ವೇದಾ ಕೃಷ್ಣಮೂರ್ತಿ ಆರ್ಭಟಕ್ಕೆ ಮಂಕಾದ ತಮಿಳುನಾಡು

Published : Mar 18, 2021, 08:40 AM IST
ವೇದಾ ಕೃಷ್ಣಮೂರ್ತಿ ಆರ್ಭಟಕ್ಕೆ ಮಂಕಾದ ತಮಿಳುನಾಡು

ಸಾರಾಂಶ

ಕರ್ನಾಟಕದ ಅನುಭವಿ ಬ್ಯಾಟ್ಸ್‌ವುಮೆನ್‌ ವೇದಾ ಕೃಷ್ಣಮೂರ್ತಿ ಬಾರಿಸಿದ ಆಕರ್ಷಕ ಶತಕದ ನೆರವಿನಿಂದ ತಮಿಳುನಾಡು ವಿರುದ್ದ ಕರ್ನಾಟಕ ಮಹಿಳಾ ತಂಡ ಭರ್ಜರಿ ಗೆಲುವು ದಾಖಲಿಸಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

ಚೆನ್ನೈ(ಮಾ.18): ರಾಷ್ಟ್ರೀಯ ಏಕದಿನ ಟೂರ್ನಿಯಲ್ಲಿ ತಮ್ಮ ಪ್ರಾಬಲ್ಯ ಮುಂದುವರೆಸಿರುವ ಕರ್ನಾಟಕ ಮಹಿಳಾ ತಂಡ ಹ್ಯಾಟ್ರಿಕ್‌ ಗೆಲುವು ಸಾಧಿಸಿದೆ. 

ಬುಧವಾರ ತಮಿಳುನಾಡು ವಿರುದ್ಧ ನಡೆದ ಪಂದ್ಯದಲ್ಲಿ ವೇದಾ ಕೃಷ್ಣಮೂರ್ತಿ ಗಳಿಸಿದ ಅಮೋಘ ಶತಕದ ನೆರವಿನಿಂದ ಕರ್ನಾಟಕ 86 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಇದರೊಂದಿಗೆ ಎಲೈಟ್‌ ‘ಇ’ ಗುಂಪಿನಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದ್ದು, ನಾಕೌಟ್‌ ಹಂತಕ್ಕೇರುವ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ. ನಿಕಿ ಪ್ರಸಾದ್‌ ಆಲ್ರೌಂಡ್‌ ಪ್ರದರ್ಶನ ಕರ್ನಾಟಕ ತಂಡದ ಗೆಲುವಿನಲ್ಲಿ ತಮ್ಮದೇ ಆದ ಮಹತ್ವದ ಕಾಣಿಕೆ ನೀಡಿದ್ದಾರೆ.  

ಕೊನೆಯ ಪಂದ್ಯದಲ್ಲೂ ಸೋಲಿನ ಕಹಿಯುಂಡ ಮಿಥಾಲಿ ಪಡೆ

ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡ ಕರ್ನಾಟಕ ವೇದಾ(103) ಹಾಗೂ ಶುಭಾ(60)ರ ಆಕರ್ಷಕ ಆಟದ ನೆರವಿನಿಂದ 50 ಓವರ್‌ಗಳಲ್ಲಿ 6 ವಿಕೆಟ್‌ ಕಳೆದುಕೊಂಡು 294 ರನ್‌ ಪೇರಿಸಿತು. ಈ ಬೃಹತ್‌ ಮೊತ್ತ ಬೆನ್ನತ್ತಿದ್ದ ತಮಿಳುನಾಡು 208 ರನ್‌ಗಳಿಗೆ ಆಲೌಟ್‌ ಆಯಿತು.

ಸ್ಕೋರ್‌: 
ಕರ್ನಾಟಕ: 294/6,
ತಮಿಳುನಾಡು 208/10

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಇಂಗ್ಲೆಂಡ್‌ನಲ್ಲಿ ಭಾರತ ದಿವ್ಯಾಂಗ ಕ್ರಿಕೆಟ್‌ ತಂಡದ ಪರ ಆಡಲಿದ್ದಾನೆ ವಿಜಯಪುರದ ಚಿಂದಿ ಆಯುವವನ ಪುತ್ರ
ಕೊಹ್ಲಿ, ಸಚಿನ್‌, ಧೋನಿ ಬಳಿ ಇದು ಆಗಲಿಲ್ಲ.. ಅಪರೂಪದ ದಾಖಲೆಗೆ KL ರಾಹುಲ್‌ ರೆಡಿ..!