'200% ಗ್ಯಾರಂಟಿ, ದ್ರಾವಿಡ್ ಮಾರ್ಗದರ್ಶನದಲ್ಲಿ ಟೀಂ ಇಂಡಿಯಾ 2023ರ ಏಕದಿನ ವಿಶ್ವಕಪ್ ಗೆಲ್ಲಲ್ಲ'

Published : Mar 24, 2023, 12:40 PM IST
'200% ಗ್ಯಾರಂಟಿ, ದ್ರಾವಿಡ್ ಮಾರ್ಗದರ್ಶನದಲ್ಲಿ ಟೀಂ ಇಂಡಿಯಾ 2023ರ ಏಕದಿನ ವಿಶ್ವಕಪ್ ಗೆಲ್ಲಲ್ಲ'

ಸಾರಾಂಶ

ಆಸ್ಟ್ರೇಲಿಯಾ ಎದುರು ಏಕದಿನ ಸರಣಿ ಕೈಚೆಲ್ಲಿದ ಟೀಂ ಇಂಡಿಯಾ ಟೀಂ ಇಂಡಿಯಾ ಸೋಲಿಗೆ ಹೆಡ್‌ ಕೋಚ್ ರಾಹುಲ್ ದ್ರಾವಿಡ್ ಹೊಣೆಮಾಡಿದ ನೆಟ್ಟಿಗರು ಹೀಗೆ ಆಡಿದರೆ ಮುಂದೆ ಭಾರತ ಏಕದಿನ ವಿಶ್ವಕಪ್ ಗೆಲ್ಲಲ್ಲವೆಂದ ನೆಟ್ಟಿಗರು

ನವದೆಹಲಿ(ಮಾ.24): ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯು ಮುಕ್ತಾಯವಾಗಿ ಎರಡು ದಿನ ಕಳೆಯುತ್ತಾ ಬಂದರೂ, ಪಂದ್ಯದ ಕುರಿತಾದ ಚರ್ಚೆಗಳು ಇನ್ನೂ ನಿಂತಿಲ್ಲ. ರಾಹುಲ್ ದ್ರಾವಿಡ್ ಮಾರ್ಗದರ್ಶನದ ಟೀಂ ಇಂಡಿಯಾ, ತವರಿನಲ್ಲಿ ಆಸ್ಟ್ರೇಲಿಯಾ ಎದುರು ಏಕದಿನ ಸರಣಿಯನ್ನು ಗೆಲ್ಲುವಲ್ಲಿ ವಿಫಲವಾಗಿದೆ. ಟೀಂ ಇಂಡಿಯಾದ ಈ ನೀರಸ ಪ್ರದರ್ಶನಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ರಾಹುಲ್ ದ್ರಾವಿಡ್‌ ಅವರ ಕೋಚಿಂಗ್ ಶೈಲಿಯ ಬಗ್ಗೆ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಇದೇ ರೀತಿಯ ಪ್ರದರ್ಶನವನ್ನು ತೋರಿದರೆ, ಮುಂಬರುವ ಏಕದಿನ ವಿಶ್ವಕಪ್ ಟೂರ್ನಿಯಲ್ಲೂ ಟೀಂ ಇಂಡಿಯಾ ಕಪ್ ಗೆಲ್ಲಲ್ಲ ಎಂದು ಲೇವಡಿ ಮಾಡಿದ್ದಾರೆ.

