ಇಂದಿನಿಂದ ಕಿರಿಯರ ಕ್ರಿಕೆಟ್‌ ವಿಶ್ವಕಪ್‌

By Kannadaprabha NewsFirst Published Jan 17, 2020, 9:34 AM IST
Highlights

ಬಹುನಿರೀಕ್ಷಿತ ಅಂಡರ್ 19 ವಿಶ್ವಕಪ್ ಟೂರ್ನಿ ಶುಕ್ರವಾರ(ಜ.17)ದಿಂದ ಆರಂಭವಾಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಆತಿಥೇಯ ದಕ್ಷಿಣ ಆಫ್ರಿಕಾ-ಆಫ್ಘಾನಿಸ್ತಾನಗಳು ಮುಖಾಮುಖಿಯಾಗಲಿವೆ. ಈ ಕುರಿತಾದ ವಿವರ ಇಲ್ಲಿದೆ ನೋಡಿ...

ಕೇಪ್‌ಟೌನ್‌(ಜ.17): 2020ರ ಐಸಿಸಿ ಅಂಡರ್‌-19 ಕ್ರಿಕೆಟ್‌ ವಿಶ್ವಕಪ್‌ಗೆ ಶುಕ್ರವಾರ ಚಾಲನೆ ಸಿಗಲಿದೆ.

ಅಂಡರ್‌ 19: ಯಶಸ್ವಿ ಜೈಸ್ವಾಲ್ ಅಬ್ಬರ, ಭಾರತಕ್ಕೆ ಸರಣಿ ಜಯ

ಹಾಲಿ ಚಾಂಪಿಯನ್‌ ಭಾರತ ಸೇರಿದಂತೆ ಒಟ್ಟು 16 ತಂಡಗಳು ಕಣಕ್ಕಿಳಿಯಲಿವೆ. ತಲಾ 4 ತಂಡಗಳಂತೆ ಒಟ್ಟು 4 ಗುಂಪುಗಳನ್ನು ರಚಿಸಲಾಗಿದೆ. ಗುಂಪಿನಲ್ಲಿ ಅಗ್ರ 2 ಸ್ಥಾನಗಳನ್ನು ಪಡೆಯುವ ತಂಡಗಳು ಕ್ವಾರ್ಟರ್‌ ಫೈನಲ್‌ ಹಂತಕ್ಕೆ ಪ್ರವೇಶಿಸಲಿವೆ. ಭಾರತ ತಂಡ ‘ಎ’ ಗುಂಪಿನಲ್ಲಿದ್ದು, ಜಪಾನ್‌, ನ್ಯೂಜಿಲೆಂಡ್‌ ಹಾಗೂ ಶ್ರೀಲಂಕಾ ತಂಡಗಳನ್ನು ಎದುರಿಸಲಿದೆ.

ಅಂಡರ್-19 ವಿಶ್ವಕಪ್‌ಗೆ ಭಾರತ ತಂಡ ಪ್ರಕಟ: ಯಾರಿಗೆಲ್ಲ ಚಾನ್ಸ್..?

‘ಬಿ’ ಗುಂಪಿನಲ್ಲಿ ಆಸ್ಪ್ರೇಲಿಯಾ, ಇಂಗ್ಲೆಂಡ್‌, ನೈಜೀರಿಯಾ ಹಾಗೂ ವೆಸ್ಟ್‌ಇಂಡೀಸ್‌ ತಂಡಗಳಿದ್ದರೆ, ‘ಸಿ’ ಗುಂಪಿನಲ್ಲಿ ಬಾಂಗ್ಲಾದೇಶ, ಪಾಕಿಸ್ತಾನ, ಸ್ಕಾಟ್ಲೆಂಡ್‌ ಹಾಗೂ ಜಿಂಬಾಬ್ವೆ ತಂಡಗಳಿವೆ. ‘ಡಿ’ ಗುಂಪಿನಲ್ಲಿ ಆಫ್ಘಾನಿಸ್ತಾನ, ಕೆನಡಾ, ದ.ಆಫ್ರಿಕಾ ಹಾಗೂ ಯುಎಇ ತಂಡಗಳು ಸ್ಥಾನ ಪಡೆದಿವೆ. ಉದ್ಘಾಟನಾ ಪಂದ್ಯದಲ್ಲಿ ಆತಿಥೇಯ ದ.ಆಫ್ರಿಕಾ ಹಾಗೂ ಆಫ್ಘಾನಿಸ್ತಾನ ಸೆಣಸಲಿವೆ. ಜ.19ರಂದು ಭಾರತ ತನ್ನ ಮೊದಲ ಪಂದ್ಯವನ್ನಾಡಲಿದ್ದು ಶ್ರೀಲಂಕಾವನ್ನು ಎದುರಿಸಲಿದೆ.

 

click me!