Ind vs Eng ಇಂಗ್ಲೆಂಡ್‌ಗೆ ಹೀನಾಯ ಸೋಲು, ಟಿ20 ಸರಣಿ ಟೀಂ ಇಂಡಿಯಾ ಪಾಲು..!

Published : Jul 09, 2022, 10:40 PM ISTUpdated : Jul 09, 2022, 10:48 PM IST
 Ind vs Eng ಇಂಗ್ಲೆಂಡ್‌ಗೆ ಹೀನಾಯ ಸೋಲು, ಟಿ20 ಸರಣಿ ಟೀಂ ಇಂಡಿಯಾ ಪಾಲು..!

ಸಾರಾಂಶ

* ಇಂಗ್ಲೆಂಡ್ ಬಗ್ಗುಬಡಿದು ಟಿ20 ಸರಣಿ ಗೆದ್ದ ಭಾರತ * ಇಂಗ್ಲೆಂಡ್ ಎದುರು ಎರಡನೇ ಟಿ20 ಪಂದ್ಯದಲ್ಲಿ 49 ರನ್‌ಗಳ ಗೆಲುವು * ರೋಹಿತ್ ಶರ್ಮಾ ನೇತೃತ್ವದಲ್ಲಿ ಭಾರತಕ್ಕೆ 14ನೇ ಗೆಲುವು

ಬರ್ಮಿಂಗ್‌ಹ್ಯಾಮ್‌(ಜು..09): ಟೀಂ ಇಂಡಿಯಾ ಬೌಲರ್‌ಗಳ ಮಾರಕ ದಾಳಿಗೆ ತತ್ತರಿಸಿದ ಆತಿಥೇಯ ಇಂಗ್ಲೆಂಡ್ ತಂಡವು ಎರಡನೇ ಟಿ20 ಪಂದ್ಯದಲ್ಲಿ 49 ರನ್‌ಗಳ ಅಂತರದ ಹೀನಾಯ ಸೋಲು ಕಂಡಿದೆ. ಇದರೊಂದಿಗೆ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಇನ್ನೂ ಒಂದು ಪಂದ್ಯ ಭಾಕಿ ಇರುವಂತೆಯೇ ಭಾರತ ತಂಡವು 2-0 ಅಂತರದಲ್ಲಿ ಟಿ20 ಸರಣಿಯನ್ನು ಕೈವಶ ಮಾಡಿಕೊಂಡಿದೆ. ರೋಹಿತ್ ಶರ್ಮಾ ಪೂರ್ಣ ಪ್ರಮಾಣದಲ್ಲಿ ಟೀಂ ಇಂಡಿಯಾ ನಾಯಕರಾಗಿ ಗೆಲುವಿನ ನಾಗಾಲೋಟ ಮುಂದುವರೆಸಿದ್ದು ಭಾರತ ಕ್ರಿಕೆಟ್ ತಂಡವು ದಾಖಲೆಯ 14ನೇ ಟಿ20 ಗೆಲುವು ದಾಖಲಿಸುವಲ್ಲಿ ಯಶಸ್ವಿಯಾಗಿದೆ.   

ಭಾರತ ನೀಡಿದ್ದ 171 ರನ್‌ಗಳ ಸವಾಲಿನ ಗುರಿ ಬೆನ್ನತ್ತಿದ ಇಂಗ್ಲೆಂಡ್ ತಂಡಕ್ಕೆ ಮೊದಲ ಓವರ್‌ನ ಮೊದಲ ಎಸೆತದಲ್ಲೇ ಭುವನೇಶ್ವರ್ ಕುಮಾರ್ ಮತ್ತೊಮ್ಮೆ ಜೇಸನ್ ರಾಯ್ ಅವರನ್ನು ಬಲಿಪಡೆಯುವ ಮೂಲಕ ಆತಿಥೇಯರಿಗೆ ಶಾಕ್ ನೀಡಿದರು. ಇನ್ನು ಇನಿಂಗ್ಸ್‌ನ ಮೂರನೇ ಓವರ್‌ನಲ್ಲಿ ಜೋಸ್ ಬಟ್ಲರ್ ಕೂಡಾ ಭುವನೇಶ್ವರ್ ಕುಮಾರ್‌ಗೆ ವಿಕೆಟ್ ಒಪ್ಪಿಸಿದರು. ಇಂಗ್ಲೆಂಡ್ ತಂಡವು 11 ರನ್‌ ಗಳಿಸುವಷ್ಟರಲ್ಲಿ ಆರಂಭಿಕರಿಬ್ಬರು ಪೆವಿಲಿಯನ್‌ ಸೇರಿದ್ದರು.

