
ಮೆಲ್ಬರ್ನ್(ಡಿ.31): ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೂರನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ತಂಡ ಕೂಡಿಕೊಂಡಿದ್ದಾರೆ. ಸಿಡ್ನಿಯಲ್ಲೇ 14 ದಿನಗಳ ಕಾಲ ಕಟ್ಟುನಿಟ್ಟಿನ ಕ್ವಾರಂಟೈನ್ ಮುಗಿಸಿ, ರೋಹಿತ್ ಉಳಿದೆರಡು ಟೆಸ್ಟ್ ಪಂದ್ಯಗಳಿಗೆ ಟೀಂ ಇಂಡಿಯಾ ಕೂಡಿಕೊಂಡಿದ್ದಾರೆ.
ಬಿಸಿಸಿಐ ಈ ಬಗ್ಗೆ ಟ್ವೀಟ್ ಮಾಡಿದ್ದು, ಸಹ ಆಟಗಾರರೆಲ್ಲ ರೋಹಿತ್ ಶರ್ಮಾ ಅವರನ್ನು ಪ್ರೀತಿಯಿಂದ ತಂಡಕ್ಕೆ ಸ್ವಾಗತಿಸಿದ್ದಾರೆ. ಮೊದಲಿಗೆ ಪೃಥ್ವಿ ಶಾ, ರವೀಂದ್ರ ಜಡೇಜಾ ಹಾಗೂ ವೃದ್ದಿಮಾನ್ ಸಾಹ ಹಿಟ್‌ಮ್ಯಾನ್ ಅವರನ್ನು ಸ್ವಾಗತಿಸಿದ್ದಾರೆ. ಬಳಿಕ ಜಸ್ಪ್ರೀತ್ ಬುಮ್ರಾ, ಕುಲ್ದೀಪ್ ಯಾದವ್, ಟಿ. ನಟರಾಜನ್, ವಾಷಿಂಗ್ಟನ್ ಸುಂದರ್ ಕೂಡಾ ರೋಹಿತ್ ಬಳಿ ಬಂದು ಸ್ವಾಗತ ಕೋರಿದ್ದಾರೆ.
ವಿಡಿಯೋದ ಕೊನೆಯಲ್ಲಿ ರೋಹಿತ್ ಶರ್ಮಾ ಕೋಚ್ ರವಿಶಾಸ್ತ್ರಿ ಹಾಗೂ ಹಂಗಾಮಿ ನಾಯಕ ಅಜಿಂಕ್ಯ ರಹಾನೆಯೊಟ್ಟಿಗೆ ಮಾತುಕತೆ ನಡೆಸುವ ವೇಳೆ ಕ್ವಾರಂಟೈನ್ ಅನುಭವ ಹೇಗಿತ್ತು? ಈಗಂತೂ ಇನ್ನಷ್ಟು ಯುವಕನಾಗಿ ಕಾಣಿಸುತ್ತಿದ್ದೀಯ ಎಂದು ಕೋಚ್ ಶಾಸ್ತ್ರಿ ಹಿಟ್‌ಮ್ಯಾನ್‌ಗೆ ಕಾಂಪ್ಲಿಮೆಂಟ್ಸ್ ನೀಡಿದ್ದಾರೆ.
ಟೆಸ್ಟ್ ಚಾಂಪಿಯನ್‌ಶಿಪ್: 2ನೇ ಸ್ಥಾನ ಕಾಯ್ದುಕೊಂಡ ಭಾರತ
ಯುಎಇನಲ್ಲಿ ನಡೆದ 13ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಆ ಬಳಿಕ ಫಿಟ್ನೆಸ್ ಸಮಸ್ಯೆಗೆ ತುತ್ತಾಗಿದ್ದ ರೋಹಿತ್ ಶರ್ಮಾ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡಮಿಗೆ ಆಗಮಿಸಿ ಪುನಶ್ಚೇತನ ಶಿಬಿರದಲ್ಲಿ ಪಾಲ್ಗೊಂಡಿದ್ದರು. ಹೀಗಾಗಿ ಆಸ್ಟ್ರೇಲಿಯಾ ವಿರುದ್ದದ ಸೀಮಿತ ಓವರ್‌ಗಳ ಸರಣಿ ಹಾಗೂ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲೆರಡು ಪಂದ್ಯಗಳಿಂದ ಹೊರಗುಳಿದಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.