ರಾಹುಲ್ ದ್ರಾವಿಡ್ ಟೀಂ ಇಂಡಿಯಾ ಹೆಡ್ ಕೋಚ್ ಆದ ಬಳಿಕ ನಿರೀಕ್ಷಿತವಾದ ಯಶಸ್ಸು ಟೀಂ ಇಂಡಿಯಾಗೆ ಸಿಕ್ಕಿಲ್ಲ. ಓರ್ವ ಕ್ರಿಕೆಟಿಗನಾಗಿ ಸಿಕ್ಕಷ್ಟು ಯಶಸ್ಸು ರಾಹುಲ್ ದ್ರಾವಿಡ್‌ಗೆ ಭಾರತ ಸೀನಿಯರ್ಸ್‌ ತಂಡದ ಕೋಚ್ ಆದ ಬಳಿಕ ಸಿಕ್ಕಿಲ್ಲ. ರಾಹುಲ್ ದ್ರಾವಿಡ್ ಟೀಂ ಇಂಡಿಯಾ ಕೋಚ್ ಆದ ಬಳಿಕ ಹಲವು ದ್ವಿಪಕ್ಷೀಯ ಸರಣಿಗಳನ್ನೇನೋ ಜಯಿಸಿದೆ, ಆದರೆ ಮಹತ್ವದ ಸರಣಿಗಳನ್ನು ಕೈಚೆಲ್ಲಿದೆ. ರಾಹುಲ್ ದ್ರಾವಿಡ್ ಮಾರ್ಗದರ್ಶನದಲ್ಲಿ ಟೀಂ ಇಂಡಿಯಾವು, ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಾಗ ಟೆಸ್ಟ್ ಸರಣಿಯನ್ನು ಸೋತಿತ್ತು. ಇದಾದ ಬಳಿಕ ಏಷ್ಯಾಕಪ್ 2022 ಹಾಗೂ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿಯೂ ಕಪ್ ಗೆಲ್ಲಲು ಟೀಂ ಇಂಡಿಯಾ ವಿಫಲವಾಗಿತ್ತು. ಇದೀಗ ಬರೋಬ್ಬರಿ 4 ವರ್ಷಗಳ ಬಳಿಕ ಟೀಂ ಇಂಡಿಯಾ, ತವರಿನಲ್ಲಿ ಏಕದಿನ ಸರಣಿಯನ್ನು ಕೈಚೆಲ್ಲುವ ಮೂಲಕ ನೆಟ್ಟಿಗರ ಆಕ್ರೋಶಕ್ಕೆ ಗುರಿಯಾಗಿದೆ.

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯನ್ನು ಗೆದ್ದು ಆತ್ಮವಿಶ್ವಾಸದಿಂದಲೇ ಏಕದಿನ ಸರಣಿಯನ್ನಾಡಲು ಕಣಕ್ಕಿಳಿದ ಟೀಂ ಇಂಡಿಯಾ, ಮೊದಲ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿತ್ತು. ಇದಾದ ಬಳಿಕ, ಎರಡನೇ ಏಕದಿನ ಪಂದ್ಯದಲ್ಲಿ ಆಸೀಸ್ ಎದುರು ರೋಹಿತ್ ಶರ್ಮಾ ಪಡೆ 10 ವಿಕೆಟ್‌ಗಳ ಹೀನಾಯ ಸೋಲು ಅನುಭವಿಸಿತ್ತು. ಇನ್ನು ಮೂರನೇ ಹಾಗೂ ನಿರ್ಣಾಯಕ ಏಕದಿನ ಪಂದ್ಯದಲ್ಲಿ 21 ರನ್‌ಗಳ ಸೋಲು ಅನುಭವಿಸುವ ಮೂಲಕ ತವರಿನಲ್ಲಿ ಸತತ 8ನೇ ಬಾರಿಗೆ ಏಕದಿನ ಕ್ರಿಕೆಟ್ ಸರಣಿ ಗೆಲ್ಲುವ ಕನಸನ್ನು ಟೀಂ ಇಂಡಿಯಾ ಕೈಚೆಲ್ಲಿತು.

'ಆತ ಆಡಿದ್ದೇ 3 ಬಾಲ್': ಸೂರ್ಯಕುಮಾರ್ ಯಾದವ್ ಫೇಲ್ಯೂರ್‌ ಬಗ್ಗೆ ರೋಹಿತ್ ಶರ್ಮಾ ಹೇಳಿದ್ದೇನು?

