IPL 2021: ಆರ್‌ಸಿಬಿ ಜೆರ್ಸಿ ಎಂದು ರಾಹುಲ್ ಪಡೆಯನ್ನು ಟ್ರೋಲ್‌ ಮಾಡಿದ ನೆಟ್ಟಿಗರು..!

Published : Apr 01, 2021, 09:29 AM IST
IPL 2021: ಆರ್‌ಸಿಬಿ ಜೆರ್ಸಿ ಎಂದು ರಾಹುಲ್ ಪಡೆಯನ್ನು ಟ್ರೋಲ್‌ ಮಾಡಿದ ನೆಟ್ಟಿಗರು..!

ಸಾರಾಂಶ

14ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಹೊಸ ಹೆಸರಿನೊಂದಿಗೆ ಕಣಕ್ಕಿಳಿಯುತ್ತಿರುವ ಪಂಜಾಬ್‌ ಕಿಂಗ್ಸ್ ಇದೀಗ‌ ಹೊಸ ಜೆರ್ಸಿ ಅನಾವರಣ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟೀಕೆಗೆ ಗುರಿಯಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ. 

ನವದೆಹಲಿ(ಏ.01): 14ನೇ ಆವೃತ್ತಿಯ ಐಪಿಎಲ್‌ಗೆ ಪಂಜಾಬ್‌ ಕಿಂಗ್ಸ್‌ ನೂತನ ಜೆರ್ಸಿ ಬಿಡುಗಡೆ ಮಾಡಿದ್ದು, ಅದು 2009ರ ಆವೃತ್ತಿಯಲ್ಲಿ ಆರ್‌ಸಿಬಿ ತಂಡ ಧರಿಸಿದ್ದ ಜೆರ್ಸಿಯಂತಿದೆ ಎಂದು ಸಾಮಾಜಿಕ ತಾಣಗಳಲ್ಲಿ ಅಭಿಮಾನಿಗಳು ಅಭಿಪ್ರಾಯಿಸಿದ್ದಾರೆ. 

2009ರಲ್ಲಿ ಆರ್‌ಸಿಬಿ ನಾಯಕರಾಗಿದ್ದ ಅನಿಲ್‌ ಕುಂಬ್ಳೆ ಈಗ ಪಂಜಾಬ್‌ ತಂಡದ ಕೋಚ್‌ ಆಗಿದ್ದು, ವಿವಿಧ ಆವೃತ್ತಿಗಳಲ್ಲಿ ಆರ್‌ಸಿಬಿ ಪರ ಆಡಿದ 9 ಆಟಗಾರರು ಈಗ ಪಂಜಾಬ್‌ ತಂಡದಲ್ಲಿದ್ದಾರೆ. ಬಾಲಿವುಡ್‌ ನಟಿ ಪ್ರೀತಿ ಜಿಂಟಾ ಮಾಲಿಕತ್ವದ ಪಂಜಾಬ್‌ ತಂಡ ಮುಂದಿನ ವರ್ಷ ‘ಮಾಜಿ ಆರ್‌ಸಿಬಿ’ ಎಂದು ತಂಡದ ಹೆಸರನ್ನು ಬದಲಿಸಿಕೊಂಡರೆ ಅಚ್ಚರಿಯಿಲ್ಲ ಎಂದು ಅಭಿಮಾನಿಗಳು ಸಾಮಾಜಿಕ ತಾಣಗಳಲ್ಲಿ ಟ್ರೋಲ್‌ ಮಾಡಿದ್ದಾರೆ.

14ನೇ ಆವೃತ್ತಿಯ ಐಪಿಎಲ್‌ ಟೂರ್ನಿಗೂ ಮುನ್ನ ಪಂಜಾಬ್‌ ಫ್ರಾಂಚೈಸಿ ಕಿಂಗ್ಸ್‌ ಇಲೆವನ್ ಪಂಜಾಬ್‌ ಹೆಸರನ್ನು ಪಂಜಾಬ್ ಕಿಂಗ್ಸ್‌ ಎಂದು ಬದಲಿಸಿಕೊಂಡಿದೆ. ಹೊಸ ಹೆಸರು, ಹೊಸ ಲೋಗೋದೊಂದಿಗೆ ಈ ಬಾರಿ ಕಣಕ್ಕಿಳಿಯುತ್ತಿರುವ ಪಂಜಾಬ್‌ ತಂಡ ಚೊಚ್ಚಲ ಐಪಿಎಲ್‌ ಟ್ರೋಫಿ ಮೇಲೆ ಕಣ್ಣಿಟ್ಟಿದೆ. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

The Hundred 2026 ಕೊನೆಗೂ ವಿಕೆಟ್‌ ಕೀಪರ್ ಬ್ಯಾಟರ್‌ನಿಂದಲೇ ಕಪ್ ಗೆದ್ದ ಸಂಜೀವ್ ಗೋಯೆಂಕಾ..! ಐಪಿಎಲ್‌ನಲ್ಲೂ ಈ ಆಟಗಾರನಿಗೆ ಗಾಳ?
ಗವಾಸ್ಕರ್, ಸೆಹ್ವಾಗ್ ಕೈಬಿಟ್ಟು ಭಾರತದ ಸಾರ್ವಕಾಲಿಕ ಟಾಪ್-3 ಟೆಸ್ಟ್‌ ಬ್ಯಾಟರ್ ಆಯ್ಕೆ ಮಾಡಿದ ರವಿಚಂದ್ರನ್ ಅಶ್ವಿನ್! ಲಿಸ್ಟ್‌ನಲ್ಲಿವೆ ಅಚ್ಚರಿ ಹೆಸರು