
ಕಾನ್ಪುರ: ಟೀಂ ಇಂಡಿಯಾ ರನ್ ಮಷೀನ್ ವಿರಾಟ್ ಕೊಹ್ಲಿ, ತಮ್ಮ ಕ್ರಿಕೆಟ್ ವೃತ್ತಿಜೀವನದಲ್ಲಿ ಈಗಾಗಲೇ ಹಲವು ದಾಖಲೆಗಳ ಒಡೆಯರಾಗಿ ಹೊರಹೊಮ್ಮಿದ್ದಾರೆ. ಇದೀಗ ಕಾನ್ಪುರ ಟೆಸ್ಟ್ ಪಂದ್ಯದ ವೇಳೆಯಲ್ಲಿ ವಿರಾಟ್ ಕೊಹ್ಲಿ, ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿವೇಗವಾಗಿ 27,000 ರನ್ ಬಾರಿಸಿ ಬ್ಯಾಟರ್ ಎನ್ನುವ ಅಪರೂಪದ ದಾಖಲೆ ನಿರ್ಮಿಸಿದ್ದಾರೆ. ಈ ಮೂಲಕ ಕ್ರಿಕೆಟ್ ದೇವರು ಎಂದೇ ಕರೆಸಿಕೊಳ್ಳುವ ಸಚಿನ್ ತೆಂಡುಲ್ಕರ್ ಹೆಸರಿನಲ್ಲಿದ್ದ ದಾಖಲೆಯನ್ನು ಅಳಿಸಿ ಹಾಕಿದ್ದಾರೆ.
ಹೌದು, 35 ವರ್ಷದ ವಿರಾಟ್ ಕೊಹ್ಲಿ ತಮ್ಮ 535ನೇ ಅಂತಾರಾಷ್ಟ್ರೀಯ ಪಂದ್ಯ(594 ಇನ್ನಿಂಗ್ಸ್)ಗಳನ್ನಾಡಿ 27,000 ರನ್ ಪೂರೈಸಿದ್ದಾರೆ. ಇದಕ್ಕೂ ಮುನ್ನ ಕ್ರಿಕೆಟ್ ದಂತಕಥೆಗಳಾದ ಸಚಿನ್ ತೆಂಡುಲ್ಕರ್(34,357), ಕುಮಾರ್ ಸಂಗಕ್ಕರ(28,016) ಹಾಗೂ ರಿಕಿ ಪಾಂಟಿಂಗ್(27,483) ಮಾತ್ರವೇ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 27,000+ ರನ್ ಬಾರಿಸಿದ ಸಾಧನೆ ಮಾಡಿದ್ದಾರೆ.
ಒಂದೇ ದಿನದಲ್ಲಿ ಒಂದಲ್ಲ, ಎರಡಲ್ಲ, 4 ಟೆಸ್ಟ್ ವಿಶ್ವದಾಖಲೆ ಬ್ರೇಕ್ ಮಾಡಿದ ಟೀಂ ಇಂಡಿಯಾ!
ಸಚಿನ್ ತೆಂಡುಲ್ಕರ್ ದಾಖಲೆ ನುಚ್ಚುನೂರು: ಕ್ರಿಕೆಟ್ ದಂತಕಥೆ ಸಚಿನ್ ತೆಂಡುಲ್ಕರ್ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 27,000 ರನ್ ಪೂರೈಸಲು ಬರೋಬ್ಬರಿ 623 ಇನ್ನಿಂಗ್ಸ್ ತೆಗೆದುಕೊಂಡಿದ್ದರು. ಆದರೆ ಇದೀಗ ವಿರಾಟ್ ಕೊಹ್ಲಿ ಕೇವಲ 594 ಇನ್ನಿಂಗ್ಸ್‌ಗಳನ್ನಾಡಿ 27 ಸಾವಿರ ರನ್ ಗಡಿ ಡಾಟುವ ಮೂಲಕ ಸಚಿನ್ ದಾಖಲೆ ಬ್ರೇಕ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ
ಭಾರತ ಕಂಡ ದಿಗ್ಗಜ ಬ್ಯಾಟರ್‌ಗಳಲ್ಲಿ ಅಗ್ರಸ್ಥಾನದಲ್ಲಿ ನಿಲ್ಲುವ ವಿರಾಟ್ ಕೊಹ್ಲಿ ಇದುವರೆಗೂ ಭಾರತ ಪರ 114 ಟೆಸ್ಟ್, 295 ಏಕದಿನ ಹಾಗೂ 125 ಟಿ20 ಪಂದ್ಯಗಳನ್ನಾಡಿದ್ದಾರೆ. ಇತ್ತೀಚೆಗಷ್ಟೇ ವಿರಾಟ್ ಕೊಹ್ಲಿ, ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದರು.
ಇದೀಗ ಬಾಂಗ್ಲಾದೇಶ ಎದುರು ಕಾನ್ಪುರ ಟೆಸ್ಟ್‌ನಲ್ಲಿ ವಿರಾಟ್ ಕೊಹ್ಲಿ 35 ಎಸೆತಗಳನ್ನು ಎದುರಿಸಿ 4 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 47 ರನ್ ಬಾರಿಸಿ ಶಕೀಬ್ ಅಲ್ ಹಸನ್‌ಗೆ ವಿಕೆಟ್ ಒಪ್ಪಿಸಿದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.