Ind vs Aus: ಸಚಿನ್‌, ಪಾಂಟಿಂಗ್ ಅಪರೂಪದ ದಾಖಲೆ ಮುರಿಯುವ ಹೊಸ್ತಿಲಲ್ಲಿ ವಿರಾಟ್ ಕೊಹ್ಲಿ..!

Published : Mar 16, 2023, 04:48 PM IST
Ind vs Aus: ಸಚಿನ್‌, ಪಾಂಟಿಂಗ್ ಅಪರೂಪದ ದಾಖಲೆ ಮುರಿಯುವ ಹೊಸ್ತಿಲಲ್ಲಿ ವಿರಾಟ್ ಕೊಹ್ಲಿ..!

ಸಾರಾಂಶ

* ಭಾರತ-ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿ ಮಾರ್ಚ್ 17ರಿಂದ ಆರಂಭ * ಆಸೀಸ್‌ ಎದುರು ಹೊಸ ಮೈಲಿಗಲ್ಲು ನೆಡಲು ಸಜ್ಜಾದ ವಿರಾಟ್ ಕೊಹ್ಲಿ * ಏಕದಿನ ಕ್ರಿಕೆಟ್‌ನಲ್ಲಿ ಭರ್ಜರಿ ಫಾರ್ಮ್‌ನಲ್ಲಿರುವ ವಿರಾಟ್ ಕೊಹ್ಲಿ

ನವದೆಹಲಿ(ಮಾ.16): ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ತವರಿನಲ್ಲಿ ನಡೆದ ಬಾರ್ಡರ್‌-ಗವಾಸ್ಕರ್ ಟೆಸ್ಟ್‌ ಸರಣಿಯನ್ನು 2-1 ಅಂತರದಲ್ಲಿ ಜಯಿಸುವ ಮೂಲಕ ಸತತ ಎರಡನೇ ಬಾರಿಗೆ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ಗೆ ಅರ್ಹತೆ ಪಡೆದುಕೊಂಡಿದೆ. ಇದೀಗ ಟೀಂ ಇಂಡಿಯಾ ಚಿತ್ತ ಏಕದಿನ ಕ್ರಿಕೆಟ್ ಸರಣಿಯತ್ತ ನೆಟ್ಟಿದ್ದು, ಮಾರ್ಚ್‌ 17ರಿಂದ ತವರಿನಲ್ಲೇ ಆಸ್ಟ್ರೇಲಿಯಾ ಎದುರು 3 ಪಂದ್ಯಗಳ ಏಕದಿನ ಸರಣಿಯನ್ನಾಡಲಿದೆ. 16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೂ ಮುನ್ನ ಟೀಂ ಇಂಡಿಯಾ ಆಡಲಿರುವ ಕೊನೆಯ ಅಂತಾರಾಷ್ಟ್ರೀಯ ಕ್ರಿಕೆಟ್ ಸರಣಿ ಇದಾಗಲಿದ್ದು, ಈ ಸರಣಿಯಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರವೀಂದ್ರ ಜಡೇಜಾ ಸೇರಿದಂತೆ ಹಲವು ಕ್ರಿಕೆಟಿಗರು ಕಣಕ್ಕಿಳಿಯಲಿದ್ದಾರೆ.

ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯವು ಮಾರ್ಚ್ 17ರಂದು ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆಯಲಿದ್ದು, ಇದೀಗ ಎಲ್ಲರ ಚಿತ್ತ ಟೀಂ ಇಂಡಿಯಾ ರನ್‌ ಮಷೀನ್ ವಿರಾಟ್ ಕೊಹ್ಲಿ ಮೇಲೆ ನೆಟ್ಟಿದೆ. ಬಾರ್ಡರ್-ಗವಾಸ್ಕರ್ ಟೆಸ್ಟ್‌ ಸರಣಿಯ ಕೊನೆಯ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಆಕರ್ಷಕ 186 ರನ್ ಬಾರಿಸುವ ಮೂಲಕ ಬರೋಬ್ಬರಿ 40 ತಿಂಗಳುಗಳ ಬಳಿಕ ವಿರಾಟ್ ಕೊಹ್ಲಿ ಟೆಸ್ಟ್‌ ಕ್ರಿಕೆಟ್‌ನಲ್ಲಿ ಶತಕ ಚಚ್ಚಿದ್ದರು. ಇದೀಗ ವಿರಾಟ್ ಕೊಹ್ಲಿ ಇದೇ ಲಯವನ್ನು ಮುಂದುವರೆಸಿಕೊಂಡು ಹೋಗಲು ಎದುರು ನೋಡುತ್ತಿದ್ದಾರೆ.

