
ಲಂಡನ್(ಸೆ.26): 2022ರಲ್ಲಿ ಭಾರತ ತಂಡ ಇಂಗ್ಲೆಂಡ್‌ಗೆ ತೆರಳಲಿದ್ದು, ಒಂದು ಟೆಸ್ಟ್ ಪಂದ್ಯವನ್ನು ಆಡಲು ಒಪ್ಪಿಕೊಂಡಿದೆ ಎಂದು ಪ್ರತಿಷ್ಠಿತ ಕ್ರಿಕೆಟ್ ವೆಬ್‌ಸೈಟ್‌ವೊಂದು ವರದಿ ಮಾಡಿದೆ.
ಈ ಪಂದ್ಯವನ್ನು ಕೋವಿಡ್(COVID 19)ನಿಂದಾಗಿ ದಿಢೀರ್ ರದ್ದಾದ 5ನೇ ಹಾಗೂ ಅಂತಿಮ ಟೆಸ್ಟ್ ಎಂದು ಪರಿಗಣಿಸಲಾಗುತ್ತದೆಯೋ ಇಲ್ಲವೇ ಪ್ರತ್ಯೇಕ ಒಂದು ಪಂದ್ಯದ ಸರಣಿ ಎಂದು ಪರಿಗಣಿಸಲಾಗುತ್ತದೆಯೋ ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ. ಆದರೆ ಪಂದ್ಯ ರದ್ದಾಗಿದ್ದರಿಂದ ಇಂಗ್ಲೆಂಡ್ ಕ್ರಿಕೆಟ್ ಮಂಡಳಿ(ಇಸಿಬಿ)ಗೆ ಆಗಿರುವ ಆರ್ಥಿಕ ನಷ್ಟವನ್ನು ತುಂಬಿಕೊಡಲು ಆಯೋಜಿಸುತ್ತಿರುವ ಪಂದ್ಯವಾಗಲಿದೆ.
IPL 2021 ಎಂದೆಂದಿಗೂ ನಮ್ದು ಆರ್‌ಸಿಬಿಗೆ ಸಪೋರ್ಟ್ ಎಂದ ಕಿಚ್ಚ ಸುದೀಪ್..!
2022ರಲ್ಲಿ ಟೀಂ ಇಂಡಿಯಾ(Team India) ಸೀಮಿತ ಓವರ್‌ಗಳ ಸರಣಿಯನ್ನಾಡಲು ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದೆ. ಈ ವೇಳೆ 3 ಪಂದ್ಯಗಳ ಏಕದಿನ ಸರಣಿ ಹಾಗೂ 3 ಪಂದ್ಯಗಳ ಟಿ20 ಸರಣಿಯನ್ನಾಡಲಿದೆ. ಈ ವೇಳೆಯೇ ನಷ್ಟ ಸರಿದೂಗಿಸಲು 2 ಹೆಚ್ಚುವರಿ ಟಿ20 ಅಥವಾ ಒಂದು ಟೆಸ್ಟ್ ಪಂದ್ಯವನ್ನಾಡುವ ಕುರಿತಂತೆ ಇಂಗ್ಲೆಂಡ್ ಕ್ರಿಕೆಟ್ ಮಂಡಳಿ(England Cricket Board)ಗೆ ಬಿಸಿಸಿಐ ಆಫರ್ ನೀಡಿತ್ತು. ಇದಕ್ಕೆ ಇಸಿಬಿ ಒಂದು ಟೆಸ್ಟ್ ಪಂದ್ಯವನ್ನಾಡಲು ಒಪ್ಪಿಕೊಂಡಿದೆ ಎಂದು ವರದಿಯಾಗಿದೆ.
IPL 2021: ಮುಂಬೈ ಎದುರಿನ ಪಂದ್ಯದಲ್ಲಿ ಅಪರೂಪದ ದಾಖಲೆ ಬರೆಯಲು ವಿರಾಟ್ ಕೊಹ್ಲಿ ರೆಡಿ..!
ವಿರಾಟ್ ಕೊಹ್ಲಿ(Virat Kohli) ನೇತೃತ್ವದ ಟೀಂ ಇಂಡಿಯಾ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಬಳಿಕ ಇಂಗ್ಲೆಂಡ್ ಎದುರು 5 ಪಂದ್ಯಗಳ ಟೆಸ್ಟ್ ಸರಣಿಯನ್ನಾಡಲು ವೇಳಾಪಟ್ಟಿ ನಿಗದಿಯಾಗಿತ್ತು. ಮೊದಲ ಪಂದ್ಯ ಡ್ರಾನಲ್ಲಿ ಅಂತ್ಯವಾಗಿತ್ತು. ಇನ್ನು ಲಾರ್ಡ್ಸ್‌ನಲ್ಲಿ ಎರಡನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಗೆಲುವು ದಾಖಲಿಸುವ ಮೂಲಕ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿತ್ತು. ಇನ್ನು ಲೀಡ್ಸ್‌ನಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ಗೆಲುವು ದಾಖಲಿಸುವ ಮೂಲಕ ಸರಣಿಯಲ್ಲಿ 1-1ರ ಸಮಬಲ ಸಾಧಿಸಿತ್ತು. ಇನ್ನು ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ರೋಚಕ ಗೆಲುವು ಸಾಧಿಸುವ ಮೂಲಕ ಸರಣಿಯಲ್ಲಿ 2-1ರ ಮುನ್ನಡೆ ಸಾಧಿಸಿತ್ತು. ಇನ್ನು ಸೆಪ್ಟೆಂರ್ 10ರಿಂದ ಆರಂಭವಾಗಬೇಕಿದ್ದ ಮ್ಯಾಂಚೆಸ್ಟರ್ ಟೆಸ್ಟ್ ಪಂದ್ಯಕ್ಕೂ ಭಾರತದ ಪಾಳಯದಲ್ಲಿ ಕೋವಿಡ್ ಭೀತಿ ಎದುರಾದ ಹಿನ್ನೆಲೆಯಲ್ಲಿ ಕೊನೆಯ ಟೆಸ್ಟ್ ಪಂದ್ಯವನ್ನು ರದ್ದು ಪಡಿಸಲಾಯಿತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.