ಟೀಂ ಇಂಡಿಯಾ ವಿಶ್ವಕಪ್ ಗೆಲ್ಲದೇ ಇರಲು ಸಾಧ್ಯವೇ ಇಲ್ಲ: ಶೋಯೆಬ್ ಅಖ್ತರ್ ಬಿಚ್ಚು ಮಾತು

By Naveen KodaseFirst Published Oct 23, 2023, 7:02 PM IST
Highlights

ಅಕ್ಟೋಬರ್ 22ರಂದು ಧರ್ಮಶಾಲಾದಲ್ಲಿ ನಡೆದ ಕಿವೀಸ್ ಎದುರಿನ ಪಂದ್ಯದಲ್ಲಿ ಮೊಹಮ್ಮದ್ ಶಮಿ ಮಾರಕ ದಾಳಿ ಹಾಗೂ ಚೇಸ್ ಮಾಸ್ಟರ್ ವಿರಾಟ್ ಕೊಹ್ಲಿಯ ಕೆಚ್ಚೆದೆಯ 95 ರನ್‌ಗಳ ಬ್ಯಾಟಿಂಗ್ ನೆರವಿನಿಂದ ಭಾರತ ತಂಡವು ಸುಲಭ ಗೆಲುವು ದಾಖಲಿಸಿತು. ಒಂದು ಹಂತದಲ್ಲಿ ವಿರಾಟ್ ಕೊಹ್ಲಿ ಶತಕ ಸಿಡಿಸಿ, ಸಚಿನ್ ತೆಂಡುಲ್ಕರ್ ಹೆಸರಿನಲ್ಲಿರುವ ಅತಿಹೆಚ್ಚು ಏಕದಿನ ಶತಕ(49) ದಾಖಲೆಯನ್ನು ವಿರಾಟ್ ಕೊಹ್ಲಿ ಸರಿಗಟ್ಟಲಿದ್ದಾರೆ ಎಂದು ಕ್ರಿಕೆಟ್ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದರು. ಆದರೆ ಒಂದು ಮಿಸ್ ಶಾಟ್‌ನಿಂದಾಗಿ ಶತಕ ಗಳಿಸುವ ಅವಕಾಶವನ್ನು ವಿರಾಟ್ ಕೊಹ್ಲಿ ಕೈಚೆಲ್ಲಿದರು.

ನವದೆಹಲಿ(ಅ.23): 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಮತ್ತೊಂದು ಭರ್ಜರಿ ಜಯ ಸಾಧಿಸಿದೆ. ಹಿಮಾಚಲ ಕ್ರಿಕೆಟ್ ಸಂಸ್ಥೆಯ ಮೈದಾನದಲ್ಲಿ ನಡೆದ ನ್ಯೂಜಿಲೆಂಡ್ ಎದುರಿನ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡವು ಇನ್ನೂ 12 ಎಸೆತ ಬಾಕಿ ಇರುವಂತೆಯೇ 4 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಇದರ ಜತೆಗೆ ನ್ಯೂಜಿಲೆಂಡ್ ತಂಡವನ್ನು ಹಿಂದಿಕ್ಕಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರುವಲ್ಲಿ ಟೀಂ ಇಂಡಿಯಾ ಯಶಸ್ವಿಯಾಗಿದೆ. ಇದರ ಬೆನ್ನಲ್ಲೇ ಪಾಕಿಸ್ತಾನ ಮಾಜಿ ವೇಗಿ ಶೋಯೆಬ್ ಅಖ್ತರ್ ಟೀಂ ಇಂಡಿಯಾ ಹಾಗೂ ವಿರಾಟ್ ಕೊಹ್ಲಿ ಪ್ರದರ್ಶನವನ್ನು ಕೊಂಡಾಡಿದ್ದು, ಟೀಂ ಇಂಡಿಯಾ ಈ ಬಾರಿ ವಿಶ್ವಕಪ್ ಗೆಲ್ಲದೇ ಇರಲು ಸಾಧ್ಯವೇ ಇಲ್ಲ ಎಂದು ಮುಕ್ತವಾಗಿ ಮಾತನಾಡಿದ್ದಾರೆ.

ಅಕ್ಟೋಬರ್ 22ರಂದು ಧರ್ಮಶಾಲಾದಲ್ಲಿ ನಡೆದ ಕಿವೀಸ್ ಎದುರಿನ ಪಂದ್ಯದಲ್ಲಿ ಮೊಹಮ್ಮದ್ ಶಮಿ ಮಾರಕ ದಾಳಿ ಹಾಗೂ ಚೇಸ್ ಮಾಸ್ಟರ್ ವಿರಾಟ್ ಕೊಹ್ಲಿಯ ಕೆಚ್ಚೆದೆಯ 95 ರನ್‌ಗಳ ಬ್ಯಾಟಿಂಗ್ ನೆರವಿನಿಂದ ಭಾರತ ತಂಡವು ಸುಲಭ ಗೆಲುವು ದಾಖಲಿಸಿತು. ಒಂದು ಹಂತದಲ್ಲಿ ವಿರಾಟ್ ಕೊಹ್ಲಿ ಶತಕ ಸಿಡಿಸಿ, ಸಚಿನ್ ತೆಂಡುಲ್ಕರ್ ಹೆಸರಿನಲ್ಲಿರುವ ಅತಿಹೆಚ್ಚು ಏಕದಿನ ಶತಕ(49) ದಾಖಲೆಯನ್ನು ವಿರಾಟ್ ಕೊಹ್ಲಿ ಸರಿಗಟ್ಟಲಿದ್ದಾರೆ ಎಂದು ಕ್ರಿಕೆಟ್ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದರು. ಆದರೆ ಒಂದು ಮಿಸ್ ಶಾಟ್‌ನಿಂದಾಗಿ ಶತಕ ಗಳಿಸುವ ಅವಕಾಶವನ್ನು ವಿರಾಟ್ ಕೊಹ್ಲಿ ಕೈಚೆಲ್ಲಿದರು.

