ಟ್ರೆಂಟ್ ಬೌಲ್ಟ್ 2ನೇ ಟೆಸ್ಟ್‌ಗೆ ತಂಡಕೂಡಿಕೊಳ್ಳಲಿದ್ದಾರೆ: ಕಿವೀಸ್ ಕೋಚ್ ಸ್ಟೆಡ್

By Suvarna NewsFirst Published Jun 7, 2021, 4:11 PM IST
Highlights

* ಇಂಗ್ಲೆಂಡ್ ವಿರುದ್ದದ 2ನೇ ಟೆಸ್ಟ್‌ಗೆ ವೇಗಿ ಟ್ರೆಂಟ್ ಬೌಲ್ಟ್ ಎಂಟ್ರಿ

* ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದ ಬೌಲ್ಟ್

* ಇಂಗ್ಲೆಂಡ್-ನ್ಯೂಜಿಲೆಂಡ್ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯ

ದುಬೈ(ಜೂ.07): ಇಂಗ್ಲೆಂಡ್ ವಿರುದ್ದದ ಎರಡನೇ ಟೆಸ್ಟ್‌ ಪಂದ್ಯಕ್ಕೆ ವೇಗಿ ಟ್ರೆಂಟ್ ಬೌಲ್ಟ್ ತಂಡ ಕೂಡಿಕೊಂಡರು ಅಚ್ಚರಿಯಿಲ್ಲ ಎಂದು ನ್ಯೂಜಿಲೆಂಡ್ ಕ್ರಿಕೆಟ್ ತಂಡದ ಕೋಚ್ ಗ್ಯಾರಿ ಸ್ಟೆಡ್ ತಿಳಿಸಿದ್ದಾರೆ.

ಎರಡನೇ ಟೆಸ್ಟ್‌ ಪಂದ್ಯಕ್ಕೆ ತಂಡದಲ್ಲಿ ಕೆಲವೊಂದು ಬದಲಾವಣೆಗಳಾಗುವ ಸಾಧ್ಯತೆಯಿದೆ ಎಂದು ಸ್ಟೆಡ್ ಸುಳಿವು ನೀಡಿದ್ದಾರೆ. ಬ್ರಿಟೀಷ್ ಸರ್ಕಾರವು ತನ್ನ ಕ್ವಾರಂಟೈನ್‌ ನಿಯಮಾವಳಿಗಳನ್ನು ಕೊಂಚ ಸಡಿಲಗೊಳಿಸಿದೆ. ಹೀಗಾಗಿ ಟ್ರೆಂಟ್ ಬೌಲ್ಟ್ ನಾವು ಅಂದುಕೊಂಡಿದ್ದಕ್ಕಿಂತ ಮೂರ್ನಾಲ್ಕು ದಿನ ಮುಂಚಿತವಾಗಿಯೇ ಐಸೋಲೇಷನ್‌ನಿಂದ ಹೊರಬರುವ ಸಾಧ್ಯತೆಯಿದೆ ಎಂದು ನ್ಯೂಜಿಲೆಂಡ್ ಕ್ರಿಕೆಟ್ ತಂಡದ ಕೋಚ್ ತಿಳಿಸಿದ್ದಾರೆ.

ಟ್ರೆಂಟ್‌ ಬೌಲ್ಟ್ ಎರಡನೇ ಟೆಸ್ಟ್ ಪಂದ್ಯದಿಂದಲೂ ಹೊರಗುಳಿಯುವ ಸಾಧ್ಯತೆಯಿದೆ ಎಂದು ಭಾವಿಸಿದ್ದೆವು. ಆದರೀಗ ಬೌಲ್ಟ್ ಮೂರರಿಂದ ನಾಲ್ಕು ದಿನ ಮುಂಚಿತವಾಗಿಯೇ ಐಸೋಲೇಷನ್‌ನಿಂದ ಹೊರಬರುವ ನಿರೀಕ್ಷೆಯಿದೆ. ಹೀಗಾಗಿ ಬೌಲ್ಟ್ ಸಂಪೂರ್ಣ ಫಿಟ್ ಆಗಿದ್ದರೆ ಇಂಗ್ಲೆಂಡ್‌ ವಿರುದ್ದ ಜೂನ್ 10ರಿಂದ ಆರಂಭವಾಗಲಿರುವ ಎರಡನೇ ಟೆಸ್ಟ್ ಪಂದ್ಯದ ವೇಳೆಗೆ ತಂಡ ಕೂಡಿಕೊಳ್ಳುವ ಸಾಧ್ಯತೆಯಿದೆ ಎಂದಿದ್ದಾರೆ.

ಇಂಗ್ಲೆಂಡ್-ಕಿವೀಸ್ ಮೊದಲ ಟೆಸ್ಟ್‌ ಡ್ರಾನಲ್ಲಿ ಅಂತ್ಯ

14ನೇ ಆವೃತ್ತಿಯ ಐಪಿಎಲ್‌ ಟೂರ್ನಿ ಕೋವಿಡ್ ಕಾರಣದಿಂದ ದಿಢೀರ್ ಆಗಿ ಮುಂದೂಡಲ್ಪಟ್ಟಿರುವುದರಿಂದ ತವರಿಗೆ ಮರಳಿದ್ದ ಟ್ರೆಂಟ್ ಬೌಲ್ಟ್ ಕುಟುಂಬದೊಟ್ಟಿಗೆ ಕಾಲ ಕಳೆಯಲು ಬಯಸಿದ್ದರು. ಹೀಗಾಗಿ ಇಂಗ್ಲೆಂಡ್‌ ವಿರುದ್ದದ ಲಾರ್ಡ್ಸ್‌ ಟೆಸ್ಟ್‌ ಪಂದ್ಯದಿಂದ ಹೊರಗುಳಿದಿದ್ದರು. ಮೊದಲ ಟೆಸ್ಟ್‌ ಪಂದ್ಯ ಆರಂಭಕ್ಕೂ ಮುನ್ನ ಕೋಚ್‌ ಸ್ಟೆಡ್‌, ಇಂಗ್ಲೆಂಡ್ ವಿರುದ್ದದ 2 ಟೆಸ್ಟ್ ಪಂದ್ಯಗಳಿಂದ ವೇಗಿ ಬೌಲ್ಟ್ ಹೊರಗುಳಿಯಲಿದ್ದಾರೆ ಎಂದಿದ್ದರು.

ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ನಡುವೆ ಲಾರ್ಡ್ಸ್‌ನಲ್ಲಿ ನಡೆದ ಮೊದಲ ಟೆಸ್ಟ್‌ ಪಂದ್ಯವು ಡ್ರಾನಲ್ಲಿ ಅಂತ್ಯವಾಗಿದೆ. ಇಂಗ್ಲೆಂಡ್ ವಿರುದ್ದದ ಟೆಸ್ಟ್ ಸರಣಿ ಮುಗಿಯುತ್ತಿದ್ದಂತೆ ಜೂನ್‌ 18ರಿಂದ ಆರಂಭವಾಗಲಿರುವ ಐಸಿಸಿ ಟೆಸ್ಟ್‌ ಚಾಂಪಿಯನ್‌ಶಿಪ್ ಫೈನಲ್‌ ಪಂದ್ಯದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಪ್ರಶಸ್ತಿಗಾಗಿ ಕಾದಾಡಲಿವೆ.
 

click me!