ಆಸ್ಟ್ರೇಲಿಯಾ ಸರಣಿಗೆ ಟೀಂ ಇಂಡಿಯಾ ಪ್ರಕಟ; ಕನ್ನಡಿಗ ಮಯಾಂಕ್ ಔಟ್!

By Suvarna NewsFirst Published Dec 23, 2019, 7:45 PM IST
Highlights

ಆಸ್ಟ್ರೇಲಿಯಾ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟಿಸಲಾಗಿದೆ.  ಶ್ರೀಲಂಕಾ ವಿರುದ್ಧಧ ಟಿ20 ಸರಣಿಗೆ ಆಯ್ಕೆಯಾದ ಧವನ್ ಹಾಗೂ ಬುಮ್ರಾ ಏಕದಿನದಲ್ಲೂ ಸ್ಥಾನ ಉಳಿಸಿಕೊಂಡಿದ್ದಾರೆ. ಆದರೆ ಕನ್ನಡಿಗ ಮಯಾಂಕ್  ಅಗರ್ವಾಲ್ ತಂಡದಿಂದ ಹೊರಬಿದ್ದಿದ್ದಾರೆ.

"

ಮುಂಬೈ(ಡಿ.23): ಜನವರಿಯಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ 3 ಪಂದ್ಯಗಳ ಏಕದಿನ ಸರಣಿ ಆಯೋಜಿಸಲಾಗಿದೆ. ಜನವರಿ 14 ರಿಂದ 19 ವರೆಗೆ ನಡೆಯಲಿರುವ ಈ ಟೂರ್ನಿಗೆ ಟೀಂ ಇಂಡಿಯಾ ಪ್ರಕಟಗೊಂಡಿದೆ. ಲಂಕಾ ವಿರುದ್ಧದ ಟಿ20 ಸರಣಿಗೆ ಆಯ್ಕೆಯಾಗಿರುವ ವೇಗಿ ಜಸ್ಪ್ರೀತ್ ಬುಮ್ರಾ ಹಾಗೂ ಶಿಖರ್ ಧವನ್ ಏಕದಿನ ತಂಡದಲ್ಲೂ ಸ್ಥಾನ ಪಡೆದಿದ್ದಾರೆ.

ಇದನ್ನೂ ಓದಿ: ಶ್ರೀಲಂಕಾ ಸರಣಿಗೆ ಭಾರತ ತಂಡ ಪ್ರಕಟ; ಬುಮ್ರಾ ವಾಪಾಸ್, ರೋಹಿತ್‌ಗೆ ರೆಸ್ಟ್!

ಟಿ20 ಸರಣಿಯಿಂದ ವಿಶ್ರಾಂತಿ ಪಡೆದಿದ್ದ ರೋಹಿತ್ ಶರ್ಮಾ, ಏಕದಿನ ಸರಣಿಗೆ ವಾಪಾಸ್ಸಾಗಿದ್ದಾರೆ.  ಇತ್ತೀಚೆಗೆ ಮುಕ್ತಾಯಗೊಂಡ ವೆಸ್ಟ್ ಇಂಡೀಸ್ ಸರಣಿಯಲ್ಲಿ ಧವನ್ ಇಂಜುರಿಯಿಂದ ಹೊರಗುಳಿದಿದ್ದರು. ಹೀಗಾಗಿ ಕನ್ನಡಿಗ ಮಯಾಂಕ ಅಗರ್ವಾಲ್ ಆಯ್ಕೆಯಾಗಿದ್ದರು. ಇದೀಗ ಧವನ್ ತಂಡಕ್ಕೆ ಮರಳಿರುವ ಕಾರಣ ಮಯಾಂಕ್ ಅಗರ್ವಾಲ್ ತಂಡದಿಂದ ಹೊರಗುಳಿದಿದ್ದಾರೆ.

ತಂಡದಲ್ಲಿ ಅನುಭವಿ ವೇಗಿಯಾಗಿ ಜಸ್ಪ್ರೀತ್ ಬುಮ್ರಾ ಮಾತ್ರ ಕಾಣಿಸಿಕೊಂಡಿದ್ದಾರೆ. ಮೊಹಮ್ಮದ್ ಶಮಿಗೆ ವಿಶ್ರಾಂತಿ ನೀಡಲಾಗಿದೆ. ಬುಮ್ರಾಗೆ ನವದೀಪ್ ಸೈನಿ ಹಾಗೂ ಶಾರ್ದೂಲ್ ಠಾಕೂರ್ ಸಾಥ್ ನೀಡಲಿದ್ದಾರೆ.

ಆಸ್ಟ್ರೇಲಿಯಾ ಸರಣಿಗೆ ಟೀಂ ಇಂಡಿಯಾ
ವಿರಾಟ್ ಕೊಹ್ಲಿ(ನಾಯಕ), ಶಿಖರ್ ಧವನ್, ರೋಹಿತ್ ಶರ್ಮಾ, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ರಿಷಬ್ ಪಂತ್, ಕೇದಾರ್ ಜಾಧವ್, ಶಿವಂ ದುಬೆ, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಯಜುವೇಂದ್ರ ಚಹಾಲ್, ನವದೀಪ್ ಸೈನಿ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ

ಭಾರತ ಆಸ್ಟ್ರೇಲಿಯಾ ಏಕದಿನ ಸರಣಿ
ಜ.14, 1ನೇ ಏಕದಿನ (ಮುಂಬೈ)
ಜ.17, 2ನೇ ಏಕದಿನ)ರಾಜ್‌ಕೋಟ್)
ಜ.19. 3ನೇ ಏಕದಿನ(ಬೆಂಗಳೂರು)

click me!