ಟೀಂ ಇಂಡಿಯಾದ ಅತ್ಯಂತ ಯಶಸ್ವಿ ನಾಯಕ ಎಂದೇ ಗುರುತಿಸಿಕೊಂಡಿರುವ ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 15 ವರ್ಷ ಪೂರ್ಣಗೊಳಿಸಿದ್ದಾರೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ..
ನವದೆಹಲಿ[ಡಿ.24]: ವೃತ್ತಿ ಜೀವನದಲ್ಲಿ ಎರಡು ಬಾರಿ ವಿಶ್ವಕಪ್ ಮುಡಿಗೇರಿಸಿಕೊಳ್ಳುವ ಸಂಭ್ರಮ ಅನುಭವಿಸಿದ ‘ಕೂಲ್ ಕ್ಯಾಪ್ಟನ್’ ಖ್ಯಾತಿಯ ಮಹೇಂದ್ರ ಸಿಂಗ್ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿ 15 ವರ್ಷ ಪೂರೈಸಿದ್ದಾರೆ. ಕಿಂಗ್ಸ್ ಇಲೆವನ್ ಪಂಜಾಬ್ ಮಾಡಿರುವ ಟ್ವೀಟ್ ಈಗ ಅಭಿಮಾನಿಗಳ ಮನಗೆದ್ದಿದೆ
📂 Cricket
└📁 INDIA
└📁 MS Dhoni
└📁 Potential replacements
└⚠ Folder empty
1⃣5⃣ years ago, we learnt to play the Mahi way! 🤩 pic.twitter.com/N3yIP3NR4e
ಆಸ್ಟ್ರೇಲಿಯಾ ಸರಣಿಗೆ ಟೀಂ ಇಂಡಿಯಾ ಪ್ರಕಟ; ಕನ್ನಡಿಗ ಮಯಾಂಕ್ ಔಟ್!
ಸೋಮವಾರ ಇಂಥದ್ದೊಂದು ಸಾರ್ಥಕ ವೃತ್ತಿಯಲ್ಲಿ ಮುಂದುವರಿದ ಖುಷಿಗೆ ಕಾರಣರಾದ ಧೋನಿ ಅವರು 2004ರಲ್ಲಿ, ಸೌರವ್ ಗಂಗೂಲಿ ಅವರ ನಾಯಕತ್ವದ ತಂಡದಲ್ಲಿ ಅವಕಾಶ ಗಿಟ್ಟಿಸಿಕೊಂಡು ಬಾಂಗ್ಲಾದೇಶದ ವಿರುದ್ಧ ಆಡಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. ಭಾರತ ತಂಡದ ಪರ 90 ಟೆಸ್ಟ್, 350 ಏಕದಿನ ಮತ್ತು 98 ಟಿ20 ಪಂದ್ಯಗಳನ್ನು ಆಡಿರುವ ಧೋನಿ ಒಟ್ಟು 17,266 ರನ್‌ಗಳನ್ನು ಗಳಿಸಿದ್ದಾರೆ. ಈ ಅಲ್ಪಾವಧಿಯಲ್ಲಿ ಅತಿ ಹೆಚ್ಚು ಪಂದ್ಯಗಳಲ್ಲಿ ವಿಕೆಟ್ ಕೀಪರ್ ಆಗಿ 829 ಬಾರಿ ಔಟ್ ಮಾಡಿರುವ ಹೆಗ್ಗಳಿಕೆ ಧೋನಿ ಅವರದ್ದಾಗಿದೆ.
ವಿಸ್ಡನ್ ದಶಕದ ಏಕದಿನ ತಂಡ ಪ್ರಕಟ; 3 ಭಾರತೀಯರಿಗೆ ಸ್ಥಾನ!
ಧೋನಿ ನಾಯಕತ್ವದಲ್ಲಿ ಭಾರತ ತಂಡವು 2007ರ ಟಿ20 ವಿಶ್ವಕಪ್, 2011ರ ಏಕದಿನ ವಿಶ್ವಕಪ್ ಹಾಗೂ 2013ರ ಐಸಿಸಿ ಚಾಂಪಿಯನ್’ಶಿಪ್ ಟ್ರೋಫಿ ಮುಡಿಗೇರಿಸಿಕೊಂಡಿತ್ತು. 2019ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿ ಬಳಿಕ ಧೋನಿ ಕ್ರಿಕೆಟ್‌ನಿಂದ ದೂರವೇ ಉಳಿದಿದ್ದಾರೆ.