆ.   

ಒಂದು ತಪ್ಪು ಇಡೀ ಟೂರ್ನಿಯನ್ನೇ ಹಾಳು ಮಾಡಬಹುದು ಎಚ್ಚರ ಎಂದ ನಾಯಕ ಕೊಹ್ಲಿ

And then, we were three! Arriving Jan 2021 ❤️🙏 pic.twitter.com/0BDSogBM1n

— Virat Kohli (@imVkohli)

ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ 2017ರ ಡಿಸೆಂಬರ್‌ನಲ್ಲಿ ಇಟಲಿಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದರು.

And then, we were three! Arriving Jan 2021 ❤️🙏 pic.twitter.com/iWANZ4cPdD

— Anushka Sharma (@AnushkaSharma)

ಸದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ 13ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಪಾಲ್ಗೊಳ್ಳಲು ದುಬೈಗೆ ತಲುಪಿದ್ದಾರೆ. ಇಂದಿನಿಂದ ಟೂರ್ನಿಗೆ ಪೂರ್ವಭಾವಿ ಅಭ್ಯಾಸ ನಡೆಸಲು ತಂಡ ಮೈದಾನಕ್ಕಿಳಿಯಲಿದೆ.


 

click me!