ಇನ್ನು ಸ್ಪೋಟಕ ಬ್ಯಾಟಿಂಗ್ ಮೂಲಕ ಅಪಾಯಕಾರಿಯಾಗುವ ಮುನ್ಸೂಚನೆ ನೀಡಿದ್ದ ಲಿಯಾಮ್ ಲಿವಿಂಗ್‌ಸ್ಟೋನ್‌ಗೆ ಜಸ್ಪ್ರೀತ್ ಬುಮ್ರಾ ಪೆವಿಲಿಯನ್ ಹಾದಿ ತೋರಿಸಿದರು. ಲಿವಿಂಗ್‌ಸ್ಟೋನ್ 9 ಎಸೆತಗಳಲ್ಲಿ 3 ಬೌಂಡರಿ ಸಹಿತ 15 ರನ್‌ ಬಾರಿಸಿದ್ದಾಗ ಬುಮ್ರಾ ಎಸೆತ ಮಿಂಚಿನ ಚೆಂಡನ್ನು ಗುರುತಿಸಲಾಗದೇ ಕ್ಲೀನ್‌ ಬೌಲ್ಡ್‌ ಆಗಿ ಪೆವಿಲಿಯನ್ ಸೇರಿದರು. ಇದರ ಬೆನ್ನಲ್ಲೇ ಹ್ಯಾರಿ ಬ್ರೂಕ್ 8 ರನ್‌ ಗಳಿಸಿ ವಿಕೆಟ್ ಒಪ್ಪಿಸಿದರು. ಯುಜುವೇಂದ್ರ ಚಹಲ್ ಬೌಲಿಂಗ್‌ನಲ್ಲಿ ಸಿಕ್ಸರ್ ಸಿಡಿಸುವ ಯತ್ನದಲ್ಲಿ ಸೂರ್ಯಕುಮಾರ್ ಯಾದವ್‌ಗೆ ಕ್ಯಾಚಿತ್ತು ಪೆವಿಲಿಯನ್‌ ಸೇರಿದರು. ಇನ್ನು ಡೇವಿಡ್ ಮಲಾನ್‌ 19 ರನ್ ಗಳಿಸಿ ಚಹಲ್‌ಗೆ ಎರಡನೇ ಬಲಿಯಾದರು. ಇನ್ನು ಕೊನೆಯಲ್ಲಿ ಮೋಯಿನ್ ಅಲಿ(35) ಹಾಗೂ ಡೇವಿಡ್ ವಿಲ್ಲಿ(33*) ದಿಟ್ಟ ಬ್ಯಾಟಿಂಗ್ ನಡೆಸುವ ಮೂಲಕ ಪ್ರತಿರೋಧ ತೋರಿದರಾದರೂ, ತಂಡವನ್ನು ಸೋಲಿನಿಂದ ಪಾರು ಮಾಡಲು ಸಾಧ್ಯವಾಗಲಿಲ್ಲ. 

Ind vs Eng: ಜಡೇಜಾ ಬ್ಯಾಟಿಂಗ್ ಝಲಕ್, ಇಂಗ್ಲೆಂಡ್‌ಗೆ ಸ್ಪರ್ಧಾತ್ಮಕ ಗುರಿ

ಭಾರತ ಕ್ರಿಕೆಟ್ ತಂಡದ ಪರ ವೇಗಿ ಭುವನೇಶ್ವರ್ ಕುಮಾರ್ 3 ವಿಕೆಟ್ ಕಬಳಿಸಿದರೇ, ಜಸ್ಪ್ರೀತ್ ಬುಮ್ರಾ, ಯುಜುವೇಂದ್ರ ಚಹಲ್, ಹರ್ಷಲ್ ಪಟೇಲ್ ತಲಾ 2 ವಿಕೆಟ್ ಪಡೆದರು. ಇನ್ನು ಹಾರ್ದಿಕ್ ಪಾಂಡ್ಯ ಒಂದು ವಿಕೆಟ್ ಪಡೆದರು..

ಇದಕ್ಕೂ ಮೊದಲು ಟಾಸ್ ಸೋತು ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ಟೀಂ ಇಂಡಿಯಾಗೆ ನಾಯಕ ರೋಹಿತ್ ಶರ್ಮಾ ಹಾಗೂ ರಿಷಭ್ ಪಂತ್ ಜೋಡಿ 49 ರನ್‌ಗಳ ಜತೆಯಾಟವಾಡುವ ಮೂಲಕ ಉತ್ತಮ ಆರಂಭ ಒದಗಿಸಿಕೊಟ್ಟರು. ರೋಹಿತ್ ಶರ್ಮಾ 31 ರನ್‌ ಗಳಿಸಿದರೇ, ರಿಷಭ್ ಪಂತ್ 26 ರನ್ ಬಾರಿಸಿದರು. ಇನ್ನು ಕೊನೆಯಲ್ಲಿ ರವೀಂದ್ರ ಜಡೇಜಾ 46 ರನ್ ಬಾರಿಸುವ ಮೂಲಕ ತಂಡ 170 ರನ್‌ ಕಲೆಹಾಕುವಲ್ಲಿ ಯಶಸ್ವಿಯಾದರು.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ತಲೆಗೆ 20 ಹೊಲಿಗೆ, ಭುಜಕ್ಕೆ ಬಲವಾದ ಪೆಟ್ಟು! ಕ್ರಿಕೆಟ್ ತಂಡಕ್ಕೆ ಆಯ್ಕೆ ಮಾಡದ್ದಕ್ಕೆ ಕೋಚ್‌ ಮೇಲೆ ಆಟಗಾರರ ಮಾರಣಾಂತಿಕ ಹಲ್ಲೆ!
ಆ ಒಂದು ಫೋಟೋ: ಪಾಪರಾಜಿಗಳ ಮೇಲೆ ಹಾರ್ದಿಕ್ ಪಾಂಡ್ಯ ಕೆಂಡಾಮಂಡಲ!