ಬೌಂಡರಿ ಲೈನ್‌ನಲ್ಲಿ ಕ್ಯಾಚ್ ಹಿಡಿದು ವಿಶ್ವಕಪ್ ಗೆಲ್ಲಿಸಿದ ತುಳುನಾಡಿನ ಅಳಿಯ ಸೂರ್ಯಕುಮಾರ್ ಯಾದವ್!

By Naveen Kodase  |  First Published Jul 9, 2024, 12:24 PM IST

ಟೀಂ ಇಂಡಿಯಾ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ತಮ್ಮ ಪತ್ನಿ ದೇವಿಶಾ ಶೆಟ್ಟಿ ಜತೆಗೂಡಿ ಉಡುಪಿಯ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಗಮನ ಸೆಳೆದಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ


ಉಡುಪಿ: ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ನಿರ್ಣಾಯಕ ಘಟ್ಟದಲ್ಲಿ ಅತ್ಯದ್ಭುತ ಕ್ಯಾಚ್ ಹಿಡಿಯುವ ಮೂಲಕ ಟೀಂ ಇಂಡಿಯಾ ಚಾಂಪಿಯನ್ ಆಗುವಲ್ಲಿ ಪ್ರಮುಖ ವಹಿಸಿದ್ದ ಸೂರ್ಯಕುಮಾರ್ ಯಾದವ್ ಇದೀಗ ಉಡುಪಿಗೆ ಭೇಟಿ ನೀಡಿ ಗಮನ ಸೆಳೆದಿದ್ದಾರೆ. ಕರ್ನಾಟಕದ ಅಳಿಯ ಸೂರ್ಯಕುಮಾರ್ ಯಾದವ್‌, ಇಲ್ಲಿನ ಕಾಪು ಶ್ರೀ ಮಾರಿಕಾಂಬ ದೇವಸ್ಥಾನಕ್ಕೆ ಭೇಟಿ ನೀಡಿ ಗಮನ ಸೆಳೆದ

ಹೌದು, ಸೂರ್ಯಕುಮಾರ್ ಯಾದವ್, ಮಂಗಳೂರು ಮೂಲದ ದೇವಿಶಾ ಶೆಟ್ಟಿಯನ್ನು ಮದುವೆಯಾಗಿದ್ದು, ಇದೀಗ ಟಿ20 ವಿಶ್ವಕಪ್ ಗೆಲುವಿನ ಬಳಿಕ ರಾಜ್ಯದ ಉಡುಪಿಗೆ ಭೇಟಿ ನೀಡಿದ್ದಾರೆ. ಇಲ್ಲಿನ ಕಾಪು ಹೊಸ ಮಾರಿಗುಡಿಗೆ ಸೂರ್ಯಕುಮಾರ್ ಯಾದವ್ ಪತ್ನಿ ದೇವಿಶಾ ಶೆಟ್ಟಿ ಜತೆ ಆಗಮಿಸಿ, ಕಾಪು ಮಾರಿಯಮ್ಮನ ದರ್ಶನ ಪಡೆದರು. ಸೂರ್ಯಕುಮಾರ್ ಯಾದವ್ ದಂಪತಿ ದೇವಸ್ಥಾನಕ್ಕೆ ಭೇಟಿ ನೀಡುವಾಗ ಅವರಿಗೆ ಭವ್ಯ ಸ್ವಾಗತ ನೀಡಲಾಯಿತು. 

Tap to resize

Latest Videos

undefined

ಉಡುಪಿಯ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನವವು ಸದ್ಯ ನಿರ್ಮಾಣ ಹಂತದಲ್ಲಿದೆ. ಸುಮಾರು 40 ಕೋಟಿ ರುಪಾಯಿ ವೆಚ್ಚದಲ್ಲಿ ಇಳಕಲ್ ಶಿಲೆಯನ್ನು ಬಳಸಿ ವಿಶಿಷ್ಟ ದೇವಾಲಯ ನಿರ್ಮಾಣವಾಗುತ್ತಿದೆ. ಈಗಾಗಲೇ ದೇವಸ್ಥಾನದ ಗರ್ಭಗುಡಿ, ಉಚ್ಛಂಗಿ ಗುಡಿ, ಸುತ್ತುಪೌಳಿ ಕಾಮಗಾರಿ ಶೇ.90 ಪೂರ್ಣಗೊಂಡಿದ್ದು, ಮುಂಬರುವ ಮಾರ್ಚ್ 02ರಂದು ಬ್ರಹ್ಮ ಕಲಶ ಮಹೋತ್ಸವ ನಡೆಯಲಿದೆ. ಇನ್ನು ಸೂರ್ಯಕುಮಾರ್ ಯಾದವ್ ದೇವಸ್ಥಾನ ನಿರ್ಮಾಣ, ಶಿಲ್ಪಕಲೆಯ ಕೆತ್ತನೆ ಬಗ್ಗೆ ಮಾಹಿತಿ ಪಡೆದುಕೊಂಡರು. 

ಸೂರ್ಯ ತುಳುನಾಡಿನ ಅಳಿಯ:

ಉತ್ತರ ಪ್ರದೇಶ ಮೂಲದ ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್, ನಮ್ಮ ತುಳುನಾಡಿನ ಅಳಿಯ ಎನ್ನುವುದು ಬಹುತೇಕ ಮಂದಿಗೆ ಗೊತ್ತಿಲ್ಲ. ದೇವಿಶಾ ಶೆಟ್ಟಿ ಪೋಷಕರು ತುಳುನಾಡಿನ ಮೂಲದವರಾಗಿದ್ದಾರೆ. ಈ ಹಿಂದೆ ದೇವಿಶಾ ಶೆಟ್ಟಿ, ತಮ್ಮ ಪತಿಯ ಪ್ರದರ್ಶನದ ಕುರಿತಂತೆ ತುಳುವಿನಲ್ಲಿಯೇ ವಿಶ್ ಮಾಡಿದ ಸೋಷಿಯಲ್ ಮೀಡಿಯಾ ಪೋಸ್ಟ್‌ಗಳು ಸಾಕಷ್ಟು ವೈರಲ್ ಆಗಿತ್ತು.
 

click me!