ಭಾರತ-ಇಂಗ್ಲೆಂಡ್ ಏಕದಿನ ಸರಣಿ; ಫ್ಯಾನ್ಸ್ ಪ್ರವೇಶ ಕುರಿತು ನಿರ್ಧಾರ ಪ್ರಕಟಿಸಿದ ಮುಖ್ಯಮಂತ್ರಿ!

Published : Feb 27, 2021, 10:01 PM IST
ಭಾರತ-ಇಂಗ್ಲೆಂಡ್ ಏಕದಿನ ಸರಣಿ; ಫ್ಯಾನ್ಸ್ ಪ್ರವೇಶ ಕುರಿತು ನಿರ್ಧಾರ ಪ್ರಕಟಿಸಿದ ಮುಖ್ಯಮಂತ್ರಿ!

ಸಾರಾಂಶ

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿ ಅಂತಿ ಘಟ್ಟ ತಲುಪಿದೆ. ಟೆಸ್ಟ್ ಸರಣಿ ಬಳಿಕ ಟಿ20 ಹಾಗೂ ಏಕದಿನ ಸರಣಿ ಆರಂಭಗೊಳ್ಳಲಿದೆ. ನಿಗದಿತ ಓವರ್ ಪಂದ್ಯಕ್ಕೆ ಅಭಿಮಾನಿಗಳ ಪ್ರವೇಶ ಕುರಿತು ಬಿಸಿಸಿಐ ಸಿಹಿ ಸುದ್ದಿ ನೀಡಿತ್ತು. ಇದೀಗ ಪುಣೆಯಲ್ಲಿ ಆಯೋಜಿಸಿರುವ ಏಕದಿನ ಸರಣಿಗೆ ಅಭಿಮಾನಿಗಳ ಪ್ರವೇಶ ಕುರಿತು ಸಿಎಂ ಉದ್ದವ್ ಠಾಕ್ರೆ ಪ್ರಕಟಣೆ ಹೊರಡಿಸಿದ್ದಾರೆ.  

ಮುಂಬೈ(ಫೆ.27): ಭಾರತ ಹಾಗೂ ಇಂಗ್ಲೆಂಡ್ ನಡುವಿನ ಕ್ರಿಕೆಟ್ ಸರಣಿ ಆರಂಭಕ್ಕೂ ಮುನ್ನವೇ ಅಭಿಮಾನಿಗಳ ಪ್ರವೇಶಕ್ಕೆ ಬಿಸಿಸಿಐ ಮನಸ್ಸು ಮಾಡಿತ್ತು. ಈ ಕುರಿತು ಅಭಿಮಾನಿಗಗಳಿಗೆ ಸಿಹಿ ಸುದ್ದಿ ನೀಡಿತ್ತು. ಆದರೆ ಪುಣೆಯಲ್ಲಿ ಆಯೋಜಿಸಿರುವ 3 ಪಂದ್ಯಗಳ ಏಕದಿನ ಸರಣಿಗೆ ಅಭಿಮಾನಿಗಳ ಪ್ರವೇಶ ಇಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸ್ಪಷ್ಟಪಡಿಸಿದ್ದಾರೆ.

ಜಸ್ಪ್ರೀತ್ ಮನವಿಗೆ ಸ್ಪಂದಿಸಿದ ಬಿಸಿಸಿಐ; 4ನೇ ಟೆಸ್ಟ್ ಪಂದ್ಯಕ್ಕೆ ಬುಮ್ರಾ ಅಲಭ್ಯ!

ಮಹಾರಾಷ್ಟ್ರದಲ್ಲಿ ಕೊರೋನಾ ವೈರಸ್ ಹೆಚ್ಚಾಗುತ್ತಿರುವ ಕಾರಣ, ಉದ್ಧವ್ ಠಾಕ್ರೆ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಮದುವೆ ಸಮಾರಂಭ, ಕಾರ್ಯಕ್ರಮಗಳಿಗೆ ನಿರ್ಬಂಧ ಹೇರಲಾಗಿದೆ. ಆದರೆ ಕ್ರಿಕೆಟ್ ಸರಣಿಗೆ ಗ್ರೀನ್ ಸಿಗ್ನಿಲ್ ನೀಡಿರುವ ಮುಖ್ಯಮಂತ್ರಿ, ಅಭಿಮಾನಿಗಳ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.

ಮಾರ್ಚ್ 23 ರಿಂದ ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆ ಕ್ರೀಡಾಂಗಣದಲ್ಲಿ ಮೂರು ಪಂದ್ಯದ ಏಕದಿನ ಸರಣಿ ಆಯೋಜಿಸಲಾಗಿದೆ. 

ಏಕದಿನ ಸರಣಿ:
ಮಾರ್ಚ್ 23: ಭಾರತ-ಇಂಗ್ಲೆಂಡ್ 1ನೇ ಏಕದಿನ
ಮಾರ್ಚ್ 26: ಭಾರತ-ಇಂಗ್ಲೆಂಡ್ 2ನೇ ಏಕದಿನ
ಮಾರ್ಚ್ 28: ಭಾರತ-ಇಂಗ್ಲೆಂಡ್ 3ನೇ ಏಕದಿನ

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೆಹೆಂದಿಯಾಗಿತ್ತು, ಆದರೆ ಮದುವೆಯಾಗಲ್ಲ: ಕೊನೆಗೂ Palash Muchhal ಜೊತೆಗಿನ ಸಂಬಂಧಕ್ಕೆ ತೆರೆ ಎಳೆದ Smriti Mandhana
ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