ಕಿವೀಸ್ ವಿರುದ್ಧದ ಟಿ20 ಸರಣಿಯಲ್ಲಿ ಕನ್ನಡಿಗ ರಾಹುಲ್ ಬರೆದ ಅಪರೂಪದ ದಾಖಲೆಗಳಿವು

By Suvarna News  |  First Published Feb 3, 2020, 11:24 AM IST

ಕನ್ನಡಿಗ ಕೆ.ಎಲ್‌. ರಾಹುಲ್ ನ್ಯೂಜಿಲೆಂಡ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯಲ್ಲಿ 5 ಪ್ರಮುಖ ದಾಖಲೆಗಳನ್ನು ನಿರ್ಮಿಸಿದ್ದಾರೆ. ಚುಟುಕು ಕ್ರಿಕೆಟ್‌ನಲ್ಲಿ ರಾಹುಲ್ ಬರೆದ ದಾಖಲೆಗಳಾವುವು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ..


ವೆಲ್ಲಿಂಗ್ಟನ್(ಫೆ.03): ಕನ್ನಡಿಗ ಕೆ.ಎಲ್. ವೃತ್ತಿಜೀವನದ ಅದ್ಭುತ ಫಾರ್ಮ್‌ನಲ್ಲಿದ್ದು, ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಟೀಂ ಇಂಡಿಯಾ ಪಾಲಿಗೆ ಒಳ್ಳೆಯ ಆಯುಧ ಸಿಕ್ಕಂತಾಗಿದೆ. ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಅಮೋಘ ಪ್ರದರ್ಶನ ತೋರುವಲ್ಲಿ ರಾಹುಲ್ ಯಶಸ್ವಿಯಾಗಿದ್ದಾರೆ.

ಸರಣಿ ಕ್ಲೀನ್ ಸ್ವೀಪ್ ಮಾಡಿ ಸೇಡು ತೀರಿಸಿಕೊಂಡ ಟೀಂ ಇಂಡಿಯಾ

Latest Videos

ಶಿಖರ್ ಧವನ್ ಹಾಗೂ ರಿಷಭ್ ಪಂತ್ ಅನುಪಸ್ಥಿಯಲ್ಲಿ ಕೆ.ಎಲ್ ರಾಹುಲ್ ಪೂರ್ಣಕಾಲಿಕ ವಿಕೆಟ್ ಕೀಪರ್ ಹಾಗೆಯೇ ಆರಂಭಿಕನಾಗಿ ಸೈ ಎನಿಸಿಕೊಂಡಿದ್ದಾರೆ. 5 ಪಂದ್ಯಗಳ ಟಿ20 ಸರಣಿಯಲ್ಲಿ 224 ರನ್ ಬಾರಿಸುವ ಮೂಲಕ ಭಾರತದ ಪರ ಗರಿಷ್ಠ ಸ್ಕೋರರ್‌ ಆಗಿಯೂ ಹೊರಹೊಮ್ಮಿದ್ದಾರೆ. ಇಷ್ಟೇ ಅಲ್ಲದೇ ಸರಣಿ ಶ್ರೇಷ್ಠ ಗೌರವಕ್ಕೂ ರಾಹುಲ್ ಭಾಜನರಾದರು. ಇನ್ನು ಕೊನೆಯ ಪಂದ್ಯದಲ್ಲಿ ಹಂಗಾಮಿ ನಾಯಕ ರೋಹಿತ್ ಶರ್ಮಾ ಗಾಯಕ್ಕೆ ತುತ್ತಾಗಿದ್ದರಿಂದ, ಅರೆಕಾಲಿಕ ಕ್ಯಾಪ್ಟನ್ ಆಗಿಯೂ ಕಾರ್ಯ ನಿರ್ವಹಿಸುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾದರು.

ನ್ಯೂಜಿಲೆಂಡ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯಲ್ಲಿ ಕೆ.ಎಲ್. ರಾಹುಲ್ ಬರೆದ ಅಪರೂಪದ ದಾಖಲೆಗಳ ವಿವರ ಇಲ್ಲಿದೆ ನೋಡಿ...

* ಸತತ 2 ಅರ್ಧಶತಕ: ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್ ಆಗಿ ತಾವಾಡಿದ ಮೊದಲೆರಡು ಟಿ20 ಪಂದ್ಯಗಳಲ್ಲಿ ಸತತ ಎರಡು(56&57*) ಅರ್ಧಶತಕ ಬಾರಿಸಿದ ಮೊದಲ ಕ್ರಿಕೆಟಿಗ ಎನ್ನುವ ಗೌರವಕ್ಕೆ ರಾಹುಲ್ ಪಾತ್ರರಾದರು. ಇದರ ಜತೆಗೆ ವಿಕೆಟ್ ಕೀಪರ್‌ ಆಗಿ ಚೊಚ್ಚಲ ಪಂದ್ಯದಲ್ಲೇ ಅರ್ಧಶತಕ ಸಿಡಿಸಿದ ಭಾರತದ ಮೊದಲ ವಿಕೆಟ್‌ ಕೀಪರ್ ಬ್ಯಾಟ್ಸ್‌ಮನ್ ಎನ್ನುವ ಗೌರವಕ್ಕೆ ಭಾಜನರಾದರು.