ಆಸ್ಟ್ರೇಲಿಯಾ ಎದುರು ಟೀಂ ಇಂಡಿಯಾಮ ಏಕದಿನ ಸರಣಿಯನ್ನು ಸೋಲುತ್ತಿದ್ದಂತೆಯೇ ನೆಟ್ಟಿಗರು, ಟೀಂ ಇಂಡಿಯಾ ಹೆಡ್ ಕೋಚ್ ರಾಹುಲ್ ದ್ರಾವಿಡ್ ಅವರ ಮಾರ್ಗದರ್ಶನದ ಬಗ್ಗೆ ಕಿಡಿಕಾರಿದ್ದು, ಏನೇ ಆಗಲಿ, 200% ಖಚಿತವಾಗಿ ಹೇಳುತ್ತೇನೆ, ಮುಂಬರುವ ಏಕದಿನ ವಿಶ್ವಕಪ್ ಟೂರ್ನಿಯನ್ನು ರಾಹುಲ್ ದ್ರಾವಿಡ್ ಮಾರ್ಗದರ್ಶನದಲ್ಲಿ ಗೆಲ್ಲುವುದಿಲ್ಲ ಎಂದು ನೆಟ್ಟಿಗನೊಬ್ಬ ಲೇವಡಿ ಮಾಡಿದ್ದಾನೆ.

ಇನ್ನೋರ್ವ ನೆಟ್ಟಿಗ, ರಾಹುಲ್ ಓರ್ವ ಕಳಪೆ ನಾಯಕ ಹಾಗೂ ಕೆಟ್ಟ ಕೋಚ್ ಎಂದು ತಮ್ಮ ಅಸಮಾಧಾನ ಹೊರಹಾಕಿದ್ದಾನೆ. ಹಲವು ನೆಟ್ಟಿಗರು, ರಾಹುಲ್ ದ್ರಾವಿಡ್ ಅವರ ಹೆಚ್ಚು ರಕ್ಷಣಾತ್ಮಕ ರಣತಂತ್ರ ತಂಡಕ್ಕೆ ದೊಡ್ಡ ಹಿನ್ನಡೆಯಾಗಿ ಪರಿಣಮಿಸಲಿದೆ ಎಂದು ಕಿಡಿಕಾರಿದ್ದಾರೆ.

ಮುಂಬರುವ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯು ಅಕ್ಟೋಬರ್ ಮೊದಲ ವಾರದಿಂದಲೇ ಆರಂಭವಾಗುವ ಸಾಧ್ಯತೆಯಿದೆ. ಪ್ರತಿಷ್ಠಿತ ಏಕದಿನ ವಿಶ್ವಕಪ್ ಟೂರ್ನಿಗೆ ಈ ಬಾರಿ ಭಾರತ ಆತಿಥ್ಯವನ್ನು ವಹಿಸಿದೆ. ಭಾರತ ತಂಡವು 2013ರ ಬಳಿಕ ನಿರಂತರವಾಗಿ ಐಸಿಸಿ ಟ್ರೋಫಿ ಗೆಲ್ಲಲು ವಿಫಲವಾಗುತ್ತಲೇ ಬಂದಿದೆ. ಮುಂಬರುವ ಏಕದಿನ ವಿಶ್ವಕಪ್ ಟೂರ್ನಿಗೂ ಮುನ್ನ ಇನ್ನು ಟೀಂ ಇಂಡಿಯಾ ಕೆಲವೇ ಕೆಲವು ಏಕದಿನ ಪಂದ್ಯಗಳನ್ನಾಡಲಿದ್ದು, ಆ ಸರಣಿಗಳಲ್ಲೇ ಬಲಿಷ್ಠ ತಂಡವನ್ನು ಕಟ್ಟಿ ತವರಿನಲ್ಲಿ ಮತ್ತೊಮ್ಮೆ ಏಕದಿನ ವಿಶ್ವಕಪ್ ಜಯಿಸುವ ಒತ್ತಡಕ್ಕೆ ಸಿಲುಕಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Mock Auction: 30.5 ಕೋಟಿ ರೂಪಾಯಿ ದಾಖಲೆ ಮೊತ್ತಕ್ಕೆ ಕೆಕೆಆರ್‌ಗೆ ಕ್ಯಾಮರೂನ್‌ ಗ್ರೀನ್‌!
ಐಪಿಎಲ್ ಹರಾಜು ಇತಿಹಾಸದಲ್ಲೇ ಟಾಪ್ 6 ದುಬಾರಿ ಆಟಗಾರರಿವರು!