ವಿರಾಟ್ ಕೊಹ್ಲಿ ಮಗ ಅಕಾಯ್‌ ಹೆಸರಲ್ಲಿ ನೂರಾರು ನಕಲಿ ಇನ್‌ಸ್ಟಾ ಖಾತೆ!

Published : Feb 22, 2024, 12:08 PM IST
ವಿರಾಟ್ ಕೊಹ್ಲಿ ಮಗ ಅಕಾಯ್‌ ಹೆಸರಲ್ಲಿ ನೂರಾರು ನಕಲಿ ಇನ್‌ಸ್ಟಾ ಖಾತೆ!

ಸಾರಾಂಶ

ಕಿಡಿಗೇಡಿಗಳು ಇನ್‌ಸ್ಟಾಗ್ರಾಂನಲ್ಲಿ ಅಕಾಯ್‌ ಹೆಸರಿನಲ್ಲಿ ಖಾತೆ ತೆರೆದು ಸಂದೇಶಗಳನ್ನು ಪೋಸ್ಟ್‌ ಮಾಡಲು ಶುರು ಮಾಡಿದ್ದಾರೆ. ಈ ಬಗ್ಗೆ ಸಾಮಾಜಿಕ ತಾಣಗಳಲ್ಲಿ ಭಾರಿ ಟೀಕೆ ಸಹ ವ್ಯಕ್ತವಾಗಿದೆ. ಸಾಮಾಜಿಕ ತಾಣಗಳ ದುರ್ಬಳಕೆ ಮಾಡದಂತೆ ಅನೇಕರು ಮನವಿ ಸಹ ಮಾಡಿದ್ದಾರೆ.

ನವದೆಹಲಿ(ಫೆ.22): ವಿರಾಟ್‌ ಕೊಹ್ಲಿ ತಮಗೆ 2ನೇ ಮಗು ಆಗಿದೆ ಎಂದು ಘೋಷಿಸಿದ ಬೆನ್ನಲ್ಲೇ ಸಾಮಾಜಿಕ ತಾಣಗಳಲ್ಲಿ ಅವರ ಮಗ ಅಕಾಯ್‌ ಹೆಸರಲ್ಲಿ ನೂರಾರು ನಕಲಿ ಖಾತೆಗಳು ಹುಟ್ಟಿಕೊಂಡಿವೆ.

ಕಿಡಿಗೇಡಿಗಳು ಇನ್‌ಸ್ಟಾಗ್ರಾಂನಲ್ಲಿ ಅಕಾಯ್‌ ಹೆಸರಿನಲ್ಲಿ ಖಾತೆ ತೆರೆದು ಸಂದೇಶಗಳನ್ನು ಪೋಸ್ಟ್‌ ಮಾಡಲು ಶುರು ಮಾಡಿದ್ದಾರೆ. ಈ ಬಗ್ಗೆ ಸಾಮಾಜಿಕ ತಾಣಗಳಲ್ಲಿ ಭಾರಿ ಟೀಕೆ ಸಹ ವ್ಯಕ್ತವಾಗಿದೆ. ಸಾಮಾಜಿಕ ತಾಣಗಳ ದುರ್ಬಳಕೆ ಮಾಡದಂತೆ ಅನೇಕರು ಮನವಿ ಸಹ ಮಾಡಿದ್ದಾರೆ.

ಎರಡನೇ ಮಗುವಿಗೆ ತಂದೆಯಾದ ವಿರಾಟ್‌ ಕೊಹ್ಲಿ

ಭಾರತದ ತಾರಾ ಕ್ರಿಕೆಟಿಗ ವಿರಾಟ್‌ ಕೊಹ್ಲಿ ಅವರ ಪತ್ನಿ, ಖ್ಯಾತ ಬಾಲಿವುಡ್‌ ನಟಿ ಅನುಷ್ಕಾ ಶರ್ಮಾ 2ನೇ ಮಗುವಿಗೆ ಜನ್ಮ ನೀಡಿದ್ದಾರೆ. ಈ ಬಗ್ಗೆ ವಿರಾಟ್‌ ಕೊಹ್ಲಿ ಮಂಗಳವಾರ ಸಾಮಾಜಿಕ ತಾಣಗಳಲ್ಲಿ ಮಾಹಿತಿ ಹಂಚಿಕೊಂಡಿದ್ದು, ಫೆ.15ರಂದು ಅನುಷ್ಕಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮಗುವಿಗೆ ಅಕಾಯ್‌ ಎಂದು ನಾಮಕರಣ ಮಾಡಿದ್ದಾಗಿ ತಿಳಿಸಿದ್ದಾರೆ. 2017ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದ ಕೊಹ್ಲಿ-ಅನುಷ್ಕಾ ದಂಪತಿಗೆ ಈಗಾಗಲೇ ವಮಿಕಾ ಹೆಸರಿನ ಹೆಣ್ಣು ಮಗುವಿದೆ.

