
ನವದೆಹಲಿ(ಜು.06): ಶ್ರೀಲಂಕಾ ಸರಣಿಗೆ ರಾಹುಲ್ ದ್ರಾವಿಡ್ ಟೀಂ ಇಂಡಿಯಾ ಹೆಡ್ ಕೋಚ್ ಆಗಿ ನೇಮಕವಾಗಿರುವ ಬೆನ್ನಲ್ಲೇ, ಅವರನ್ನೇ ಮುಂಬರುವ ದಿನಗಳಲ್ಲಿ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ನೇಮಿಸಲಿ ಎನ್ನುವ ಮಾತುಗಳು ಕ್ರಿಕೆಟ್ ವಲಯದಲ್ಲಿ ಕೇಳಿ ಬರಲಾರಂಭಿಸಿದೆ.
ಇದರ ಬೆನ್ನಲ್ಲೇ ಮುಂದೆಯೂ ಉತ್ತಮ ಫಲಿತಾಂಶಗಳನ್ನು ನೀಡುತ್ತಾ ಹೋದರೆ, ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಸ್ಥಾನದಿಂದ ರವಿಶಾಸ್ತ್ರಿ ಅವರನ್ನು ಕೆಳಗಿಳಿಸಲು ಯಾವುದೇ ಕಾರಣಗಳಿಲ್ಲ ಎಂದು ದಿಗ್ಗಜ ಕ್ರಿಕೆಟಿಗ ಕಪಿಲ್ ದೇವ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮುಂಬರುವ ಟಿ20 ವಿಶ್ವಕಪ್ ಬಳಿಕ ರವಿಶಾಸ್ತ್ರಿ ಅವರ ಒಪ್ಪಂದ ಕೊನೆಗೊಳ್ಳಲಿದೆ. ಇದೇ ವೇಳೆ ಎನ್‌ಸಿಎ ಮುಖ್ಯಸ್ಥ ರಾಹುಲ್ ದ್ರಾವಿಡ್‌ರನ್ನು ಬಿಸಿಸಿಐ ಮುಖ್ಯ ಕೋಚ್ ಆಗಿ ನೇಮಿಸಲಿದೆ ಎಂಬ ಊಹಾಪೋಹಗಳು ಕೇಳಿಬಂದಿವೆ.
ಇಂಗ್ಲೆಂಡ್ ಟೆಸ್ಟ್ ಸರಣಿ: ಪಡಿಕ್ಕಲ್, ಪೃಥ್ವಿ ಶಾ ಬಗ್ಗೆ ಆಯ್ಕೆ ಸಮಿತಿ ನಿರಾಸಕ್ತಿ?
ಇದಕ್ಕೆ ಪ್ರತಿಕ್ರಿಯಿಸಿರುವ ಕಪಿಲ್, ಮೊದಲು ಶ್ರೀಲಂಕಾ ಸರಣಿ ಮುಗಿಯಲಿ. ಹೊಸ ಕೋಚ್‌ಗೆ ಅವಕಾಶ ನೀಡಿದರೆ ತಪ್ಪಿಲ್ಲ. ಈ ಬಗ್ಗೆ ಸದ್ಯಕ್ಕೆ ಮಾತನಾಡುವ ಅವಶ್ಯಕತೆಯಿಲ್ಲ. ಉತ್ತಮ ಫಲಿತಾಂಶ ನೀಡುತ್ತಿದ್ದರೆ ರವಿಶಾಸ್ತ್ರಿಯನ್ನು ತೆಗೆಯಲು ಕಾರಣವಿಲ್ಲ. ಕಾಲವೇ ಎಲ್ಲದಕ್ಕೂ ಉತ್ತರ ನೀಡಲಿದೆ. ಇಂತಹ ಹೇಳಿಕೆಗಳು ಆಟಗಾರರು ಮತ್ತು ಕೋಚ್‌ಗಳ ಮೇಲೆ ಒತ್ತಡವನ್ನುಂಟು ಮಾಡಲಿವೆ’ಎಂದಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.