Asia Cup 2023 ಟೂರ್ನಿಗೂ ಮುನ್ನ Yo Yo Test ಪಾಸ್ ಮಾಡಿದ ವಿರಾಟ್ ಕೊಹ್ಲಿ..! ಗಳಿಸಿದ ಪಾಯಿಂಟ್ ಎಷ್ಟು?

By Naveen Kodase  |  First Published Aug 24, 2023, 3:39 PM IST

ಏಷ್ಯಾಕಪ್ ಟೂರ್ನಿಗೂ ಮುನ್ನ ಯೋ ಯೋ ಟೆಸ್ಟ್‌ನಲ್ಲಿ ಪಾಲ್ಗೊಂಡ ವಿರಾಟ್ ಕೊಹ್ಲಿ
ಯೋ ಯೋ ಟೆಸ್ಟ್ ಪಾಸ್ ಮಾಡಿದ ವಿರಾಟ್ ಕೊಹ್ಲಿ
ಆಗಸ್ಟ್ 30ರಿಂದ ಏಷ್ಯಾಕಪ್ ಕ್ರಿಕೆಟ್‌ ಟೂರ್ನಿ ಆರಂಭ


ಬೆಂಗಳೂರು(ಆ.24): ಭಾರತ ಕ್ರಿಕೆಟ್ ತಂಡದ ಪಾಲಿಗೆ ಮುಂದಿನ ಎರಡು-ಮೂರು ತಿಂಗಳು ಅಗ್ನಿಪರೀಕ್ಷೆಯ ಕಾಲ. ಯಾಕೆಂದರೆ ಈ ಅವಧಿಯಲ್ಲಿ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಮಹತ್ವದ ಎರಡು ಕ್ರಿಕೆಟ್ ಸರಣಿಗಳಲ್ಲಿ ಪಾಲ್ಗೊಳ್ಳಲಿದೆ. ಹೌದು ಟೀಂ ಇಂಡಿಯಾ, ಮೊದಲಿಗೆ ಆಗಸ್ಟ್ 30ರಿಂದ ಆರಂಭವಾಗಲಿರುವ ಏಷ್ಯಾಕಪ್ ಟೂರ್ನಿಯಲ್ಲಿ ಪಾಲ್ಗೊಳ್ಳಲಿದೆ. ಇದಾದ ಬಳಿಕ ತವರಿನಲ್ಲೇ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಮಿಂಚಲು ಸಜ್ಜಾಗಿದೆ.

ಸದ್ಯ ವೆಸ್ಟ್ ಇಂಡೀಸ್ ಪ್ರವಾಸದ ಬಳಿಕ ವಿಶ್ರಾಂತಿಗೆ ಜಾರಿದ್ದ ವಿರಾಟ್ ಕೊಹ್ಲಿ, ಇದೀಗ ಏಷ್ಯಾಕಪ್ ಟೂರ್ನಿಯ ತಯಾರಿಗಾಗಿ ಬೆಂಗಳೂರಿನಲ್ಲಿರು ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ನಡೆಯುತ್ತಿರುವ ಕ್ಯಾಂಪ್ ಸೇರಿಕೊಂಡಿದ್ದಾರೆ. ಏಷ್ಯಾಕಪ್ ಟೂರ್ನಿಗೂ ಮುನ್ನ ಫಿಟ್ನೆಸ್‌ ಪರೀಕ್ಷೆಯಲ್ಲಿ ಪಾಲ್ಗೊಂಡಿದ್ದ ವಿರಾಟ್ ಕೊಹ್ಲಿ, ಇದೀಗ ಯೋ ಯೋ ಟೆಸ್ಟ್ ಪಾಸ್ ಮಾಡಿರುವ ವಿಚಾರ ಹಾಗೂ ಯೋ ಯೋ ಟೆಸ್ಟ್‌ನಲ್ಲಿ ಪಡೆದಿರುವ ಅಂಕಗಳನ್ನು ತಮ್ಮ ಅಧಿಕೃತ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. 

Tap to resize

Latest Videos

ಇಂದಿನಿಂದ ಟೀಂ ಇಂಡಿಯಾ ಏಷ್ಯಾಕಪ್‌ಗೆ ಬೆಂಗಳೂರಿನಲ್ಲಿ ಶಿಬಿರ ಶುರು..!

ಹೌದು, ಆಟಗಾರರು ಭಾರತ ತಂಡದಲ್ಲಿ ಸ್ಥಾನ ಪಡೆಯಲು ಯೋ ಯೋ ಟೆಸ್ಟ್ ಪಾಸ್ ಮಾಡುವುದನ್ನು ಬಿಸಿಸಿಐ ಕಡ್ಡಾಯಗೊಳಿಸಿದೆ. ಯೋ ಯೋ ಟೆಸ್ಟ್‌ನಲ್ಲಿ ಬಿಸಿಸಿಐ ಆಟಗಾರರಿಗೆ ಕನಿಷ್ಠ 16.5 ಅಂಕವನ್ನು ನಿಗದಿಪಡಿಸಿದೆ. ಸದ್ಯ ಯೋ ಯೋ ಟೆಸ್ಟ್‌ನಲ್ಲಿ ಪಾಲ್ಗೊಂಡಿದ್ದ ವಿರಾಟ್ ಕೊಹ್ಲಿ ತಾವು 17.2 ಅಂಕಗಳಿಸಿರುವ ಖುಷಿಯ ವಿಚಾರವನ್ನು ಹಂಚಿಕೊಂಡಿದ್ದಾರೆ.

ಆಗಸ್ಟ್‌ 30ರಿಂದ ಆರಂಭಗೊಳ್ಳಲಿರುವ ಏಷ್ಯಾಕಪ್‌ಗಾಗಿ ಬುಧವಾರದಿಂದ ಭಾರತ ತಂಡಕ್ಕೆ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್‌ ಅಕಾಡೆಮಿ(ಎನ್‌ಸಿಎ)ಯಲ್ಲಿ ಶಿಬಿರ ಆರಂಭಗೊಂಡಿದೆ. ವಿಂಡೀಸ್ ವಿರುದ್ಧದ ಏಕದಿನ ಸರಣಿ ಬಳಿಕ ವಿಶ್ರಾಂತಿಯಲ್ಲಿರುವ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಸೇರಿದಂತೆ ಪ್ರಮುಖರು ಬುಧವಾರವೇ ಎನ್‌ಸಿಎಗೆ ಆಗಮಿಸಿದ್ದಾರೆ. 

ಉಳಿದಂತೆ ಸದ್ಯ ಐರ್ಲೆಂಡ್‌ ವಿರುದ್ಧ ಟಿ20 ಸರಣಿ ಆಡುತ್ತಿರುವ ಜಸ್‌ಪ್ರೀತ್‌ ಬುಮ್ರಾ, ಸಂಜು ಸ್ಯಾಮ್ಸನ್‌, ತಿಲಕ್‌ ವರ್ಮಾ, ಪ್ರಸಿದ್ಧ್‌ ಕೃಷ್ಣ ಸೇರಿದಂತೆ ಹಲವರು ಸರಣಿ ಮುಗಿದ ಬಳಿಕ ಶಿಬಿರಕ್ಕೆ ಹಾಜರಾಗಲಿದ್ದಾರೆ. ಆಗಸ್ಟ್ 29ರ ವರೆಗೆ ಶಿಬಿರ ನಡೆಯಲಿದ್ದು, ಬಳಿಕ ಆಟಗಾರರು ಶ್ರೀಲಂಕಾಕ್ಕೆ ಪ್ರಯಾಣಿಸಲಿದ್ದಾರೆ.

ಟೀಂ ಇಂಡಿಯಾ ಟಾಪ್ ಆರ್ಡರ್ ಬ್ಯಾಟರ್‌ಗಳ ಫಾರ್ಮ್ ಹೇಗಿದೆ? ಇಲ್ಲಿದೆ ಇಂಟ್ರೆಸ್ಟಿಂಗ್ ಅಂಕಿ-ಅಂಶ

ಏಷ್ಯಾಕಪ್ ಕ್ರಿಕೆಟ್ ಟೂರ್ನಿ ಆಗಸ್ಟ್ 30ರಿಂದ ಸೆಪ್ಟೆಂಬರ್ 17ರ ವರೆಗೆ ಪಾಕಿಸ್ತಾನ, ಶ್ರೀಲಂಕಾದಲ್ಲಿ ನಡೆಯಲಿದ್ದು, ಸೆಪ್ಟೆಂಬರ್ 2ರಂದು ಪಾಕ್‌ ವಿರುದ್ಧ ಆಡುವ ಮೂಲಕ ಭಾರತ ಅಭಿಯಾನ ಆರಂಭಿಸಲಿದೆ.

ಏಷ್ಯಾಕಪ್ ಟೂರ್ನಿಗೆ ಭಾರತ ಕ್ರಿಕೆಟ್ ತಂಡ ಹೀಗಿದೆ ನೋಡಿ:

ರೋಹಿತ್ ಶರ್ಮಾ(ನಾಯಕ), ಶುಭ್‌ಮನ್ ಗಿಲ್‌, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ ಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಪ್ರಸಿದ್ಧ್ ಕೃಷ್ಣ
 

click me!