ಸದ್ಯ ಕೊಹ್ಲಿ-ಅನುಷ್ಕಾ ಲಂಡನ್‌ನಲ್ಲಿ ಇದ್ದಾರೆ ಎಂದು ಹೇಳಲಾಗುತ್ತಿದೆ. ಕೊಹ್ಲಿ ವೈಯಕ್ತಿಕ ಕಾರಣ ನೀಡಿ ಇಂಗ್ಲೆಂಡ್‌ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದರು. ಅನುಷ್ಕಾ ಗರ್ಭಿಣಿಯಾಗಿರುವ ಕಾರಣ ಕೊಹ್ಲಿ ಸರಣಿಯಲ್ಲಿ ಆಡುತ್ತಿಲ್ಲ ಎಂದು ವರದಿಯಾಗಿತ್ತು.

ICC Test Rankings: ಟೆಸ್ಟ್‌ನಲ್ಲಿ ಯಶಸ್ವಿ ಜೈಸ್ವಾಲ್ ಈಗ ವಿಶ್ವ ನಂ.15 ಬ್ಯಾಟರ್..!

ಇನ್ನೂ ವಮಿಕಾ ಮುಖ ತೋರಿಸದ ವಿರುಷ್ಕಾ ದಂಪತಿ: ಹೌದು, ಅಕಾಯ್ ಜನಿಸುವ ಮುನ್ನ ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ದಂಪತಿಗೆ ಮೂರು ವರ್ಷದ ಮಗಳಿದ್ದಾಳೆ. ಮಗಳ ಖಾಸಗಿತನಕ್ಕೆ ಒತ್ತು ನೀಡುವ ಹಿನ್ನೆಲೆಯಲ್ಲಿ ಇದುವರೆಗೂ ವಿರುಷ್ಕಾ ದಂಪತಿ ವಮಿಕಾ ಅವರ ಮುಖವನ್ನು ಜಗತ್ತಿನ ಮುಂದೆ ಇದುವರೆಗೂ ಅನಾವರಣ ಮಾಡಿಲ್ಲ. ವಮಿಕಾ ಎಲ್ಲಿಯವರೆಗೆ ಸೋಷಿಯಲ್ ಮೀಡಿಯಾ ಅಂದ್ರೆ ಏನು ಎನ್ನುವುದನ್ನು ಅರ್ಥ ಮಾಡಿಕೊಳ್ಳುವುದಿಲ್ಲವೋ ಅಲ್ಲಿಯವರೆಗೆ ಆಕೆಯನ್ನು ಸೋಷಿಯಲ್ ಮೀಡಿಯದಲ್ಲಿ ತೋರಿಸಬಾರದು ಎನ್ನುವುದನ್ನು ನಾನು ಅನುಷ್ಕಾ ಸೇರಿ ತೀರ್ಮಾನಿಸಿದ್ದೇವೆ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದಾರೆ.

ಇಂಗ್ಲೆಂಡ್ ಎದುರಿನ ಟೆಸ್ಟ್ ಸರಣಿಯಿಂದ ಹೊರಗುಳಿದಿರುವ ವಿರಾಟ್ ಕೊಹ್ಲಿ:

ಭಾರತ ಹಾಗೂ ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿ ಸಾಗುತ್ತಿದ್ದು, ಈಗಾಗಲೇ ಮೊದಲ ಮೂರು ಪಂದ್ಯಗಳು ಮುಕ್ತಾಯವಾಗಿವೆ. ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಇದೇ ಮೊದಲ ಬಾರಿಗೆ ತವರಿನಲ್ಲಿ ನಡೆಯುತ್ತಿರುವ ಸಂಪೂರ್ಣ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ. ವೈಯುಕ್ತಿಕ ಕಾರಣ ನೀಡಿ ವಿರಾಟ್ ಕೊಹ್ಲಿ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ. ಇನ್ನು ವಿರಾಟ್ ಕೊಹ್ಲಿ ಅನುಪಸ್ಥಿತಿಯ ಹೊರತಾಗಿಯೂ ಮೊದಲ ಮೂರು ಪಂದ್ಯಗಳ ಅಂತ್ಯದ ವೇಳೆಗೆ 2-1ರ ಮುನ್ನಡೆ ಸಾಧಿಸಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?
ದಕ್ಷಿಣ ಆಫ್ರಿಕಾ ಎದುರಿನ ಏಕದಿನ ಸರಣಿ ಗೆಲುವಿನ ಬೆನ್ನಲ್ಲೇ ಐಸಿಸಿ ರ್‍ಯಾಂಕಿಂಗ್‌ ಪ್ರಕಟ; ಕೊಹ್ಲಿಗೆ ಜಾಕ್‌ಪಾಟ್!