#PMCARES ಫಂಡ್‌ಗೆ ವಿರುಷ್ಕಾ ಜೋಡಿ ದೇಣಿಗೆ ನೀಡಿದ್ದಾರೆ. ಆದರೆ ದೇಣಿಗೆ ನೀಡುವುದರಲ್ಲೂ ಆದರ್ಶ ಮೆರೆದಿದ್ದಾರೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ
ನವದೆಹಲಿ(ಮಾ.31): ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಅವರ ಪತ್ನಿ, ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಪ್ರಧಾನ ಮಂತ್ರಿ ತುರ್ತು ಪರಿಹಾರ ನಿಧಿಗೆ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿ ಪರಿಹಾರ ನಿಧಿಗೆ ದೇಣಿಗೆ ನೀಡುವುದಾಗಿ ಘೋಷಿಸಿದ್ದಾರೆ.
ಬೀದಿಯಲ್ಲಿ ಓಡಾಡೋ ಪುಂಡರ ಮೇಲೆ ಕಿಡಿಕಾರಿದ ವಿರಾಟ್ ಕೊಹ್ಲಿ..!
ಆದರೆ ಎಷ್ಟು ಹಣವನ್ನು ನೀಡಿದ್ದಾರೆ ಎನ್ನುವುದನ್ನು ಬಹಿರಂಗಪಡಿಸಿಲ್ಲ. ಟ್ವೀಟರ್‌ನಲ್ಲಿ ವಿಡಿಯೋ ಸಂದೇಶ ನೀಡಿದ ಕೊಹ್ಲಿ ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
Virat and I are pledging our support towards PM-CARES Fund & the Chief Minister's Relief Fund (Maharashtra). Our hearts are breaking looking at the suffering of so many & we hope our contribution, in some way, helps easing the pain of our fellow citizens
— Anushka Sharma (@AnushkaSharma)ಕೊರೋನಾ ಫೈಟ್: ಪ್ರಧಾನಿ ಕೇರ್ಸ್‌ಗೆ ಕೈ ತುಂಬಾ ದೇಣಿಗೆ ನೀಡಿದ ಕ್ರಿಕೆಟರ್ಸ್
ಕೊರೋನಾ ವೈರಸ್ ಪಿಡುಗು ಭಾರತಕ್ಕೆ ಕಾಲಿಟ್ಟ ದಿನದಿಂದಲೂ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ದೇಶದ ಜನತೆಯನ್ನು ಎಚ್ಚರಿಸುತ್ತಲೇ ಬಂದಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ಮನವಿ ಮಾಡುತ್ತಲೇ ಬಂದಿದ್ದಾರೆ. ಇಂಡಿಯಾ ಲಾಕ್‌ಡೌನ್‌ಗೂ ವಿರುಷ್ಕಾ ಜೋಡಿ ಬೆಂಬಲ ಸೂಚಿಸಿದ್ದರು.
Anushka and I are pledging our support towards PM-CARES Fund & the Chief Minister's Relief Fund (Maharashtra). Our hearts are breaking looking at the suffering of so many & we hope our contribution, in some way, helps easing the pain of our fellow citizens
— Virat Kohli (@imVkohli)ಈಗಾಗಲೇ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸಚಿನ್ ತೆಂಡುಲ್ಕರ್, ಅನುಭವಿ ಕ್ರಿಕೆಟಿಗ ಸುರೇಶ್ ರೈನಾ ಸೇರಿದಂತೆ ಹಲವು ಕ್ರೀಡಾ ತಾರೆಯರು ಲಕ್ಷಾಂತರ ಹಣವನ್ನು ಪ್ರಧಾನ ಮಂತ್ರಿ ಪರಿಹಾರ ನಿಧಿಗೆ ದೇಣಿಗೆ ನೀಡಿದ್ದಾರೆ.