ಪತ್ನಿ ಜತೆ ಭರ್ಜರಿ ವರ್ಕೌಟ್‌ ಮಾಡುತ್ತಿದ್ದಾರೆ ಯುಜುವೇಂದ್ರ ಚಹಲ್..!

By Suvarna News  |  First Published Jun 8, 2021, 5:17 PM IST

* ಫಿಟ್ನೆಸ್‌ ಕಾಪಾಡಿಕೊಳ್ಳಲು ಬೆವರು ಹರಿಸುತ್ತಿದ್ದಾರೆ ಟೀಂ ಇಂಡಿಯಾ ಸ್ಪಿನ್ನರ್ ಯುಜುವೇಂದ್ರ ಚಹಲ್

* ಪತಿ ಚಹಲ್‌ಗೆ ಸಾಥ್ ಕೊಟ್ಟ ಪತ್ನಿ ಧನಶ್ರೀ ವರ್ಮಾ

* ಚಹಲ್‌-ಧನಶ್ರೀ ವರ್ಕೌಟ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್


ನವದೆಹಲಿ(ಜೂ.08): ಟೀಂ ಇಂಡಿಯಾ ಅನುಭವಿ ಲೆಗ್‌ ಸ್ಪಿನ್ನರ್‌ ಯುಜುವೇಂದ್ರ ಚಹಲ್‌ ಸದ್ಯ ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ತಂಡದ ಅವಿಭಾಜ್ಯ ಅಂಗವಾಗಿ ಗುರುತಿಸಿಕೊಂಡಿದ್ದಾರೆ. ಅದರೆ ಇತ್ತೀಚಿನ ಕೆಲದಿನಗಳಲ್ಲಿ ಚಹಲ್ ತಮ್ಮ ಹಿಂದಿನ ಮೊನಚನ್ನು ತೋರಿಸಲು ಸಾಧ್ಯವಾಗುತ್ತಿಲ್ಲ. ಇದೀಗ ತಮ್ಮ ಪತ್ನಿಯ ಜತೆ ಜಿಮ್‌ನಲ್ಲಿ ಬೆವರು ಹರಿಸುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಹೌದು, ಇತ್ತೀಚೆಗೆ ನಡೆದ 14ನೇ ಆವೃತ್ತಿಯ ಐಪಿಎಲ್‌ ಟೂರ್ನಿಯಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವನ್ನು ಪ್ರತಿನಿಧಿಸಿದ್ದ ಯುಜುವೇಂದ್ರ ಚಹಲ್ ನಿರೀಕ್ಷೆಗೆ ತಕ್ಕಂತೆ ಬೌಲಿಂಗ್ ಮಾಡಿರಲಿಲ್ಲ. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಚಹಲ್ ತಮ್ಮ ಫಿಟ್ನೆಸ್‌ನತ್ತ ಗಮನ ಹರಿಸಿದ್ದಾರೆ. ಹೀಗಾಗಿ ಪತ್ನಿ ಧನಶ್ರೀ ವರ್ಮಾ ಜತೆ ಲೆಗ್ ಸ್ಪಿನ್ನರ್ ಯುಜುವೇಂದ್ರ ಚಹಲ್ ವರ್ಕೌಟ್‌ ಮಾಡಲಾರಂಭಿಸಿದ್ದಾರೆ.

 
 
 
 
 
 
 
 
 
 
 
 
 
 
 

Tap to resize

Latest Videos

A post shared by Yuzvendra Chahal (@yuzi_chahal23)

 
ಈ ಇಬ್ಬರು ಕೆಲವೊಂದು ಸರಳ ವ್ಯಾಯಾಮಗಳ ಜತೆಗೆ ಸಿಟ್‌ ಅಪ್ ಹಾಗೂ ಪುಷ್‌ ಅಪ್‌ಗಳನ್ನು ಮಾಡಿ ಗಮನ ಸೆಳೆದಿದ್ದಾರೆ. ಪ್ರತಿದಿನ ತಾವು ಅಭ್ಯಾಸ ನಡೆಸುತ್ತಿರುವುದಾಗಿ ಯುಜುವೇಂದ್ರ ಚಹಲ್ ತಿಳಿಸಿದ್ದಾರೆ. ಪತ್ನಿ ಧನಶ್ರೀ ವರ್ಮಾ ಪಟ್ಟ ಪರಿಶ್ರಮಕ್ಕೆ ಫಲ ಸಿಗಲಿದೆ ಎಂಬರ್ಥದ ತಲೆ ಬರಹದೊಂದಿಗೆ ವಿಡಿಯೋ ಹಂಚಿಕೊಂಡಿದ್ದಾರೆ. 

ಸದ್ಯ ಯುಜುವೇಂದ್ರ ಚಹಲ್ ಶ್ರೀಲಂಕಾ ಪ್ರವಾಸದ ಮೇಲೆ ಕಣ್ಣಿಟ್ಟಿದ್ದು, ತಂಡ ಕೂಡಿಕೊಳ್ಳುವ ವಿಶ್ವಾಸದಲ್ಲಿದ್ದಾರೆ. ಜುಲೈ 13ರಿಂದ ಶ್ರೀಲಂಕಾ ವಿರುದ್ದ 3 ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದೆ. ಇದಾದ ಬಳಿಕ ಲಂಕಾ ಎದುರು ಭಾರತ ತಂಡವು 3 ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಟೆಸ್ಟ್ ಸರಣಿಯನ್ನಾಡಲು ಇಂಗ್ಲೆಂಡ್‌ಗೆ ಬಂದಿಳಿದಿದೆ. ಹೀಗಾಗಿ ಲಂಕಾ ಪ್ರವಾಸಕ್ಕೆ ಶಿಖರ್ ಧವನ್ ಭಾರತ ಕ್ರಿಕೆಟ್ ತಂಡವನ್ನು ನಾಯಕನಾಗಿ ಮುನ್ನಡೆಸುವ ಸಾಧ್ಯತೆಯಿದೆ.

click me!