ಕೊನೆಯುಸಿರೆಳೆದ ಭಾರತದ ಸ್ಪಿನ್ ದಂತಕಥೆ ಬಿಷನ್ ಸಿಂಗ್ ಬೇಡಿ..!

ಇದೀಗ ಟೀಂ ಇಂಡಿಯಾ ಪ್ರದರ್ಶನವನ್ನು ತಮ್ಮದೇ ಯೂಟ್ಯೂಬ್ ಚಾನೆಲ್‌ನಲ್ಲಿ ಕೊಂಡಾಡಿರುವ ಶೋಯೆಬ್ ಅಖ್ತರ್, "ಒತ್ತಡದ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ಅದ್ಭುತ ಆಟಗಾರನಾಗಿ ಹೊರಹೊಮ್ಮುತ್ತಾರೆ. ಒತ್ತಡದ ಪರಿಸ್ಥಿತಿ ಅವರಿಗೆ ಒಂದು ಅವಕಾಶವನ್ನು ಸಿಕ್ಕಂತೆ ಬಳಸಿಕೊಳ್ಳುತ್ತಾರೆ. ಅಂತಹ ಅವಕಾಶಗಳಲ್ಲಿ ಶತಕ ಸಿಡಿಸುವುದು ಕೂಡಾ ಒಂದಾಗಿರುತ್ತದೆ. ವಿರಾಟ್ ಕೊಹ್ಲಿ ಮ್ಯಾಚ್ ವಿನ್ನಿಂಗ್ ಪ್ರದರ್ಶನ ತೋರುವ ವಿಚಾರದಲ್ಲಿ ಮಾಸ್ಟರ್ ಆಗಿದ್ದಾರೆ" ಎಂದು ಅಖ್ತರ್ ಬಣ್ಣಿಸಿದ್ದಾರೆ.

"ನ್ಯೂಜಿಲೆಂಡ್ ತಂಡವು 300-350 ರನ್‌ ಗಡಿ ದಾಟದಂತೆ ನೋಡಿಕೊಳ್ಳುವಲ್ಲಿ ಟೀಂ ಇಂಡಿಯಾ ಯಶಸ್ವಿಯಾಯಿತು. ಹೀಗಾಗಲು ಮೊಹಮ್ಮದ್ ಶಮಿ ಪ್ರಮುಖ ಪಾತ್ರ ವಹಿಸಿದರು. ಅವರೊಬ್ಬ ಅನುಭವಿ ವೇಗಿ. ಕೊಂಚ ದುಬಾರಿಯಾದರೂ 5 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾದರು. ಭಾರತ ಬಲಿಷ್ಠ ಬ್ಯಾಟಿಂಗ್ ಹಾಗೂ ಬೌಲಿಂಗ್ ವಿಭಾಗವನ್ನು ಹೊಂದಿದೆ. ಹೀಗಾಗಿ ಈ ಬಾರಿ ಟೀಂ ಇಂಡಿಯಾ, ವಿಶ್ವಕಪ್ ಗೆಲ್ಲದೇ ಇರಲು ಸಾಧ್ಯವೇ ಇಲ್ಲ" ಎಂದು ಶೋಯೆಬ್ ಅಖ್ತರ್ ಹೇಳಿದ್ದಾರೆ.

ಹಾಟ್‌ಸ್ಟಾರ್‌ನಲ್ಲಿ ಏಕಕಾಲಕ್ಕೆ 4.3 ಕೋಟಿ ಮಂದಿ ವೀಕ್ಷಣೆ! ಇಂಡೋ-ಪಾಕ್ ದಾಖಲೆ ಉಡೀಸ್

ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ತಾನಾಡಿದ ಮೊದಲ 5 ಪಂದ್ಯಗಳ ಪೈಕಿ 5 ಪಂದ್ಯಗಳಲ್ಲಿ ಗೆಲುವು ಸಾಧಿಸುವ ಮೂಲಕ 10 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಇದೀಗ ಟೀಂ ಇಂಡಿಯಾ, ಅಕ್ಟೋಬರ್ 29ರಂದು ಲಖನೌದ ಏಕನಾ ಸ್ಟೇಡಿಯಂನಲ್ಲಿ ಜೋಸ್ ಬಟ್ಲರ್ ನೇತೃತ್ವದ ಇಂಗ್ಲೆಂಡ್ ತಂಡವನ್ನು ಎದುರಿಸಲು ಸಜ್ಜಾಗಿದೆ.

click me!