ಮತ್ತೊಂದು ವಿಶ್ವದಾಖಲೆಯ ಹೊಸ್ತಿಲಲ್ಲಿ ವಿರಾಟ್ ಕೊಹ್ಲಿ..!

By Suvarna NewsFirst Published Dec 2, 2020, 9:49 AM IST
Highlights

ಕ್ರಿಕೆಟ್‌ ದಿಗ್ಗಜ ಸಚಿನ್ ತೆಂಡುಲ್ಕರ್ ಅವರ ಹೆಸರಿನಲ್ಲಿರುವ ಒಂದೊಂದೇ ದಾಖಲೆಗಳನ್ನು ಬ್ರೇಕ್ ಮಾಡುತ್ತಾ ಬಂದಿರುವ ವಿರಾಟ್ ಕೊಹ್ಲಿ, ಇದೀಗ ಮೂರನೇ ಏಕದಿನ ಪಂದ್ಯದಲ್ಲಿ ಮತ್ತೊಂದು ದಾಖಲೆಯ ಹೊಸ್ತಿಲಲ್ಲಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

ಕ್ಯಾನ್‌ಬೆರ್ರಾ(ಡಿ.02) ಟೀಂ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ, ಮಾಜಿ ಕ್ರಿಕೆಟಿಗ ಸಚಿನ್‌ ತೆಂಡುಲ್ಕರ್‌ ದಾಖಲೆ ಮುರಿಯುವ ಸನಿಹದಲ್ಲಿದ್ದಾರೆ. ಆಸ್ಪ್ರೇಲಿಯಾ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಕೊಹ್ಲಿ ವಿಶ್ವ ದಾಖಲೆ ನಿರ್ಮಿಸಲು ಸಜ್ಜಾಗಿದ್ದಾರೆ. 

ಏಕದಿನ ಪಂದ್ಯದಲ್ಲಿ ವೇಗದ 12 ಸಾವಿರ ರನ್‌ಗಳನ್ನು ಗಳಿಸಿದ ಸಚಿನ್‌ ದಾಖಲೆಯನ್ನು ಕೊಹ್ಲಿ ಹಿಂದಿಕ್ಕಲಿದ್ದಾರೆ. ಇದಕ್ಕಾಗಿ ಕೊಹ್ಲಿಗೆ 23 ರನ್‌ಗಳ ಅಗತ್ಯವಿದೆ. ಸದ್ಯ ಕೊಹ್ಲಿ 250 ಪಂದ್ಯಗಳ 241 ಇನ್ನಿಂಗ್ಸ್‌ಗಳಿಂದ 11,977 ರನ್‌ಗಳಿಸಿದ್ದಾರೆ. ಸಚಿನ್‌ 12,000 ರನ್‌ ಗಳಿಸಲು 309 ಪಂದ್ಯಗಳಿಂದ 300 ಇನ್ನಿಂಗ್ಸ್‌ ತೆಗೆದುಕೊಂಡಿದ್ದರು.

ಹೀಗಾಗಿ ಇಂದು ನಡೆಯಲಿರುವ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಕೇವಲ 23 ರನ್ ಬಾರಿಸಿದರೆ ಸಾಕು ಏಕದಿನ ದಿನ ಕ್ರಿಕೆಟ್‌ನಲ್ಲಿ ಅತಿವೇಗವಾಗಿ 12 ಸಾವಿರ ರನ್ ಬಾರಿಸಿದ ಆಟಗಾರ ಎನ್ನುವ ಗೌರವಕ್ಕೆ ಭಾಜನರಾಗಲಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮತ್ತೊಂದು ಮೈಲಿಗಲ್ಲು ಸಾಧಿಸಿದ ಕಿಂಗ್ ಕೊಹ್ಲಿ..!

ಕಳೆದ ಪಂದ್ಯದಲ್ಲಿ ಅಂದರೆ 2ನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ 89 ರನ್ ಬಾರಿಸಿದ್ದರು. ಇದರ ಜತೆಗೆ ಅಂತಾರಾಷ್ಟ್ಟೀಯ ಕ್ರಿಕೆಟ್‌ನಲ್ಲಿ ಅತಿವೇಗವಾಗಿ 22 ಸಾವಿರ ರನ್ ಬಾರಿಸಿದ ವಿಶ್ವದಾಖಲೆ ನಿರ್ಮಿಸಿದ್ದರು. ಈ ಮೊದಲು ಸಚಿನ್ ತೆಂಡುಲ್ಕರ್ 493 ಇನಿಂಗ್ಸ್‌ಗಳನ್ನು ಆಡಿ 22 ಸಾವಿರ ರನ್ ಪೂರೈಸಿದ್ದರು. ಆದರೆ ವಿರಾಟ್ ಕೊಹ್ಲಿ ಕೇವಲ 462 ಇನಿಂಗ್ಸ್‌ಗಳನ್ನಾಡಿ ಈ ಸಾಧನೆ ಮಾಡಿದ್ದರು.

click me!