
ಬೆಂಗಳೂರು (ನ.24) ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವೆಂಕಟೇಶ್ ಪ್ರಸಾದ್ ವಿರುದ್ಧ ಕೆಎಸ್‌ಸಿಎ ಮಾಜಿ ಅಧ್ಯಕ್ಷ ಬ್ರಿಜೇಶ್ ಪಟೇಲ್ ಬಣದ ಶಾಂತಕುಮಾರ್ ಸ್ಪರ್ಧಿಸಿದ್ದರು. ಆದರೆ ತಾಂತ್ರಿಕ ದೋಷಗಳ ಕಾರಣ ಶಾಂತಕುಮಾರ್ ನಾಮಪತ್ರ ತಿರಸ್ಕೃತಗೊಂಡ ಹಿನ್ನಲೆಯಲ್ಲಿ ವೆಂಕಟೇಶ್ ಪ್ರಸಾದ್ ಯಾವುದೇ ಅಡೆ ತಡೇ ಇಲ್ಲದೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಆರ್‌ಸಿಬಿ ಕಾಲ್ತುಳಿತ ಪ್ರಕರಣದಿಂದ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಪದಾಧಿಕಾರಿಗಳು ಅನಿವಾರ್ಯವಾಗಿ ರಾಜೀನಾಮೆ ನೀಡಿದ್ದರು. ಹೀಗಾಗಿ ಚುನಾವಣೆ ಎದುರಾಗಿತ್ತು. ಆದರೆ ಹೈಕೋರ್ಟ್ ಸೂಚನೆಯಂತೆ ಡಿಸೆಂಬರ್ 7ಕ್ಕೆ ಚುನಾವಣೆ ನಡೆಸುವಂತೆ ಸೂಚನೆ ನೀಡಿತ್ತು. ಇದರಂತೆ ಡಿಸೆಂಬರ್ 7ಕ್ಕೆ ಚುನಾವಣೆ ನಡೆಯಲಿದೆ. ಆದರೆ ನಾಮಪತ್ರ ಸಲ್ಲಿಕೆ ಅಂತ್ಯಗೊಂಡು ಪರಿಶೀಲನೆ ವೇಳೆ ಶಾಂತಕುಮಾರ್ ನಾಮಪತ್ರ ತಿರಸ್ಕೃತಗೊಂಡಿದೆ. ಇದು ಬ್ರಿಜೇಶ್ ಪಟೇಲ್ ಬಣಕ್ಕೆ ತೀವ್ರ ನಿರಾಸೆಯಾಗಿದೆ.
ವೆಂಕಟೇಶ್ ಪ್ರಸಾದ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಕಣಕ್ಕಿಳಿಯುತ್ತಿದ್ದಂತೆ ದಿಗ್ಗಜ ಕ್ರಿಕೆಟಿಗರು ವೆಂಕಟೇಶ್ ಪ್ರಸಾದ್‌ಗೆ ಬೆಂಬಲ ನೀಡಿದ್ದರು. ಮಾಜಿ ಕ್ರಿಕೆಟಿಗ, ಮಾಜಿ ಕೆಎಸ್‌ಸಿಎ ಅಧ್ಯಕ್ಷ ಅನಿಲ್ ಕುಂಬ್ಳೆ, ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್ ಸೇರಿದಂತೆ ಹಲವರು ಬೆಂಬಲ ನೀಡಿದ್ದರು. ವೆಂಕಟೇಶ್ ಪ್ರಸಾದ್ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ವೈಭವ ಮರುಕಳಿಸುತ್ತಾರೆ ಎಂದು ಅನಿಲ್ ಕುಂಬ್ಳೆ ಹೇಳಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.