
ಐರ್ಲೆಂಡ್ ವಿರುದ್ಧ ನಡೆದ ಟಿ20 ಸರಣಿಯಲ್ಲಿ ವೈಭವ್ ಸೂರ್ಯವಂಶಿ ಮೈದಾನಕ್ಕಿಳಿಯಲಿಲ್ಲ. ಟೀಂ ಇಲವೆನ್ ನಲ್ಲಿ ವೈಭವ್ ಸೂರ್ಯವಂಶಿಗೆ ಅವಕಾಶ ಸಿಕ್ಕಿರಲಿಲ್ಲ. ಟಿ20 ವಿಶ್ವಕಪ್ ಚಾಂಪಿಯನ್ ಭಾರತ ಎರಡು ಪಂದ್ಯಗಳ ಸರಣಿಯನ್ನು 0-2 ಅಂತರದಿಂದ ಸೋತಿದೆ. ಎರಡನೇ ಪಂದ್ಯವನ್ನು ಭಾರತ ಕೇವಲ ಒಂದು ರನ್ನಿಂದ ಸೋತಿದ್ದು, ಯುವ ಬ್ಯಾಟ್ಸ್ಮನ್ಗೆ ಅವಕಾಶ ನಿರಾಕರಿಸುವ ನಿರ್ಧಾರವನ್ನು ಕ್ರಿಕೆಟ್ ಫ್ಯಾನ್ಸ್ ವಿರೋಧಿಸಿದ್ದಾರೆ.
ಐರ್ಲೆಂಡ್ ವಿರುದ್ಧ ವೈಭವ್ ಸೂರ್ಯವಂಶಿ ಏಕೆ ಆಡ್ಲಿಲ್ಲ ಎಂಬುದನ್ನು ಭಾರತದ ಸಹಾಯಕ ಕೋಚ್ ರಿಯಾನ್ ಟೆನ್ ಡೋಸ್ಚೇಟ್ ಸ್ಪಷ್ಟಪಡಿಸಿದ್ದಾರೆ. ವೈಭವ್ ಸೂರ್ಯವಂಶಿ ಅಂತರರಾಷ್ಟ್ರೀಯ ಕ್ರಿಕೆಟ್ ಆಡಲು ಸಂಪೂರ್ಣವಾಗಿ ಸಿದ್ಧರಾಗಿದ್ದಾರೆ. ಆದ್ರೆ ಟೀಂನಲ್ಲಿ ಸ್ಥಾನ ಪಡೆಯಲು ನಿಗದಿತ ಪ್ರಕ್ರಿಯೆಯ ಮೂಲಕ ಹೋಗಬೇಕಾಗುತ್ತದೆ ಎಂದಿದ್ದಾರೆ. ರಿಯಾನ್ ಟೆನ್ ಡೋಸ್ಚೇಟ್ ಪ್ರಕಾರಮ ವೈಭವ್ ಅಂತರರಾಷ್ಟ್ರೀಯ ಕ್ರಿಕೆಟ್ಗೆ ಸಂಪೂರ್ಣವಾಗಿ ಸಿದ್ಧರಾಗಿದ್ದಾರೆ. ಅದರ ಬಗ್ಗೆ ಯಾವುದೇ ಸಂದೇಹವಿಲ್ಲ. ಮೂರು ತಿಂಗಳ ಹಿಂದೆ ಟಿ20 ವಿಶ್ವಕಪ್ ಗೆಲ್ಲಲು ಸಹಾಯ ಮಾಡಿದ ಪ್ರಮುಖ ಆಟಗಾರ ಸಂಜು ಸ್ಯಾಮ್ಸನ್. ಅವರು ಐಪಿಎಲ್ ನಲ್ಲಿ ಅದ್ಭುತ ಪ್ರದರ್ಶನ ತೋರಿದ್ದರು. ಆಟಗಾರರ ಆತ್ಮವಿಶ್ವಾಸ ಕಾಯ್ದುಕೊಳ್ಳುವುದು ಬಹಳ ಮುಖ್ಯ. ಪ್ರತಿಯೊಬ್ಬ ಆಟಗಾರನು ಸ್ಥಿರವಾದ ಅವಕಾಶಗಳನ್ನು ಪಡೆಯುತ್ತಾನೆ ಅಂತ ಸಹಾಯಕ ಕೋಚ್ ಹೇಳಿದ್ದಾರೆ.
ವೈಭವ್ , ಪ್ರತಿಭೆಗೆ ತಂಡದ ಆಡಳಿತ ಮಂಡಳಿ ಸಂಪೂರ್ಣವಾಗಿ ಪ್ರಭಾವಿತವಾಗಿದೆ. ಆದ್ರೆ ಆತುರದಲ್ಲಿ ನಿರ್ಧಾರ ತೆಗೆದುಕೊಳ್ತಿಲ್ಲ. ನಾವೆಲ್ಲರೂ ವೈಭವ್ ಆಟವನ್ನು ನೋಡಲು ಉತ್ಸುಕರಾಗಿದ್ದೇವೆ. ಅವರು ತುಂಬಾ ವಿಶೇಷ ಆಟಗಾರ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ. ಆದರೆ ಅವರು ಇತರ ಆಟಗಾರರು ತಮ್ಮ ಚೊಚ್ಚಲ ಪಂದ್ಯ ಆಡುವ ಮೊದಲು ಅನುಭವಿಸಿದ ಅದೇ ಪ್ರಕ್ರಿಯೆಯ ಮೂಲಕ ಹೋಗಬೇಕಾಗುತ್ತದೆ ಎಂದಿದ್ದಾರೆ.
ಐರ್ಲೆಂಡ್ ಎದುರು ಹೀನಾಯ ಸೋಲಿನ ಬೆನ್ನಲ್ಲೇ ಅಚ್ಚರಿ ಹೇಳಿಕೆ ಕೊಟ್ಟ ಟೀಂ ಇಂಡಿಯಾ ನಾಯಕ ಶ್ರೇಯಸ್ ಅಯ್ಯರ್!
ವೈಭವ್ ಸೂರ್ಯವಂಶಿ ಐಪಿಎಲ್ 2026 ರಲ್ಲಿ 230 ಕ್ಕಿಂತ ಹೆಚ್ಚು ಸ್ಟ್ರೈಕ್ ರೇಟ್ನೊಂದಿಗೆ 776 ರನ್ ಗಳಿಸಿದ್ದರು. ಐರ್ಲೆಂಡ್ ವಿರುದ್ಧ ತಮ್ಮ ಮೊದಲ ಅಂತರಾಷ್ಟ್ರೀಯ ಪಂದ್ಯ ಆಡ್ತಾರೆ ಎಂಬ ನಂಬಿಕೆ ಇತ್ತು. ಆದ್ರೆ ಅದು ಸುಳ್ಳಾಗಿದೆ. ಈಗ ಟೀಂ ಇಂಡಿಯಾ ಜುಲೈ 1 ರಿಂದ ಇಂಗ್ಲೆಂಡ್ ವಿರುದ್ಧ T20 ಸರಣಿಯನ್ನು ಆಡಲಿದೆ. ಇದ್ರಲ್ಲಿ ವೈಭವ್ ಮೈದಾನಕ್ಕಿಳಿಯುವ ಸಾಧ್ಯತೆ ಇದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.