Team India Good Gesture: ಕಿವೀಸ್‌ ಡ್ರೆಸ್ಸಿಂಗ್‌ ರೂಂಗೆ ತೆರಳಿ ಅಜಾಜ್ ಅಭಿನಂದಿಸಿದ ದ್ರಾವಿಡ್-ಕೊಹ್ಲಿ

Suvarna News   | Asianet News
Published : Dec 05, 2021, 01:32 PM IST
Team India Good Gesture: ಕಿವೀಸ್‌ ಡ್ರೆಸ್ಸಿಂಗ್‌ ರೂಂಗೆ ತೆರಳಿ ಅಜಾಜ್ ಅಭಿನಂದಿಸಿದ ದ್ರಾವಿಡ್-ಕೊಹ್ಲಿ

ಸಾರಾಂಶ

* ಮುಂಬೈ ಟೆಸ್ಟ್‌ನಲ್ಲಿ 10 ವಿಕೆಟ್ ಕಬಳಿಸಿ ಐತಿಹಾಸಿಕ ಸಾಧನೆ ಮಾಡಿದ ಅಜಾಜ್ ಪಟೇಲ್ * ಅಜಾಜ್ ಪಟೇಲ್ ಅಭಿನಂದಿಸಿದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ * ಭಾರತೀಯರ ಕ್ರೀಡಾಸ್ಪೂರ್ತಿಯ ನಡೆಗೆ ಅಭಿಮಾನಿಗಳ ಮೆಚ್ಚುಗೆ

ಮುಂಬೈ(ಡಿ.05): ಭಾರತ ಹಾಗೂ ನ್ಯೂಜಿಲೆಂಡ್‌ (India vs New Zealand) ನಡುವಿನ ಎರಡನೇ ಟೆಸ್ಟ್‌ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಮುಂಬೈ ಮೂಲದ ಎಡಗೈ ಆಫ್‌ ಸ್ಪಿನ್ನರ್ ಅಜಾಜ್ ಪಟೇಲ್ (Ajaz Patel) ಭಾರತದ ಎಲ್ಲಾ 10 ವಿಕೆಟ್ ಕಬಳಿಸುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಮುಂಬೈನ ವಾಂಖೆಡೆ ಮೈದಾನದಲ್ಲಿ (Mumbai Wankhede Stadium) ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಅಜಾಜ್‌ ಪಟೇಲ್ ಈ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಎರಡನೇ ದಿನದಾಟ ಮುಕ್ತಾಯವಾಗುತ್ತಿದ್ದಂತೆಯೇ ಟೀಂ ಇಂಡಿಯಾ (Team India) ಹೆಡ್‌ ಕೋಚ್ ರಾಹುಲ್ ದ್ರಾವಿಡ್ (Rahul Dravid), ನಾಯಕ ವಿರಾಟ್ ಕೊಹ್ಲಿ ಸೇರಿದಂತೆ ಕೆಲವು ಕ್ರಿಕೆಟಿಗರು ಕಿವೀಸ್ ಡ್ರೆಸ್ಸಿಂಗ್ ರೂಂಗೆ ತೆರಳಿ ಅಜಾಜ್ ಪಟೇಲ್‌ ಅವರನ್ನು ಅಭಿನಂದಿಸಿದ್ದಾರೆ. ಈ ವಿಡಿಯೋವೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ

ನ್ಯೂಜಿಲೆಂಡ್ ಎಡಗೈ ಆಫ್‌ ಸ್ಪಿನ್ನರ್‌ ಅಜಾಜ್‌ ಪಟೇಲ್‌ ಮೊದಲ ಇನಿಂಗ್ಸ್‌ನಲ್ಲಿ 119 ರನ್‌ ನೀಡಿ ಭಾರತದ ಎಲ್ಲಾ 10 ವಿಕೆಟ್‌ ಕಬಳಿಸಿದರು. ಇದರೊಂದಿಗೆ ಟೀಂ ಇಂಡಿಯಾ 325 ರನ್‌ಗಳಿಗೆ ಸರ್ವಪತನ ಕಂಡಿತ್ತು. ಅಜಾಜ್‌ ಪಟೇಲ್‌ ಈ ರೀತಿಯ ಅಪರೂಪದ ಸಾಧನೆ ಮಾಡಿದ ಮೂರನೇ ಬೌಲರ್ ಎನ್ನುವ ಗೌರವಕ್ಕೆ ಭಾಜನರಾಗಿದ್ದರು. ಇಂಗ್ಲೆಂಡ್‌ನ ಆಫ್‌ ಸ್ಪಿನ್ನರ್ ಜಿಮ್‌ ಲೇಕರ್ (Jim Laker) 1956ರಲ್ಲಿ ಆಸ್ಟ್ರೇಲಿಯಾ ವಿರುದ್ದ 10 ವಿಕೆಟ್‌ ಕಬಳಿಸಿ ಇತಿಹಾಸ ನಿರ್ಮಿಸಿದ್ದರು. ಇದಾದ ಬಳಿಕ 1999ರಲ್ಲಿ ದೆಹಲಿಯ ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ಕನ್ನಡಿಗ ಅನಿಲ್ ಕುಂಬ್ಳೆ (Anil Kumble) ಪಾಕಿಸ್ತಾನದ (Pakistan Cricket Team) ಎಲ್ಲಾ 10 ವಿಕೆಟ್ ಕಬಳಿಸುವ ಮೂಲಕ ಜಿಮ್ ಲೇಕರ್ ದಾಖಲೆಯನ್ನು ಸರಿಗಟ್ಟಿದ್ದರು. ಇದೀಗ ಆ ಪ್ರತಿಷ್ಠಿತ ಕ್ಲಬ್‌ಗೆ ಅಜಾಜ್‌ ಪಟೇಲ್ ಸೇರ್ಪಡೆಯಾಗಿದ್ದಾರೆ.

