* ತವರಿನ ವೇಳಾಪಟ್ಟಿ ಪ್ರಕಟಿಸಿದ ಐರ್ಲೆಂಡ್ ಕ್ರಿಕೆಟ್ ಮಂಡಳಿ
* ಜೂನ್ ತಿಂಗಳಿನಲ್ಲಿ ಐರ್ಲೆಂಡ್ ಪ್ರವಾಸ ಮಾಡಲಿರುವ ಟೀಂ ಇಂಡಿಯಾ
* ಐರ್ಲೆಂಡ್ ಪ್ರವಾಸದಲ್ಲಿ ಎರಡು ಪಂದ್ಯಗಳ ಟಿ20 ಸರಣಿಯನ್ನಾಡಲಿರುವ ಭಾರತ
ನವದೆಹಲಿ(ಮಾ.02): ಈ ವರ್ಷ ಜೂನ್‌ನಲ್ಲಿ ಭಾರತ ಕ್ರಿಕೆಟ್ ತಂಡವು (Indian Cricket Team) ಐರ್ಲೆಂಡ್ ಪ್ರವಾಸಕ್ಕೆ ತೆರಳಲಿದ್ದು, ಈ ವೇಳೆ 2 ಟಿ20 ಪಂದ್ಯಗಳ ಸರಣಿಯಲ್ಲಿ ಪಾಲ್ಗೊಳ್ಳಲಿದೆ. ಮಂಗಳವಾರ ಐರ್ಲೆಂಡ್ ಕ್ರಿಕೆಟ್ ಸಂಸ್ಥೆ (Ireland Cricket) ಈ ವಿಷಯವನ್ನು ಖಚಿತಪಡಿಸಿದೆ. ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್ (ICC T20 World Cup) ಟೂರ್ನಿಗೂ ಮುನ್ನ ಟೀಂ ಇಂಡಿಯಾ, ಐರ್ಲೆಂಡ್‌ನಲ್ಲಿ ಎರಡು ಪಂದ್ಯಗಳ ಚುಟುಕು ಸರಣಿಯನ್ನಾಡಲಿದೆ.
ಮೊದಲ ಟಿ20 ಪಂದ್ಯ ಜೂನ್ 26ರಂದು ನಡೆಯಲಿದ್ದು, 2ನೇ ಪಂದ್ಯ ಜೂನ್ 28ಕ್ಕೆ ನಿಗದಿಯಾಗಿದೆ. ಈ ಸರಣಿ ಬಳಿಕ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ (Team India) ಇಂಗ್ಲೆಂಡ್‌ಗೆ ತೆರಳಲಿದ್ದು, ಬಾಕಿ ಇರುವ ಒಂದು ಟೆಸ್ಟ್ ಹಾಗೂ 5 ಪಂದ್ಯಗಳ ಟಿ20 ಸರಣಿಯಲ್ಲಿ ಪಾಲ್ಗೊಳ್ಳಲಿದೆ. ಐರ್ಲೆಂಡ್ ತಂಡದ ವೇಳಾಪಟ್ಟಿ ಪ್ರಕಟಗೊಂಡಿದ್ದು, ಐರ್ಲೆಂಡ್ ಕ್ರಿಕೆಟ್ ತಂಡವು ತವರಿನಲ್ಲಿ ಒಟ್ಟು 15 ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳನ್ನು ಆಡಲಿದ್ದು, ಈ ಪೈಕಿ 4 ಟೆಸ್ಟ್ ಆಡುವ ರಾಷ್ಟ್ರಗಳ ವಿರುದ್ದ ಸೀಮಿತ ಓವರ್‌ಗಳ ಸರಣಿಯನ್ನು ಆಡಲಿದೆ. ಐರ್ಲೆಂಡ್ ತಂಡವು ಎರಡು ತಿಂಗಳ ಅವಧಿಯಲ್ಲಿ ಭಾರತ, ನ್ಯೂಜಿಲೆಂಡ್, ದಕ್ಷಿಣ ಆಫ್ರಿಕಾ ಹಾಗೂ ಆಫ್ಘಾನಿಸ್ತಾನ ಎದುರು ಸೀಮಿತ ಓವರ್‌ಗಳ ಸರಣಿಯನ್ನಾಡಲಿದೆ.
2018ರ ಬಳಿಕ ಭಾರತ ಕ್ರಿಕೆಟ್ ತಂಡವು ಐರ್ಲೆಂಡ್ ಪ್ರವಾಸ ಮಾಡಲು ಸಜ್ಜಾಗಿದ್ದು, ಟೀಂ ಇಂಡಿಯಾವನ್ನು ಸ್ವಾಗತಿಸಲು ನಾವು ಎದುರು ನೋಡುತ್ತಿದ್ದೇವೆ ಎಂದು ಐರ್ಲೆಂಡ್ ಕ್ರಿಕೆಟ್ ಮಂಡಳಿಯ ಕಾರ್ಯನಿರ್ವಾಹಕಾಧಿಕಾರಿ ವಾರೆನ್ ಡಿಟ್ರಾಮ್ ತಿಳಿಸಿದ್ದಾರೆ. ಈ ಮೊದಲು ಭಾರತ ಕ್ರಿಕೆಟ್ ತಂಡವು 2018ರಲ್ಲಿ ಎರಡು ಪಂದ್ಯಗಳ ಟಿ20 ಸರಣಿಯನ್ನಾಡಲು ಮೊದಲ ಬಾರಿಗೆ ಐರ್ಲೆಂಡ್ ಪ್ರವಾಸವನ್ನು ಕೈಗೊಂಡಿತ್ತು. ಆಗ ಕೂಡಾ ಐರ್ಲೆಂಡ್ ಸರಣಿ ಮುಗಿಸಿ ಟೀಂ ಇಂಡಿಯಾ ಇಂಗ್ಲೆಂಡ್ ಪ್ರವಾಸವನ್ನು ಕೈಗೊಂಡಿತ್ತು. ಐರ್ಲೆಂಡ್ ಎದುರಿನ ಎರಡು ಪಂದ್ಯಗಳ ಟಿ20 ಸರಣಿಯನ್ನು ಟೀಂ ಇಂಡಿಯಾ ಅನಾಯಾಸವಾಗಿ ಗೆದ್ದು ಬೀಗಿತ್ತು. ಟೀಂ ಇಂಡಿಯಾ ಹಾಲಿ ನಾಯಕ ರೋಹಿತ್ ಶರ್ಮಾ (Rohit Sharma) ಐರ್ಲೆಂಡ್ ಎದುರಿನ ಎರಡನೇ ಟಿ20 ಪಂದ್ಯದಲ್ಲಿ ಆಕರ್ಷಕ 97 ರನ್ ಬಾರಿಸಿದ್ದರು.
