
ಅಡಿಲೇಡ್(ಡಿ.23): ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಮಂಗಳವಾರ ಆಸ್ಪ್ರೇಲಿಯಾದಿಂದ ಭಾರತಕ್ಕೆ ಪ್ರಯಾಣ ಬೆಳೆಸಿದ್ದಾರೆ. ಪಿತೃತ್ವದ ರಜೆ ಮಂಜೂರಾಗಿರುವ ಕಾರಣ ಕೊಹ್ಲಿ, ಆಸ್ಪ್ರೇಲಿಯಾ ವಿರುದ್ಧದ ಉಳಿದ 3 ಟೆಸ್ಟ್ ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ.
ಹೀಗಾಗಿ ಆಸ್ಪ್ರೇಲಿಯಾ ತೊರೆಯುವ ಮುನ್ನ ಕೊಹ್ಲಿ, ತಂಡದ ಸಹ ಆಟಗಾರರೊಂದಿಗೆ ಸ್ಫೂರ್ತಿಯ ಮಾತುಗಳನ್ನಾಡಿದ್ದಾರೆ. ಕೊಹ್ಲಿ ಅಲಭ್ಯತೆಯಲ್ಲಿ ಆಸ್ಪ್ರೇಲಿಯಾ ವಿರುದ್ಧದ 3 ಪಂದ್ಯಗಳಿಗೆ ಉಪನಾಯಕ ಅಜಿಂಕ್ಯ ರಹಾನೆ ತಂಡವನ್ನು ಮುನ್ನಡೆಸಲಿದ್ದಾರೆ ಎನ್ನಲಾಗಿದೆ.
ಬಾಕ್ಸಿಂಗ್ ಡೇ ಟೆಸ್ಟ್‌ಗೆ ಟೀಂ ಇಂಡಿಯಾವನ್ನು ಪ್ರಕಟಿಸಿದ ಗೌತಮ್ ಗಂಭೀರ್
ಜನವರಿಯಲ್ಲಿ ವಿರಾಟ್ ಕೊಹ್ಲಿ, ಅನುಷ್ಕಾ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಹೀಗಾಗಿ ತವರಿಗೆ ಹಿಂದಿರುಗಿರುವ ವಿರಾಟ್, ವಿಮಾನ ಹತ್ತುವ ಮೊದಲು ತಂಡದ ಆಟಗಾರರೊಟ್ಟಿಗೆ ಮಾತನಾಡಿ ಹುರಿದುಂಬಿಸಿದ್ದಾರೆ ಎನ್ನಲಾಗಿದೆ. ಟೆಸ್ಟ್ ಸರಣಿಯ ಉಳಿದ 3 ಪಂದ್ಯಗಳಲ್ಲಿ ಅತ್ಯದ್ಭುತ ಪ್ರದರ್ಶನ ನೀಡಿ, ಎದುರಾಳಿ ತಂಡವನ್ನು ಸೋಲಿಸಲು ಆಟಗಾರರಿಗೆ ಕೊಹ್ಲಿ ಸ್ಫೂರ್ತಿದಾಯಕ ಮಾತುಗಳನ್ನಾಡಿದ್ದಾರೆ. ಅಡಿಲೇಡ್‌ನಲ್ಲಿ ನಡೆದಿದ್ದ ಮೊದಲ ಟೆಸ್ಟ್‌ನಲ್ಲಿ ಭಾರತ ತಂಡ ಹೀನಾಯ ಸೋಲು ಕಂಡಿತ್ತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.