ಪ್ರವಾಸಿ ಇಂಗ್ಲೆಂಡ್ ತಂಡದ ವಿರುದ್ಧ ಮೊದಲ ಎರಡು ಟೆಸ್ಟ್ ಪಂದ್ಯಗಳಿಗಾಗಿ ಬಿಸಿಸಿಐ ಭಾರತ ತಂಡವನ್ನು ಪ್ರಕಟಿಸಿದೆ.
ಮುಂಬೈ (ಜ.12): ಪ್ರವಾಸಿ ಇಂಗ್ಲೆಂಡ್ ವಿರುದ್ಧ ಜನವರಿ 25 ರಿಂದ ಮಾರ್ಚ್ 11ರವರೆಗೆ ನಡೆಯಲಿರುವ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಿಗೆ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ರೋಹಿತ್ ಶರ್ಮ ತಂಡದ ನಾಯಕರಾಗಿದ್ದು, ಜಸ್‌ಪ್ರೀತ್ ಬುಮ್ರಾ ಅವರಿಗೆ ತಂಡದ ಉಪನಾಯಕ ಜವಾಬ್ದಾರಿ ನೀಡಲಾಗಿದೆ. ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಮೊದಲ ಪಂದ್ಯ ಜ.25 ರಿಂದ 29ರವರೆಗೆ ಹೈದರಾಬಾದ್‌ನಲ್ಲಿ ನಡೆಯಲಿದ್ದರೆ, 2ನೇ ಪಂದ್ಯ ಫೆ.2 ರಿಂದಫೆ. 6ರವರೆಗೆ ವಿಶಾಖಪಟ್ಟಣದಲ್ಲಿ ನಡೆಯಲಿದೆ.
ಸರಣಿಯ ಉಳಿದ ಪಂದ್ಯಗಳು ಕ್ರಮವಾಗಿ ಫೆ.15 ರಿಂದ 19ರವರೆಗೆ ರಾಜ್‌ಕೋಟ್‌ನಲ್ಲಿ ನಡೆಯಲಿದ್ದರೆ, ನಾಲ್ಕನೇ ಟೆಸ್ಟ್ ಪಂದ್ಯ ಫೆ.23 ರಿಂದ 27ರವರೆಗೆ ರಾಂಚಿ ಹಾಗೂ ಮಾ.7 ರಿಂದ 11ರವರೆಗೆ ಐದನೇ ಟೆಸ್ಟ್ ಪಂದ್ಯ ಧರ್ಮಶಾಲಾದಲ್ಲಿ ನಡೆಯಲಿದೆ.
ರೋಹಿತ್ ಶರ್ಮ ನೇತೃತ್ವದ ಭಾರತ ತಂಡ ಜನವರಿ ನಾಲ್ಕರಂದು ಕೇಪ್‌ಟೌನ್‌ನಲ್ಲಿ ಭಾರತ ತಂಡದ ಮೊಟ್ಟಮೊದಲ ಟೆಸ್ಟ್ ಗೆಲುವು ದಾಖಲಿಸಿದ ಬಳಿಕ, ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ (ಡಬ್ಲ್ಯುಟಿಸಿ) ಅಂಕಪಟ್ಟಿಯಲ್ಲಿ ಟೀಮ್ ಇಂಡಿಯಾ ಅಗ್ರಸ್ಥಾನದಲ್ಲಿದೆ.
ಶಿವಂ ದುಬೆ ಮಿಂಚಿನ ಇನ್ನಿಂಗ್ಸ್, ಅಫ್ಘಾನಿಸ್ತಾನ ವಿರುದ್ಧ 6 ವಿಕೆಟ್ ಗೆಲುವು ಸಾಧಿಸಿದ ಭಾರತ!