ಆಸ್ಟ್ರೇಲಿಯಾ ಎದುರಿನ ಟೆಸ್ಟ್‌ ಸರಣಿಗೂ ಮುನ್ನ ವಿರಾಟ್ ಕೊಹ್ಲಿ, ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಭರ್ಜರಿ ಲಯದಲ್ಲಿದ್ದರು. ಆಡಿದ ವರ್ಷಾರಂಭದ ಮೂರು ಏಕದಿನ ಪಂದ್ಯಗಳ ಪೈಕಿ ಎರಡು ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಶತಕ ಸಿಡಿಸಿದ್ದರು. ಇನ್ನು ವಿರಾಟ್ ಕೊಹ್ಲಿ, ಇದೀಗ ಆಸ್ಟ್ರೇಲಿಯಾ ಎದುರಿನ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ವಿರಾಟ್ ಕೊಹ್ಲಿ, ಅಪರೂಪದ ದಾಖಲೆಗಳನ್ನು ಬರೆಯಲು ಸಜ್ಜಾಗಿದ್ದಾರೆ. ವಿರಾಟ್ ಕೊಹ್ಲಿ ಇನ್ನು ಕೇವಲ 191 ರನ್ ಬಾರಿಸಿದರೆ, ಏಕದಿನ ಕ್ರಿಕೆಟ್‌ನಲ್ಲಿ 13,000 ರನ್ ಬಾರಿಸಿದ ಜಗತ್ತಿನ ಐದನೇ ಬ್ಯಾಟರ್ ಎನ್ನುವ ಹಿರಿಮೆಗೆ ಪಾತ್ರರಾಗಲಿದ್ದಾರೆ. ಈಗಾಗಲೇ ಸಚಿನ್ ತೆಂಡುಲ್ಕರ್(18,426), ಕುಮಾರ ಸಂಗಕ್ಕರ(14,234), ರಿಕಿ ಪಾಂಟಿಂಗ್(13,704) ಹಾಗೂ ಸನತ್ ಜಯಸೂರ್ಯ(13,430) ರನ್‌ ಬಾರಿಸಿ, ವಿರಾಟ್ ಕೊಹ್ಲಿಗಿಂತ ಮುಂದಿದ್ದಾರೆ.

IPL 2023: ತವರಿನ ಪಂದ್ಯಗಳ ಟಿಕೆಟ್‌ ಮಾರಾಟ ಘೋಷಿಸಿದ ಆರ್‌ಸಿಬಿ, ರೇಟ್‌ ಎಷ್ಟು? ಖರೀದಿ ಹೇಗೆ?

ವಿರಾಟ್ ಕೊಹ್ಲಿ ಇನ್ನು ಮೂರು ಶತಕ ಸಿಡಿಸಿದರೆ, ಕ್ರಿಕೆಟ್ ದಿಗ್ಗಜ ಸಚಿನ್‌ ತೆಂಡುಲ್ಕರ್ ಹೆಸರಿನಲ್ಲಿರುವ ವಿಶ್ವದಾಖಲೆಯ(49) ಶತಕಗಳ ದಾಖಲೆಯನ್ನು ಸರಿಗಟ್ಟಲಿದ್ದಾರೆ. ವಿರಾಟ್ ಕೊಹ್ಲಿ ಕಳೆದ 4 ತಿಂಗಳ ಅವಧಿಯಲ್ಲಿ ಮೂರು ಏಕದಿನ ಶತಕ ಸಿಡಿಸಿ ಮಿಂಚಿದ್ದಾರೆ. ಇನ್ನು ಆಸ್ಟ್ರೇಲಿಯಾ ಎದುರಿನ ಏಕದಿನ ಸರಣಿಯ ವೇಳೆ ವಿರಾಟ್ ಕೊಹ್ಲಿ ತವರಿನಲ್ಲಿ ಗರಿಷ್ಠ ರನ್‌ ಬಾರಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ರಿಕಿ ಪಾಂಟಿಂಗ್ ಹಿಂದಿಕ್ಕಿ ವಿರಾಟ್ ಕೊಹ್ಲಿ ಎರಡನೇ ಸ್ಥಾನಕ್ಕೇರಿದ್ದಾರೆ.

ತವರಿನಲ್ಲಿ ಏಕದಿನ ಕ್ರಿಕೆಟ್‌ನಲ್ಲಿ ಗರಿಷ್ಠ ರನ್ ಬಾರಿಸಿದ ಟಾಪ್ 3 ಬ್ಯಾಟರ್‌ಗಳು

1. ಸಚಿನ್ ತೆಂಡುಲ್ಕರ್-164 ಪಂದ್ಯ - 6976 ರನ್
2. ರಿಕಿ ಪಾಂಟಿಂಗ್- 153 ಪಂದ್ಯ - 5406 ರನ್
3. ವಿರಾಟ್ ಕೊಹ್ಲಿ - 107 ಪಂದ್ಯ - 5358 ರನ್

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕ್ರೈಸ್ಟ್‌ಚರ್ಚ್ ಪವಾಡ: ಕಿವೀಸ್ ಎದುರು ಐತಿಹಾಸಿಕ ಡ್ರಾ ಸಾಧಿಸಿದ ವೆಸ್ಟ್ ಇಂಡೀಸ್!
20 ಮ್ಯಾಚ್ ಬಳಿಕ ಕೊನೆಗೂ ಟಾಸ್ ಗೆದ್ದ ಭಾರತ! ದಕ್ಷಿಣ ಆಫ್ರಿಕಾ ತಂಡದಲ್ಲಿ 2 ಬದಲಾವಣೆ!