ಟೀಂ ಇಂಡಿಯಾ ಮಾಜಿ ನಾಯಕ ಹಾಗೂ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಬಯೋ ಬಬಲ್‌ನೊಳಗೆ ಕೋವಿಡ್ ಲಗ್ಗೆಯಿಟ್ಟಿದ್ದು ಹೇಗೆ ಎನ್ನುವುದರ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ
ನವದೆಹಲಿ(ಮೇ.07): ಕೊರೋನಾ ಸೋಂಕಿನ ಪ್ರಕರಣಗಳು ಪತ್ತೆಯಾದ ಕಾರಣ ಐಪಿಎಲ್ 14ನೇ ಆವೃತ್ತಿ ಮುಂದೂಡಿಕೆಯಾಗಿದ್ದರ ಬಗ್ಗೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
‘ನಾವು ಅತ್ಯಂತ ಸುರಕ್ಷಿತ ಬಯೋ ಬಬಲ್ ನಿರ್ಮಿಸಿದ್ದೆವು. ಬಯೋ ಬಬಲ್‌ನಲ್ಲಿ ಲೋಪ ಹೇಗಾಯ್ತು ಎಂದು ತಿಳಿಯುತ್ತಿಲ್ಲ. ನಮಗೆ ಬಂದಿರುವ ವರದಿ ಪ್ರಕಾರ, ಯಾವುದೇ ಲೋಪಗಳು ಇರಲಿಲ್ಲ’ ಎಂದು ಗಂಗೂಲಿ ತಮ್ಮ ಅಧಿಕಾರಿಗಳನ್ನು ಸಮರ್ಥಿಸಿಕೊಂಡಿದ್ದಾರೆ. ‘ದೇಶದೆಲ್ಲೆಡೆ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಹೇಗಾಗುತ್ತಿದೆ ಎನ್ನುವುದನ್ನು ಪತ್ತೆ ಹಚ್ಚುವುದು ಕಷ್ಟವಾಗುತ್ತಿದೆ. ಅದೇ ರೀತಿ ನಮಗೂ ತಿಳಿಯುತ್ತಿಲ್ಲ. ಬಹುಶಃ ವಿಮಾನ ಪ್ರಯಾಣದ ಸಂದರ್ಭದಲ್ಲಿ ಸೋಂಕು ತಗುಲಿರಬಹುದು’ ಎಂದಿದ್ದಾರೆ.
undefined
ಐಪಿಎಲ್ 2021 ರದ್ದು ಮಾಡಿಲ್ಲ, ಮುಂದೂಡಲಾಗಿದೆ: ರಾಜೀವ್ ಶುಕ್ಲಾ
ಬಯೋ ಬಬಲ್‌ನೊಳಗಿದ್ದ ಕೆಕೆಆರ್ ತಂಡದ ಆಟಗಾರರಾದ ಸಂದೀಪ್ ವಾರಿಯರ್ ಹಾಗೂ ವರುಣ್ ಚಕ್ರವರ್ತಿಗೆ ಮೊದಲು ಕೋವಿಡ್ ಪತ್ತೆಯಾಗಿತ್ತು. ಇದಾದ ಬಳಿಕ ಮರುದಿನ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಅನುಭವಿ ಸ್ಪಿನ್ನರ್ ಅಮಿತ್ ಮಿಶ್ರಾ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡದ ವೃದ್ದಿಮಾನ್ ಸಾಹಾಗೆ ಕೋವಿಡ್ 19 ಸೋಂಕು ದೃಢಪಟ್ಟ ಬೆನ್ನಲ್ಲೇ ಬಿಸಿಸಿಐ 14ನೇ ಆವೃತ್ತಿಯ ಐಪಿಎಲ್ ಟೂರ್ನಿಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದೆ.
ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್ ನ್ಯೂಸ್ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona