Ind vs SL: ವರ್ಷದ ಮೊದಲ ಶತಕ ಚಚ್ಚಿದ ವಿರಾಟ್ ಕೊಹ್ಲಿ; ಲಂಕಾಗೆ ಟೀಂ ಇಂಡಿಯಾ ಕಠಿಣ ಗುರಿ

Published : Jan 10, 2023, 05:17 PM ISTUpdated : Jan 10, 2023, 05:27 PM IST
Ind vs SL: ವರ್ಷದ ಮೊದಲ ಶತಕ ಚಚ್ಚಿದ ವಿರಾಟ್ ಕೊಹ್ಲಿ; ಲಂಕಾಗೆ ಟೀಂ ಇಂಡಿಯಾ ಕಠಿಣ ಗುರಿ

ಸಾರಾಂಶ

ಲಂಕಾ ಎದುರಿನ ಮೊದಲ ಪಂದ್ಯದಲ್ಲೇ ಶತಕ ಸಿಡಿಸಿದ ವಿರಾಟ್ ಕೊಹ್ಲಿ 2023ರಲ್ಲಿ ಮೊದಲ ಶತಕ ದಾಖಲಿಸಿದ ಕಿಂಗ್ ಕೊಹ್ಲಿ ಮೊದಲ ಏಕದಿನ ಪಂದ್ಯ ಗೆಲ್ಲಲು ಲಂಕಾಗೆ 374 ರನ್‌ಗಳ ಕಠಿಣ ಗುರಿ

ಗುವಾಹಟಿ(ಜ.10): ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಬಾರಿಸಿದ ಆಕರ್ಷಕ ಶತಕ(113) ಹಾಗೂ ಆರಂಭಿಕರಾದ ನಾಯಕ ರೋಹಿತ್ ಶರ್ಮಾ ಹಾಗೂ ಶುಭ್‌ಮನ್ ಗಿಲ್ ಬಾರಿಸಿದ ಚುರುಕಿನ ಅರ್ಧಶತಕಗಳ ನೆರವಿನಿಂದ ಟೀಂ ಇಂಡಿಯಾ, ಮೊದಲ ಏಕದಿನ ಪಂದ್ಯದಲ್ಲಿ 7 ವಿಕೆಟ್‌ ಕಳೆದುಕೊಂಡು 373 ರನ್‌ ಬಾರಿಸಿದ್ದು, ಲಂಕಾಗೆ ಕಠಿಣ ಗುರಿ ನೀಡಿದೆ

ಇಲ್ಲಿನ ಬರ್ಸಾಪುರ ಕ್ರಿಕೆಟ್ ಮೈದಾನದಲ್ಲಿ ಟಾಸ್ ಗೆದ್ದ ಶ್ರೀಲಂಕಾ ತಂಡದ ನಾಯಕ ದುಶುನ್ ಶನಾಕ ಮೊದಲು ಬೌಲಿಂಗ್‌ ಮಾಡುವ ತೀರ್ಮಾನ ತೆಗೆದುಕೊಂಡರು. ಆದರೆ ಬ್ಯಾಟಿಂಗ್ ಸ್ನೇಹಿ ಪಿಚ್‌ನಲ್ಲಿ ಟೀಂ ಇಂಡಿಯಾ ಭರ್ಜರಿ ಆರಂಭವನ್ನೇ ಪಡೆಯಿತು. ನಾಯಕ ರೋಹಿತ್ ಶರ್ಮಾ ಹಾಗೂ ಶುಭ್‌ಮನ್‌ ಗಿಲ್‌ ಮೊದಲ ವಿಕೆಟ್‌ಗೆ 19.4 ಓವರ್‌ಗಳಲ್ಲಿ 143 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಭದ್ರಬುನಾದಿ ಹಾಕಿ ಕೊಟ್ಟರು. ಶುಭ್‌ಮನ್‌ ಗಿಲ್ 60 ಎಸೆತಗಳಲ್ಲಿ 11 ಬೌಂಡರಿ ಸಹಿತ 70 ರನ್ ಬಾರಿಸಿ ವಿಕೆಟ್ ಒಪ್ಪಿಸಿದರೆ, ನಾಯಕ ರೋಹಿತ್ ಶರ್ಮಾ 67 ಎಸೆತಗಳನ್ನು ಎದುರಿಸಿ 9 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 83 ರನ್ ಬಾರಿಸಿ ಮದುಶಂಕ ಬೌಲಿಂಗ್‌ನಲ್ಲಿ ವಿಕೆಟ್‌ ಒಪ್ಪಿಸಿದರು.

ಸತತ ಎರಡನೇ ಶತಕ ಚಚ್ಚಿದ ವಿರಾಟ್ ಕೊಹ್ಲಿ: ಭಾರತದ ಉತ್ತಮ ಆರಂಭದ ಬಳಿಕ ಕ್ರೀಸ್‌ಗಿಳಿದ ಮಾಜಿ ನಾಯಕ ವಿರಾಟ್ ಕೊಹ್ಲಿ ಆಕರ್ಷಕ ಬ್ಯಾಟಿಂಗ್ ಮೂಲಕ ಗಮನ ಸೆಳೆದರು. ತಮಗೆ ಸಿಕ್ಕ ಎರಡು ಜೀವದಾನಗಳ ಲಾಭ ಪಡೆದ ಕೊಹ್ಲಿ, ಆಕರ್ಷಕ ಬೌಂಡರಿ ಹಾಗೂ ಸಿಕ್ಸ್‌ ಮೂಲಕ ಅಭಿಮಾನಿಗಳನ್ನು ರಂಜಿಸಿದರು. ವಿರಾಟ್ ಕೊಹ್ಲಿ, 52 ರನ್‌ ಬಾರಿಸಿದ್ದಾಗ ವಿಕೆಟ್‌ ಕೀಪರ್ ಕುಸಾಲ್ ಮೆಂಡಿಸ್ ಸುಲಭ ಕ್ಯಾಚ್ ಕೈಚೆಲ್ಲಿದರು. ಇದರ ಲಾಭ ಪಡೆದ ವಿರಾಟ್ ಕೊಹ್ಲಿ ಮತ್ತಷ್ಟು ಆಕ್ರಮಣಕಾರಿಯಾಟವಾಡಿದರು. ಇನ್ನು ವಿರಾಟ್ ಕೊಹ್ಲಿ 81 ರನ್ ಗಳಿಸಿದ್ದಾಗ ಕೂಡಾ ಲಂಕಾ ನಾಯಕ ಕ್ಯಾಚ್‌ ಕೈಚೆಲ್ಲಿದರು ಇದಾದ ಬಳಿಕ ತಪ್ಪು ಮಾಡದ ಕೊಹ್ಲಿ, ಮೂರಂಕಿ ಮೊತ್ತ ದಾಖಲಿಸುವಲ್ಲಿ ಯಶಸ್ವಿಯಾದರು. ಒಟ್ಟು ವಿರಾಟ್ ಕೊಹ್ಲಿ 87 ಎಸೆತಗಳನ್ನು ಎದುರಿಸಿ 12 ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ 113 ರನ್ ಬಾರಿಸಿ ಕುಸಾಲ್ ರಜಿತಾ ಬೌಲಿಂಗ್‌ನಲ್ಲಿ ವಿಕೆಟ್ ಒಪ್ಪಿಸಿದರು.

ಕಿಂಗ್ ಕೊಹ್ಲಿ ಖಾತೆಗೆ ಮತ್ತೊಂದು ಶತಕ, ಬೃಹತ್ ಮೊತ್ತದತ್ತ ಭಾರತ

ಇನ್ನುಳಿದಂತೆ ಟೀಂ ಇಂಡಿಯಾ ಪರ ಮಧ್ಯಮ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್(28), ಕೆ ಎಲ್ ರಾಹುಲ್(39), ಹಾರ್ದಿಕ್ ಪಾಂಡ್ಯ(14) ರನ್ ಬಾರಿಸಿದರಾದರೂ, ದೊಡ್ಡ ಮೊತ್ತ ಕಲೆಹಾಕಲು ವಿಫಲವಾದರು. ಕೊನೆಯಲ್ಲಿ ಅಕ್ಷರ್ ಪಟೇಲ್‌(9), ಶಮಿ(4*) ಹಾಗೂ ಸಿರಾಜ್‌(7*) ತಂಡದ ಮೊತ್ತವನ್ನು 370ರ ಗಡಿ ದಾಟಿಸಿದರು.

ಇನ್ನು ಶ್ರೀಲಂಕಾ ತಂಡದ ಪರ ಕಶುನ್‌ ರಜಿತಾ 3 ವಿಕೆಟ್ ಪಡೆದು ಯಶಸ್ವಿ ಬೌಲರ್ ಆಗಿ ಹೊರಹೊಮ್ಮಿದರೆ, ಮದುಶಂಕ, ಚಮಿಕಾ ಕರುಣರತ್ನೆ, ಶಾನಕ ಹಾಗೂ ಧನಂಜಯ್ ಡಿ ಸಿಲ್ವಾ ತಲಾ ಒಂದೊಂದು ವಿಕೆಟ್ ಪಡೆದರು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸ್ಮೃತಿ ಮಂಧನಾ ಮದುವೆ ಮುರಿದ ಬಳಿಕ ಟೀಮ್‌ ಇಂಡಿಯಾ ಆಟಗಾರ್ತಿಯರ ಮಹಾ ನಿರ್ಧಾರ!
ಸಂಕಷ್ಟ ನಿವಾರಣೆಗೆ ಸಿಂಹಾಚಲಂ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ವಿರಾಟ್ ಕೊಹ್ಲಿ