ಅಂಡರ್‌-19 ವಿಶ್ವಕಪ್‌: ಭಾರತ vs ಪಾಕ್‌ ಸೆಮೀಸ್‌!

Published : Feb 01, 2020, 09:51 AM IST
ಅಂಡರ್‌-19 ವಿಶ್ವಕಪ್‌: ಭಾರತ vs ಪಾಕ್‌ ಸೆಮೀಸ್‌!

ಸಾರಾಂಶ

ಅಂಡರ್ 19 ವಿಶ್ವಕಪ್ ಟೂರ್ನಿಯ ಸೆಮಿಫೈನಲ್‌ನಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ-ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲು ವೇದಿಕೆ ರೆಡಿಯಾಗಿದೆ. ಈ ಕುರಿತಾದ ವಿವರ ಇಲ್ಲಿದೆ ನೋಡಿ..

ಬೆನೊನಿ(ಫೆ.01): ಅಂಡರ್‌-19 ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಹಾಲಿ ಚಾಂಪಿಯನ್‌ ಭಾರತಕ್ಕೆ ಬದ್ಧವೈರಿ ಪಾಕಿಸ್ತಾನ ಎದುರಾಗಲಿದೆ. ಫೆ.4ರಂದು ಪೊಚೆಫ್ ಸ್ಟ್ರೋಮ್‌ನಲ್ಲಿ ಮುಖಾಮುಖಿಯಾಗಲಿವೆ. 

ಶುಕ್ರವಾರ ನಡೆದ ಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ ಪಾಕಿಸ್ತಾನ, ಆಫ್ಘಾನಿಸ್ತಾನ ವಿರುದ್ಧ 6 ವಿಕೆಟ್‌ಗಳ ಗೆಲುವು ಸಾಧಿಸಿತು. ಭಾರತ ಕ್ವಾರ್ಟರ್‌ ಫೈನಲ್‌ನಲ್ಲಿ ಆಸ್ಪ್ರೇಲಿಯಾವನ್ನು ಸೋಲಿಸಿ ಸೆಮೀಸ್‌ಗೇರಿತ್ತು. ಇದೀಗ ಹಾಲಿಚಾಂಪಿಯನ್ ಭಾರತ ಹಾಗೂ ಪಾಕಿಸ್ತಾನ ನಡುವಿನ ಕಾದಾಟ ಸಾಕಷ್ಟು ರೋಚಕತೆಯನ್ನು ಹುಟ್ಟುಹಾಕಿದೆ. 

ಶುಕ್ರವಾರ ಮೊದಲು ಬ್ಯಾಟ್‌ ಮಾಡಿದ ಆಫ್ಘಾನಿಸ್ತಾನ 49.1 ಓವರಲ್ಲಿ 189 ರನ್‌ಗೆ ಆಲೌಟ್‌ ಆಯಿತು. ಪಾಕಿಸ್ತಾನ 41.1 ಓವರಲ್ಲಿ 4 ವಿಕೆಟ್‌ ನಷ್ಟಕ್ಕೆ 190 ರನ್‌ ಗಳಿಸಿತು.

ಮತ್ತೊಂದು ಸೆಮಿಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶ ಹಾಗೂ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಲಿವೆ.

ಸ್ಕೋರ್‌: ಆಫ್ಘನ್‌ 189
ಪಾಕಿಸ್ತಾನ 190/4
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

19 ಬೌಂಡರಿ, 8 ಸಿಕ್ಸರ್, 143 ಎಸೆತಗಳಲ್ಲಿ 173 ರನ್..! ತಂದೆ ಸೆಹ್ವಾಗ್‌ ರೀತಿ ಮೈದಾನದಲ್ಲಿ ಘರ್ಜಿಸಿದ ಆರ್ಯವೀರ್..!
ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಪ್ರತಿ ಏಕದಿನ ಪಂದ್ಯ ಆಡಿದ ಬಳಿಕ ಬಿಸಿಸಿಐನಿಂದ ಗಳಿಸುವ ಸಂಬಳ ಎಷ್ಟು?