ಉತ್ತರ ಪ್ರದೇಶದ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ಧ್ರುವ್ ಜುರೇಲ್ ಮೊಟ್ಟಮೊದಲ ಬಾರಿಗೆ ರಾಷ್ಟ್ರೀಯ ತಂಡದ ಕರೆ ಪಡೆದುಕೊಂಡಿದ್ದಾರೆ. ವಿಕೆಟ್ ಕೀಪರ್ ಆಗಿ ಇರುವ ತಂಡದ ಮೂರನೇ ಆಯ್ಕೆಯಾಗಿದ್ದಾರೆ. ಕೆಎಲ್ ರಾಹುಲ್ ಹಾಗೂ ಕೆಎಸ್ ಭರತ್ ಮೊದಲ ಆಯ್ಕೆಯ ಇಬ್ಬರು ವಿಕೆಟ್‌ಕೀಪರ್‌ಗಳಾಗಿದ್ದಾರೆ. ಅನುಭವಿ ಆಟಗಾರರಾದ ಚೇತೇಶ್ವರ ಪೂಜಾರ ಮತ್ತು ಅಜಿಂಕ್ಯ ರಹಾನೆ ಕಡೆಗೆಣಿಸಲಾಗಿದ್ದು, ಇಶಾನ್ ಕಿಶನ್ ಕೂಡ ತಪ್ಪಿಸಿಕೊಂಡಿದ್ದಾರೆ. ಇನ್ನುಳಿದಂತೆ ಬ್ಯಾಟಿಂಗ್ ವಿಭಾಗದಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸ ಮಾಡಿದ ತಂಡವನ್ನೇ ಉಳಿಸಿಕೊಳ್ಳಲಾಗಿದೆ.
IND vs AFG 1st T20I: ಟಾಸ್ ವೇಳೆ ಪ್ಲೇಯಿಂಗ್ ಇಲೆವೆನ್ ಮರೆತು ಹೋದ ರೋಹಿತ್ ಶರ್ಮ
ಉಪನಾಯಕ ಜಸ್ಪ್ರೀತ್ ಬುಮ್ರಾ ನೇತೃತ್ವದ ವೇಗದ ಬೌಲಿಂಗ್ ವಿಭಾಗದಲ್ಲಿ ಅವೇಶ್ ಖಾನ್ ಅವರನ್ನು ಸೇರಿಸಲಾಗಿದೆ. ಮೊಹಮ್ಮದ್ ಸಿರಾಜ್ ಮತ್ತು ಮುಖೇಶ್ ಕುಮಾರ್ ಇತರ ವೇಗದ ಬೌಲಿಂಗ್ ಆಯ್ಕೆಯಗಳಾಗಿದ್ದಾರೆ. ತವರಿನ ಪರಿಸ್ಥಿತಿಗಳಲ್ಲಿ ಇಂಗ್ಲೆಂಡ್ ತಂಡದ ಬ್ಯಾಟಿಂಗ್ ವಿಭಾಗ ಕಟ್ಟಿಹಾಕಲು ಸ್ಪಿನ್ ಬೌಲಿಂಗ್ ಮೇಲೆ ಹೆಚ್ಚಿನ ಅವಲಂಬನೆ ಇರಿಸಲಾಗಿದೆ. ಆರ್.ಅಶ್ವಿನ್, ರವೀಂದ್ರ ಜಡೇಜಾ ಮತ್ತು ಅಕ್ಷರ್ ಪಟೇಲ್ ಅವರೊಂದಿಗೆ ಕುಲದೀಪ್ ಯಾದವ್ ಅವರನ್ನೂ ತಂಡಕ್ಕೆ ಆಯ್ಕೆ ಮಾಡಲಾಗಿದೆ.
ರೋಹಿತ್ ಶರ್ಮಾ (ನಾಯಕ ), ಶುಭ್‌ಮನ್ ಗಿಲ್, ಯಶಸ್ವಿಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿ.ಕೀ), ಕೆಎಸ್ ಭರತ್ (ವಿ.ಕೀ), ಧ್ರುವ್ ಜುರೆಲ್ (ವಿ.ಕೀ), ಆರ್ ಅಶ್ವಿನ್, ಆರ್ ಜಡೇಜಾ, ಅಕ್ಸರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್. ಸಿರಾಜ್, ಮುಖೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಅವೇಶ್ ಖಾನ್.
🚨 NEWS 🚨's squad for the first two Tests against England announced 🔽
Rohit Sharma (C ), S Gill, Y Jaiswal, Virat Kohli, S Iyer, KL Rahul (wk), KS Bharat (wk), Dhruv Jurel (wk), R Ashwin, R Jadeja, Axar Patel, Kuldeep Yadav, Mohd. Siraj, Mukesh Kumar, Jasprit…