ಮುಂಬೈ ಟೆಸ್ಟ್‌ನ ಮೊದಲ ದಿನವೇ 4 ವಿಕೆಟ್ ಕಬಳಿಸಿದ್ದ ಅಜಾಜ್ ಪಟೇಲ್, ಎರಡನೇ ದಿನ ಇನ್ನುಳಿದ 6 ವಿಕೆಟ್ ಕಬಳಿಸಿದರು. ಎರಡನೇ ದಿನದಾಟ ಮುಕ್ತಾಯವಾಗುತ್ತಿದ್ದಂತೆಯೇ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಹೆಡ್ ಕೋಚ್ ರಾಹುಲ್ ದ್ರಾವಿಡ್ ಹಾಗೂ ವೇಗಿ ಮೊಹಮ್ಮದ್ ಸಿರಾಜ್‌ (Mohammed Siraj), ನ್ಯೂಜಿಲೆಂಡ್ ಡ್ರೆಸ್ಸಿಂಗ್‌ ರೂಂಗೆ ತೆರಳಿ ಅಜಾಜ್ ಪಟೇಲ್‌ಗೆ ಅಭಿನಂದನೆ ಸಲ್ಲಿಸಿದ್ದಾರೆ. ಈ ಮೂಲಕ ತಮ್ಮ ಕ್ರೀಡಾಸ್ಪೂರ್ತಿಯನ್ನು ಮೆರೆದಿದ್ದಾರೆ. ಟೀಂ ಇಂಡಿಯಾದ ಈ ನಡೆ ಕ್ರಿಕೆಟ್ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ. 

Ajaz Patel Create History: 10 ವಿಕೆಟ್‌ ಕ್ಲಬ್‌ಗೆ ಅಜಾಜ್ ಸ್ವಾಗತಿಸಿದ ಅನಿಲ್ ಕುಂಬ್ಳೆ

ಅಜಾಜ್ ಪಟೇಲ್‌ ಬೌಲಿಂಗ್‌ನಲ್ಲಿ ಐತಿಹಾಸಿಕ ಪ್ರದರ್ಶನ ತೋರಿದರೂ ಸಹಾ ಬ್ಯಾಟಿಂಗ್‌ನಲ್ಲಿ ಪ್ರವಾಸಿ ನ್ಯೂಜಿಲೆಂಡ್ ಕ್ರಿಕೆಟ್ ತಂಡವು (New Zealand Cricket Team) ಹೀನಾಯ ಪ್ರದರ್ಶನ ತೋರುವ ಮೂಲಕ ಮುಖಭಂಗ ಅನುಭವಿಸಿದೆ. ಭಾರತವನ್ನು 325 ರನ್‌ಗಳಿಗೆ ನಿಯಂತ್ರಿಸಿ ಮೊದಲ ಇನಿಂಗ್ಸ್‌ ಆರಂಭಿಸಿದ ನ್ಯೂಜಿಲೆಂಡ್ ತಂಡಕ್ಕೆ ವೇಗಿ ಮೊಹಮ್ಮದ್ ಸಿರಾಜ್ ಆರಂಭದಲ್ಲೇ 3 ವಿಕೆಟ್ ಕಬಳಿಸಿ ಶಾಕ್‌ ನೀಡಿದರು. ಇದಾದ ಬಳಿಕ ರವಿಚಂದ್ರನ್ ಅಶ್ವಿನ್ (Ravichandran Ashwin) ಹಾಗೂ ಅಕ್ಷರ್ ಪಟೇಲ್ (Axar Patel) ಮಾರಕ ದಾಳಿಗೆ ತತ್ತರಿಸಿ ಕೇವಲ 62 ರನ್‌ಗಳಿಗೆ ಆಲೌಟ್ ಆಯಿತು. ಇದರೊಂದಿಗೆ ಭಾರತದಲ್ಲಿ ಭಾರತ ವಿರುದ್ದ ಅತಿ ಕಡಿಮೆ ಮೊತ್ತಕ್ಕೆ ಆಲೌಟ್‌ ಆದ ತಂಡ ಎನ್ನುವ ಕುಖ್ಯಾತಿಗೆ ನ್ಯೂಜಿಲೆಂಡ್ ಪಾತ್ರವಾಯಿತು. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಜೈಸ್ವಾಲ್‌ ಸಖತ್‌ ಸೆಂಚುರಿ, ಟೆಸ್ಟ್‌ ಸರಣಿ ಸೋಲಿಗೆ ಏಕದಿನದಲ್ಲಿ ಸೇಡು ತೀರಿಸಿಕೊಂಡ ಭಾರತ!
ಫೋಟೋ ಹಂಚಿಕೊಂಡು 'ಡಾರ್ಲಿಂಗ್‌..' ಎಂದು ಬರೆದ ಸಾರಾ ತೆಂಡುಲ್ಕರ್‌