ಜಿಂಬಾಬ್ವೆ ಎದುರಿನ ಟಿ20 ಸರಣಿಗೆ ಭಾರತ ತಂಡ ಪ್ರಕಟವಾಗುತ್ತಿದ್ದಂತೆಯೇ ಬೇಸರ ಹೊರಹಾಕಿದ ಐಪಿಎಲ್ ಸ್ಟಾರ್..!

By Kannadaprabha News  |  First Published Jun 25, 2024, 9:40 AM IST

ಟಿ20 ವಿಶ್ವಕಪ್‌ನಲ್ಲಿ ಆಡುತ್ತಿರುವ ರೋಹಿತ್‌ ಶರ್ಮಾ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಜಸ್‌ಪ್ರೀತ್‌ ಬುಮ್ರಾ, ಮೊಹಮದ್ ಸಿರಾಜ್, ಕುಲೀಪ್ ಯಾದವ್ ಸೇರಿ ಬಹುತೇಕರಿಗೆ ವಿಶ್ರಾಂತಿ ನೀಡಲಾಗಿದೆ.


ನವದೆಹಲಿ: 17ನೇ ಆವೃತ್ತಿಯ ಐಪಿಎಲ್‌ನಲ್ಲಿ ಮಿಂಚಿದ ಆಟಗಾರರನ್ನು ಬಿಸಿಸಿಐ ಮುಂದಿನ ತಿಂಗಳ ಜಿಂಬಾಬ್ವೆ ಪ್ರವಾಸಕ್ಕೆ ಆಯ್ಕೆ ಮಾಡಿದೆ. 5 ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ ತಂಡವನ್ನು ಶುಭಮನ್ ಗಿಲ್ ಮುನ್ನಡೆಸಲಿದ್ದಾರೆ.

ಟಿ20 ವಿಶ್ವಕಪ್‌ನಲ್ಲಿ ಆಡುತ್ತಿರುವ ರೋಹಿತ್‌ ಶರ್ಮಾ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಜಸ್‌ಪ್ರೀತ್‌ ಬುಮ್ರಾ, ಮೊಹಮದ್ ಸಿರಾಜ್, ಕುಲೀಪ್ ಯಾದವ್ ಸೇರಿ ಬಹುತೇಕರಿಗೆ ವಿಶ್ರಾಂತಿ ನೀಡಲಾಗಿದೆ.

Tap to resize

Latest Videos

undefined

T20 World Cup 2024: ಆಸೀಸ್ ಬಗ್ಗುಬಡಿದ ಟೀಂ ಇಂಡಿಯಾ ಸೆಮಿಫೈನಲ್‌ಗೆ ಲಗ್ಗೆ

ಚಾನ್ಸ್‌ ಸಿಗದ್ದಕ್ಕೆ ವರುಣ್ ಬೇಸರ!

2021ರ ಟಿ20 ವಿಶ್ವಕಪ್ ತಂಡದಲ್ಲಿದ್ದ 2024ರ ಐಪಿಎಲ್‌ನಲ್ಲಿ ಉತ್ತಮ ಪ್ರದರ್ಶನ ತೋರಿದ ಲೆಗ್ ಸ್ಪಿನ್ನರ್ ವರುಣ್ ಚಕ್ರವರ್ತಿ ತಮ್ಮನ್ನು ಜಿಂಬಾಬ್ವೆ ವಿರುದ್ಧದ ಸರಣಿಗೆ ಆಯ್ಕೆ ಮಾಡದ್ದಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಇನ್ ಸ್ಟಾಗ್ರಾಂನಲ್ಲಿ ತಮ್ಮ ಅಳಲು ತೋಡಿಕೊಂಡಿರುವ ವರುಣ್, 'ನಾನೂ ಸಹ ಪಿಆರ್ (ಪ್ರಚಾರ) ಸಂಸ್ಥೆಯೊಂದರ ನೆರವು ಪಡೆಯಬೇಕಿತ್ತು' ಎಂದು ಬರೆದುಕೊಂಡಿದ್ದಾರೆ.

ಇದೇ ಮೊದಲ ಬಾರಿಗೆ ರಿಯಾನ್ ಪರಾಗ್, ಅಭಿಷೇಕ್ ಶರ್ಮಾ, ನಿತೀಶ್ ರೆಡ್ಡಿಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ. ಈ ಮೂವರು 2024ರ ಐಪಿಎಲ್‌ನಲ್ಲಿ ಅಮೋಘ ಪ್ರದರ್ಶನ ನೀಡಿ ಆಯ್ಕೆಗಾರರ ಗಮನ ಸೆಳೆದಿದ್ದರು. ಇನ್ನು, ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಮಿಂಚಿದ್ದ ಧೃವ್ ಜುರೆಲ್ ಮೊದಲ ಬಾರಿಗೆ ಟಿ20 ತಂಡಕ್ಕೆ ಆಯ್ಕೆಯಾಗಿದ್ದಾರೆ. ಇದೇ ವೇಳೆ ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮನ್, ರಿಂಕು ಸಿಂಗ್ ಸೇರಿ ಇನ್ನೂ ಕೆಲವು ಅನುಭವಿ ಆಟಗಾರರೂ ತಂಡದಲ್ಲಿದ್ದಾರೆ. ಜು.6ರಿಂದ ಜು.14ರ ವರೆಗೂ ಸರಣಿ ನಡೆಯಲಿದೆ.

ಟಿ20 ಸರಣಿಗೆ ಭಾರತ ತಂಡ: 

ಶುಭಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಋತುರಾಜ್ ಗಾಯಕ್ವಾಡ್, ಅಭಿಷೇಕ್ ಶರ್ಮಾ, ರಿಂಕು ಸಿಂಗ್, ಸಂಜು ಸ್ಯಾಮನ್, ಧೃವ್ ಜುರೆಲ್, ನಿತೀಶ್ ಕುಮಾರ್ ರೆಡ್ಡಿ, ರಿಯಾನ್ ಪರಾಗ್, ವಾಷಿಂಗ್ಟನ್ ಸುಂದರ್, ರವಿ ಬಿಟ್ಟೋಯ್, ಆವೇಶ್ ಖಾನ್, ಖಲೀಲ್ ಅಹ್ಮದ್, ಮುಕೇಶ್ ಕುಮಾರ್, ತುಷಾರ್ ದೇಶಪಾಂಡೆ.
 

click me!