ಆಸ್ಟ್ರೇಲಿಯಾ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಕಟ; ರಾಹುಲ್‌ಗೆ ಉಪನಾಯಕ ಪಟ್ಟ!

Published : Oct 26, 2020, 09:02 PM ISTUpdated : Oct 26, 2020, 09:09 PM IST
ಆಸ್ಟ್ರೇಲಿಯಾ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಕಟ; ರಾಹುಲ್‌ಗೆ ಉಪನಾಯಕ ಪಟ್ಟ!

ಸಾರಾಂಶ

ಕೊರೋನಾ ವೈರಸ್‌ನಿಂದ ಸ್ಥಗಿತಗೊಂಡಿದ್ದ ಕ್ರಿಕೆಟ್ ಟೂರ್ನಿ ಐಪಿಎಲ್‌ನೊಂದಿಗೆ ಆರಂಭಗೊಂಡಿದೆ. ಇದೀಗ ಆಸ್ಟ್ರೇಲಿಯಾ ಪ್ರವಾಸಕ್ಕೆ ಬಿಸಿಸಿಐ ಟೆಸ್ಟ್, ಏಕದಿನ ಹಾಗೂ ಟಿ20 ತಂಡ ಪ್ರಕಟಸಿದೆ. ರೋಹಿತ್ ಶರ್ಮಾ ಬದಲು, ಕೆಎಲ್ ರಾಹುಲ್‌ಗೆ ಉಪನಾಯಕ ಪಟ್ಟ ನೀಡಲಾಗಿದೆ

ಮುಂಬೈ(ಅ.26): ಐಪಿಎಲ್ ಟೂರ್ನಿ ರೋಚಕ ಘಟ್ಟ ತಲುಪಿದೆ. ಲೀಗ್ ಹಂತದ ಪಂದ್ಯಗಳು ಅಂತಿಮ ಹಂತದಲ್ಲಿವೆ. ಇದರ ಬೆನ್ನಲ್ಲೇ ಬಿಸಿಸಿಐ ಇದೀಗ ಆಸ್ಟ್ರೇಲಿಯಾ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಕಟಿಸಿದೆ. ಈ ಬಾರಿ ತಂಡದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡಲಾಗಿದ್ದು, ಕನ್ನಡಿಗ ಕೆಎಲ್ ರಾಹುಲ್‌ಗೆ ಉಪನಾಯಕ ಪಟ್ಟ ನೀಡಲಾಗಿದೆ.

ಟೀಂ ಇಂಡಿಯಾ ಆಸೀಸ್ ಪ್ರವಾಸಕ್ಕೆ ನ್ಯೂ ಸೌತ್ ವೇಲ್ಸ್ ಒಪ್ಪಿಗೆ.

ಟಿ20 ಹಾಗೂ ಏಕದಿನ ತಂಡಕ್ಕೆ ಕೆಎಲ್ ರಾಹುಲ್ ಉಪನಾಯಕನಾಗಿ ಆಯ್ಕೆಯಾಗಿದ್ದಾರೆ. ಟೆಸ್ಟ್ ತಂಡದ ಉಪನಾಯಕ ಪಟ್ಟ ಎಂದಿನಂತೆ ಅಜಿಂಕ್ಯ ರಹಾನೆಗೆ ನೀಡಲಾಗಿದೆ. ಇಂಜುರಿಗೆ ತುತ್ತಾಗಿರುವ ರೋಹಿತ್ ಶರ್ಮಾಗೆ ಸಂಪೂರ್ಣ ವಿಶ್ರಾಂತಿ ನೀಡಲಾಗಿದೆ. ಇನ್ನು ವೇಗಿ ಇಶಾಂತ್ ಶರ್ಮಾ ಹಾಗೂ ರೋಹಿತ್ ಶರ್ಮಾ ಫಿಟ್ನೆಸ್ ಕುರಿತು ಬಿಸಿಸಿಐ ಪರಿಶೀಲನೆ ನಡೆಸಲಿದೆ ಎಂದು ಆಯ್ಕೆ ಸಮಿತಿ ಹೇಳಿದೆ.

 

ಐಪಿಎಲ್ ಟೂರ್ನಿಯಲ್ಲಿ ಉತ್ತಮ ಬೌಲಿಂಗ್ ಪ್ರದರ್ಶನ ನೀಡುತ್ತಿರುವವ ನವದೀಪ್ ಸೈನಿ ಹಾಗೂ ಮೊಹಮ್ಮದ್ ಸಿರಾಜ್ ಟೆಸ್ಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಟಿ20 ತಂಡಕ್ಕೆ ಕೆಕೆಆರ್ ಪರ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡುತ್ತಿರುವ ವರುಣ್ ಚಕ್ರವರ್ತಿ ಟಿ20 ತಂಡಕ್ಕೆ ಆಯ್ಕೆಯಾಗಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಕ್ಷಿಣ ಆಫ್ರಿಕಾ ಎದುರಿನ ಏಕದಿನ ಸರಣಿ ಗೆಲುವಿನ ಬೆನ್ನಲ್ಲೇ ಐಸಿಸಿ ರ್‍ಯಾಂಕಿಂಗ್‌ ಪ್ರಕಟ; ಕೊಹ್ಲಿಗೆ ಜಾಕ್‌ಪಾಟ್!
ತಲೆಗೆ 20 ಹೊಲಿಗೆ, ಭುಜಕ್ಕೆ ಬಲವಾದ ಪೆಟ್ಟು! ಕ್ರಿಕೆಟ್ ತಂಡಕ್ಕೆ ಆಯ್ಕೆ ಮಾಡದ್ದಕ್ಕೆ ಕೋಚ್‌ ಮೇಲೆ ಆಟಗಾರರ ಮಾರಣಾಂತಿಕ ಹಲ್ಲೆ!