📡: MEN’S INTERNATIONALS
This summer will be a ‘Season of Stars’ as India, New Zealand and Afghanistan tour Ireland, while we will play South Africa in Bristol.
We’re set for the biggest home international season in Ireland ever!
➡️ https://t.co/hHMk6Dgscj ☘️🏏 pic.twitter.com/feD7eUkZ1J
ಐಪಿಎಲ್ ಟೈಂ ಔಟ್ 3 ನಿಮಿಷಕ್ಕೆ ಹೆಚ್ಚಳ ?
ಮುಂಬೈ: 2022ರ ಐಪಿಎಲ್‌ನಲ್ಲಿ (IPL 2022) ಪಂದ್ಯಗಳ ನಡುವಿನ ಟೈಂ ಔಟ್ ಅವಧಿ ಬದಲಾವಣೆಯಾಗುವ ಸಾಧ್ಯತೆ ಇದೆ. ವರದಿಗಳ ಪ್ರಕಾರ ಈ ಬಾರಿ ಐಪಿಎಲ್‌ನಲ್ಲಿ ಪ್ರತಿ ಪಂದ್ಯದಲ್ಲಿ ಎರಡೂವರೆ ನಿಮಿಷದ ಬದಲು ಮೂರು ನಿಮಿಷಗಳ 4 ಟೈಂ ಔಟ್‌ಗಳು(ಪಂದ್ಯದಲ್ಲಿ ಒಟ್ಟು 12 ನಿಮಿಷ) ಇರಲಿವೆ ಎನ್ನಲಾಗಿದೆ. ಇದರಿಂದ ಪ್ರಸಾರಕರಿಗೆ ಹೆಚ್ಚು ಜಾಹೀರಾತುಗಳನ್ನು ಪ್ರಸಾರ ಮಾಡಲು ಅನುಕೂಲವಾಗಲಿದೆ.
IPL 2022: ಐಪಿಎಲ್ ತೊರೆದು ಗುಜರಾತ್ ಟೈಟಾನ್ಸ್ ಫ್ಯಾನ್ಸ್‌ಗೆ ಭಾವನಾತ್ಮಕ ಪತ್ರ ಬರೆದ ಜೇಸನ್ ರಾಯ್
ಬಹುನಿರೀಕ್ಷಿತ 15ನೇ ಆವೃತ್ತಿಯ ಐಪಿಎಲ್ ಟೂರ್ನಿಯು ಮಾರ್ಚ್ 26ರಿಂದ ಆರಂಭವಾಗಲಿದೆ. 2022ನೇ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಒಟ್ಟು 10 ತಂಡಗಳು ಪಾಲ್ಗೊಳ್ಳುತ್ತಿದ್ದು, ಲೀಗ್ ಹಂತದಲ್ಲೇ 70 ಪಂದ್ಯಗಳು ನಡೆಯಲಿವೆ. ಈ ಬಾರಿಯ ಐಪಿಎಲ್ ಟೂರ್ನಿಯು ಮಹಾರಾಷ್ಟ್ರದಲ್ಲಿನ 4 ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಮುಂಬೈನಲ್ಲಿರುವ ವಾಂಖೆಡೆ ಮೈದಾನ, ಡಿ.ವೈ. ಪಾಟೀಲ್ ಮೈದಾನ ಹಾಗೂ ಬ್ರಬೋರ್ನ್ ಮೈದಾನದಲ್ಲಿ ಒಟ್ಟು 55 ಐಪಿಎಲ್ ಲೀಗ್ ಪಂದ್ಯಗಳು ನಡೆದರೆ, ಇನ್ನುಳಿದ 15 ಲೀಗ್ ಪಂದ್ಯಗಳಿಗೆ ಪುಣೆ ಮೈದಾನ ಆತಿಥ್ಯವನ್ನು ವಹಿಸಲಿದೆ. ಇನ್ನು ಪ್ಲೇ ಆಫ್ ಪಂದ್ಯಗಳು ಎಲ್ಲಿ ನಡೆಯಲಿದೆ ಎನ್ನುವುದರ ಬಗ್ಗೆ ಬಿಸಿಸಿಐ ಇನ್ನೂ ತನ್ನ ಅಧಿಕೃತ ತೀರ್ಮಾನವನ್ನು ಪ್ರಕಟಿಸಿಲ್ಲ.