ಮತ್ತೆ ಆರೆಂಜ್ ಕ್ಯಾಪ್ ಮುಡಿಗೇರಿಸಿಕೊಂಡ ವೈಭವ್ ಸೂರ್ಯವಂಶಿ! ಟಾಪ್-5 ಗರಿಷ್ಠ ರನ್ ಸರದಾರರ ಪಟ್ಟಿಯಿಂದ ವಿರಾಟ್ ಕೊಹ್ಲಿ ಔಟ್!

Published : May 28, 2026, 04:12 PM IST
Vaibhav Sooryavanshi

ಸಾರಾಂಶ

ಐಪಿಎಲ್ ಎಲಿಮಿನೇಟರ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಸ್ಪೋಟಕ 97 ರನ್ ಗಳಿಸಿದ ವೈಭವ್ ಸೂರ್ಯವಂಶಿ, ಆರೆಂಜ್ ಕ್ಯಾಪ್ ಅನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಪ್ರದರ್ಶನದ ಮೂಲಕ ಅವರು ಒಂದೇ ಸೀಸನ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಮತ್ತು 200ಕ್ಕೂ ಹೆಚ್ಚು ಸ್ಟ್ರೈಕ್ ರೇಟ್‌ನಲ್ಲಿ 600+ ರನ್ ಗಳಿಸಿದ ಮೊದಲ ಆಟಗಾರ ಎಂಬಂತಹ ಹಲವು ದಾಖಲೆಗಳನ್ನು ಬರೆದಿದ್ದಾರೆ.

ಬೆಂಗಳೂರು: ಐಪಿಎಲ್ ಎಲಿಮಿನೇಟರ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ವೈಭವ್ ಸೂರ್ಯವಂಶಿ ಸ್ಪೋಟಕ ಅರ್ಧಶತಕ ಸಿಡಿಸಿದ್ದಾರೆ. ಈ ಮೂಲಕ ಅವರು ಅತಿ ಹೆಚ್ಚು ರನ್ ಗಳಿಸಿದ ಆಟಗಾರನಿಗೆ ನೀಡುವ ಆರೆಂಜ್ ಕ್ಯಾಪ್ ಅನ್ನು ತಮ್ಮದಾಗಿಸಿಕೊಂಡಿದ್ದಾರೆ. ಕೇವಲ 29 ಎಸೆತಗಳಲ್ಲಿ 97 ರನ್ ಚಚ್ಚಿದ ವೈಭವ್, ಒಟ್ಟು 15 ಪಂದ್ಯಗಳಿಂದ 680 ರನ್‌ಗಳೊಂದಿಗೆ ಸಾಯಿ ಸುದರ್ಶನ್ ಅವರನ್ನು ಹಿಂದಿಕ್ಕಿ ಆರೆಂಜ್ ಕ್ಯಾಪ್ ತಮ್ಮದಾಗಿಸಿಕೊಂಡರು.

ಹಲವು ಅಪರೂಪದ ದಾಖಲೆ ಬರೆದ ವೈಭವ್ ಸೂರ್ಯವಂಶಿ

ಈ ಸೀಸನ್‌ನಲ್ಲಿ ವೈಭವ್ ಒಟ್ಟು 65 ಸಿಕ್ಸರ್‌ ಮತ್ತು 55 ಬೌಂಡರಿಗಳನ್ನು ಬಾರಿಸಿದ್ದಾರೆ. 45.33ರ ಸರಾಸರಿ ಮತ್ತು 242.85ರ ಸ್ಟ್ರೈಕ್ ರೇಟ್‌ನಲ್ಲಿ ರನ್ ಗಳಿಸಿದ್ದಾರೆ. ಒಂದೇ ಐಪಿಎಲ್ ಸೀಸನ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಅಷ್ಟೇ ಅಲ್ಲ, 200ಕ್ಕೂ ಹೆಚ್ಚು ಸ್ಟ್ರೈಕ್ ರೇಟ್‌ನಲ್ಲಿ 600ಕ್ಕೂ ಹೆಚ್ಚು ರನ್ ಗಳಿಸಿದ ಮೊದಲ ಆಟಗಾರ ಎನ್ನುವ ದಾಖಲೆಯೂ ಇದೀಗ ವೈಭವ್ ಪಾಲಾಗಿದೆ. ಇದಷ್ಟೇ ಅಲ್ಲದೇ ಅತಿವೇಗವಾಗಿ 600 ರನ್ ಬಾರಿಸಿದ ಅನ್‌ಕ್ಯಾಪ್ಡ್ ಆಟಗಾರನಾಗಿ ವೈಭವ್ ಸೂರ್ಯವಂಶಿ ಹೊರಹೊಮ್ಮಿದ್ದಾರೆ