* ಸರಣಿ ಶ್ರೇಷ್ಠ ಗೆದ್ದ ಮೊದಲ ವಿಕೆಟ್ ಕೀಪರ್: ಕಿವೀಸ್ ವಿರುದ್ಧದ 5 ಪಂದ್ಯಗಳ ಸರಣಿಯಲ್ಲಿ 224 ರನ್ ಹಾಗೂ 4 ಬಲಿ ಪಡೆಯುವ ಮೂಲಕ ರಾಹುಲ್ ಸರಣಿ ಶ್ರೇಷ್ಠ ಗೌರವಕ್ಕೆ ಭಾಜನರಾದರು. ಈ ಮೂಲಕ ಟಿ20 ಸರಣಿಯಲ್ಲಿ ಸರಣಿಶ್ರೇಷ್ಠ ಗೌರವಕ್ಕೆ ಭಾಜನರಾದ ಭಾರತದ ಮೊದಲ ವಿಕೆಟ್ ಕೀಪರ್ ಎನ್ನುವ ಅಪರೂಪದ ದಾಖಲೆ ಬರೆದರು. 

ಸರಣಿ ಸೋಲಿನ ನೋವನ್ನು ಲಂಕಾ ಜತೆ ಹಂಚಿಕೊಂಡ ಕಿವೀಸ್

* ಅತಿವೇಗವಾಗಿ 1 ಸಾವಿರ ರನ್ ಪೂರೈಕೆ: 5ನೇ ಟಿ20 ಪಂದ್ಯದಲ್ಲಿ ರಾಹುಲ್ ಆರಂಭಿಕನಾಗಿ ಒಂದು ಸಾವಿರ ರನ್ ಪೂರೈಸಿದ ಸಾಧನೆ ಮಾಡಿದ್ದಾರೆ. ಇದುವರೆಗೂ 19 ಕ್ರಿಕೆಟಿಗರು ಒಂದು ಸಾವಿರ ರನ್ ಪೂರೈಸಿದ ಸಾಧನೆ ಮಾಡಿದ್ದಾರೆ. 19 ಆಟಗಾರರ ಪೈಕಿ ಆರೋನ್ ಫಿಂಚ್ ಹಾಗೂ ಕಾಲಿನ್ ಮನ್ರೋ 29 ಇನಿಂಗ್ಸ್‌ಗಳಲ್ಲಿ ಒಂದು ಸಾವಿರ ರನ್ ಬಾರಿಸಿದ್ದರು. ಆದರೆ ರಾಹುಲ್ ಕೇವಲ 24 ಇನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದಾರೆ.

* ಸರಣಿಯಲ್ಲಿ 200+ ರನ್ ಬಾರಿಸಿದ ಮೊದಲ ಭಾರತೀಯ: ದ್ವಿಪಕ್ಷೀಯ ಟಿ20 ಸರಣಿಯಲ್ಲಿ 200+ ರನ್ ಬಾರಿಸಿದ ಮೊದಲ ಭಾರತೀಯ ಬ್ಯಾಟ್ಸ್‌ಮನ್ ಎನ್ನುವ ಗೌರವಕ್ಕೆ ರಾಹುಲ್ ಪಾತ್ರರಾಗಿದ್ದಾರೆ. ಈ ಮೊದಲು 2016ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಮೂರು ಪಂದ್ಯಗಳ ಸರಣಿಯಲ್ಲಿ ವಿರಾಟ್ ಕೊಹ್ಲಿ 199 ರನ್ ಬಾರಿಸಿದ್ದರು.

* ವಿಕೆಟ್ ಕೀಪರ್‌ ಆಗಿ ಗರಿಷ್ಠ ಸ್ಕೋರ್: ಟಿ20 ಸರಣಿಯಲ್ಲಿ ಗರಿಷ್ಠ ರನ್ ಬಾರಿಸಿದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಎನ್ನುವ ದಾಖಲೆಗೂ ರಾಹುಲ್(224) ರಾಹುಲ್ ಪಾತ್ರರಾಗಿದ್ದಾರೆ. ಈ ಮೊದಲು ಕ್ರೇಗ್ ಕೀಸ್ವೆಟರ್ ಹಾಗೂ ಮೊಹಮ್ಮದ್ ಶೆಹಜಾದ್(222) ಸರಣಿಯೊಂದರಲ್ಲಿ ಗರಿಷ್ಠ ರನ್ ಬಾರಿಸಿದ ವಿಕೆಟ್‌ ಕೀಪರ್ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಜಂಟಿ ಅಗ್ರಸ್ಥಾನದಲ್ಲಿದ್ದರು. 

ಫೆಬ್ರವರಿ 3ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

click me!