
ಬೆಂಗಳೂರು(ಮೇ.14): ಇಲ್ಲಿನ ಭಾರತೀಯ ಕ್ರೀಡಾ ಪ್ರಾಧಿಕಾರ (ಸಾಯ್) ಕೇಂದ್ರದಲ್ಲಿ ಟೋಕಿಯೋ ಒಲಿಂಪಿಕ್ಸ್‌ಗೆ ಅಭ್ಯಾಸ ನಡೆಸುತ್ತಿರುವ ಅಥ್ಲೀಟ್ ಕೆ.ಟಿ.ಇರ್ಫಾನ್ ಸೇರಿ ಐವರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಕಳೆದ ಶುಕ್ರವಾರ ನಡೆಸಿದ ಪರೀಕ್ಷೆಯಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಸದ್ಯ ಎಲ್ಲರನ್ನೂ ಐಸೋಲೇಷನ್‌ನಲ್ಲಿ ಇರಿಸಿ ಆರೋಗ್ಯದ ಮೇಲೆ ನಿಗಾ ಇಡಲಾಗಿದೆ ಎಂದು ಸಾಯ್ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಉಳಿದ 4 ಅಥ್ಲೀಟ್‌ಗಳ ಹೆಸರು ಬಹಿರಂಗಗೊಂಡಿಲ್ಲ.
ನಡಿಗೆ ಸ್ಪರ್ಧೆಯಲ್ಲಿ ಕೆ.ಟಿ ಇರ್ಫಾನ್ ಟೋಕಿಯೋ ಒಲಿಂಪಿಕ್ಸ್‌ಗೆ ಅರ್ಹತೆ ಗಿಟ್ಟಿಸಿಕೊಂಡಿದ್ದಾರೆ. ಕಳೆದ 2019ರಲ್ಲಿ ಜಪಾನ್‌ನ ನವೊಮಿಯಲ್ಲಿ ನಡೆದ 20 ಕಿಲೋ ಮೀಟರ್ ಏಷ್ಯನ್ ರೇಸ್ ವಾಕಿಂಗ್ ಚಾಂಪಿಯನ್‌ಶಿಪ್‌ನಲ್ಲಿ 4ನೇ ಸ್ಥಾನ ಪಡೆಯುವ ಮೂಲಕ ಇರ್ಫಾನ್ ಟೋಕಿಯೋ ಒಲಿಂಪಿಕ್ಸ್‌ಗೆ ಟಿಕೆಟ್ ಪಕ್ಕಾ ಮಾಡಿಕೊಂಡಿದ್ದರು.
ಮೊದಲ ಡೋಸ್ ಕೋವಿಡ್ ಲಸಿಕೆ ಪಡೆದ ರಿಷಭ್ ಪಂತ್
ಒಟ್ಟು ನಾಲ್ವರು ಪುರುಷ ಅಥ್ಲೀಟ್‌ಗಳು ಹಾಗೂ ಓರ್ವ ಮಹಿಳಾ ಸ್ಪರ್ಧಿ ಮತ್ತು ನಾಲ್ವರು ಸಹಾಯಕ ಸಿಬ್ಬಂದಿಗೆ ಕೋವಿಡ್ ತಗುಲಿದೆ ಎಂದು ಸಾಯ್‌ನ ಮೂಲಗಳು ಪಿಟಿಐಗೆ ಖಚಿತಪಡಿಸಿವೆ. ಈ 9 ಮಂದಿ ಪೈಕಿ ಹಲವರು ಏ.29ರಂದು ಕೊರೋನಾ ಲಸಿಕೆ ಮೊದಲ ಡೋಸ್ ಹಾಕಿಸಿಕೊಂಡಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.