ಗುಜರಾತ್ ತಂಡದ ಓಪನರ್ ಸಾಯಿ ಸುದರ್ಶನ್ 15 ಪಂದ್ಯಗಳಿಂದ 652 ರನ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ರಾಜಸ್ಥಾನ ವಿರುದ್ಧ 10 ಎಸೆತಗಳಲ್ಲಿ 18 ರನ್ ಗಳಿಸಿ ಔಟಾದ ಹೈದರಾಬಾದ್‌ನ ಹೆನ್ರಿಚ್ ಕ್ಲಾಸೆನ್, 15 ಪಂದ್ಯಗಳಿಂದ 624 ರನ್‌ಗಳೊಂದಿಗೆ ಗುಜರಾತ್ ನಾಯಕ ಶುಭಮನ್ ಗಿಲ್ ಅವರನ್ನು ಹಿಂದಿಕ್ಕಿ ಮೂರನೇ ಸ್ಥಾನಕ್ಕೆ ಜಿಗಿದಿದ್ದಾರೆ. ಗಿಲ್ 618 ರನ್‌ಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ. ರಾಜಸ್ಥಾನ ವಿರುದ್ಧ 11 ಎಸೆತಗಳಲ್ಲಿ 33 ರನ್ ಸಿಡಿಸಿದ ಇಶಾನ್ ಕಿಶನ್, 602 ರನ್‌ಗಳೊಂದಿಗೆ ಈ ಸೀಸನ್ ಮುಗಿಸಿದ್ದಾರೆ. ಅವರು ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿ ಸದ್ಯ ಐದನೇ ಸ್ಥಾನದಲ್ಲಿದ್ದಾರೆ.

ಟಾಪ್-5 ಪಟ್ಟಿಯಿಂದ ಹೊರಬಿದ್ದ ವಿರಾಟ್ ಕೊಹ್ಲಿ

ಕ್ವಾಲಿಫೈಯರ್-1 ಪಂದ್ಯದಲ್ಲಿ ಅರ್ಧಶತಕ ಸಿಡಿಸಲು ವಿಫಲವಾದ ವಿರಾಟ್ ಕೊಹ್ಲಿ ಇದೀಗ ಆರೆಂಜ್‌ ಕ್ಯಾಪ್‌ ರೇಸ್‌ನಲ್ಲಿ ಟಾಪ್-5 ಪಟ್ಟಿಯಿಂದ ಹೊರಬಿದ್ದಿದ್ದಾರೆ. ಸದ್ಯ ಆರ್‌ಸಿಬಿ ರನ್ ಮಷೀನ್ ವಿರಾಟ್ ಕೊಹ್ಲಿ 600 ರನ್‌ಗಳೊಂದಿಗೆ ಆರನೇ ಸ್ಥಾನದಲ್ಲಿದ್ದರೆ, ಕೆ.ಎಲ್. ರಾಹುಲ್ 593 ರನ್‌ಗಳೊಂದಿಗೆ ಏಳನೇ ಸ್ಥಾನದಲ್ಲಿದ್ದಾರೆ. ಹೈದರಾಬಾದ್‌ನ ಅಭಿಷೇಕ್ ಶರ್ಮಾ 563 ರನ್‌ಗಳೊಂದಿಗೆ ಎಂಟನೇ ಸ್ಥಾನದಲ್ಲಿದ್ದಾರೆ. ನಿನ್ನೆ ರಾಜಸ್ಥಾನ ವಿರುದ್ಧದ ಪಂದ್ಯದಲ್ಲಿ ಅಭಿಷೇಕ್ ಶೂನ್ಯಕ್ಕೆ ಔಟಾಗಿದ್ದರು. ಲಖನೌ ಸೂಪರ್ ಜೈಂಟ್ಸ್‌ ತಂಡದ ಓಪನರ್ ಮಿಚೆಲ್ ಮಾರ್ಷ್ 563 ರನ್‌ಗಳೊಂದಿಗೆ ಒಂಬತ್ತನೇ ಸ್ಥಾನದಲ್ಲಿದ್ದಾರೆ. ಪಂಜಾಬ್ ಓಪನರ್ ಪ್ರಭ್‌ಸಿಮ್ರಾನ್ ಸಿಂಗ್ 510 ರನ್‌ಗಳೊಂದಿಗೆ ಟಾಪ್ 10 ಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದಿದ್ದಾರೆ. ನಿನ್ನೆ ಹೈದರಾಬಾದ್ ವಿರುದ್ಧ 21 ಎಸೆತಗಳಲ್ಲಿ 50 ರನ್ ಗಳಿಸಿದ ರಾಜಸ್ಥಾನ ಆಟಗಾರ ಧ್ರುವ್ ಜುರೆಲ್, 15 ಪಂದ್ಯಗಳಿಂದ 508 ರನ್‌ಗಳೊಂದಿಗೆ 11ನೇ ಸ್ಥಾನಕ್ಕೆ ಏರಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಆಂಟಿಲಿಯಾದಲ್ಲಿ ಫ್ಲಾಟ್, ಮಾಲ್ಡೀವ್ಸ್‌ ನಲ್ಲಿ ಐಲ್ಯಾಂಡ್ ಜೊತೆ 30 ಕೋಟಿ ಚೆಕ್ ! ಮುಂಬೈ ಇಂಡಿಯನ್ಸ್ ಸೇರ್ತಾರಾ ವೈಭವ್ ಸೂರ್ಯವಂಶಿ?
20 ಲಕ್ಷಕ್ಕೆ RCB ಸೇರಿ ನಾಲ್ಕೇ ನಾಲ್ಕು ಪಂದ್ಯಗಳಲ್ಲಿ ತಂಡಕ್ಕೆ ಬೇಡವಾಗಿದ್ದನು ಈಗ ಬೆಲೆ ಕಟ್ಟಲಾಗದ ನಾಯಕನಾಗಿ ಬಿಟ್ಟ..!