RCB ತಂಡವನ್ನು ಗೆಲುವಿನ ದಡ ಸೇರಿಸಿ ಅನುಷ್ಕಾಗೆ ಫ್ಲೈಯಿಂಗ್ ಕಿಸ್ ಕೊಟ್ಟ ಕೊಹ್ಲಿ! ಅನನ್ಯಾ ಬಿರ್ಲಾ ರಿಯಾಕ್ಷನ್ ವೈರಲ್

Published : Mar 29, 2026, 12:42 PM IST
Virat Kohli

ಸಾರಾಂಶ

2026ರ ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಆರ್‌ಸಿಬಿ ತಂಡವು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ವಿರಾಟ್ ಕೊಹ್ಲಿ ಅವರ ಅಬ್ಬರದ ಬ್ಯಾಟಿಂಗ್ ಹಾಗೂ ಪಂದ್ಯದ ಬಳಿಕ ಅನುಷ್ಕಾ ಶರ್ಮಾಗೆ ನೀಡಿದ ಫ್ಲೈಯಿಂಗ್ ಕಿಸ್‌ಗೆ, ಆರ್‌ಸಿಬಿಯ ನೂತನ ಮಾಲೀಕರ ಸಹೋದರಿ ಅನನ್ಯಾ ಬಿರ್ಲಾ ಅವರ ಪ್ರತಿಕ್ರಿಯೆ ವೈರಲ್ ಆಗಿದೆ.

ಬೆಂಗಳೂರು: ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮೈದಾನದೊಳಗೆ ಹಾಗೂ ಮೈದಾನದಾಚೆಗೆ ಸಾಕಷ್ಟು ಸದ್ದು ಮಾಡುತ್ತಿದೆ. ಕೆಲ ದಿನಗಳ ಹಿಂದಷ್ಟೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯನ್ನು ಆದಿತ್ಯಾ ಬಿರ್ಲಾ ಗ್ರೂಪ್ 1.78 ಬಿಲಿಯನ್(ಸುಮಾರು 16,706 ಕೋಟಿ ರುಪಾಯಿ)ಗೆ ಖರೀದಿಸುವ ಮೂಲಕ ಎಲ್ಲರ ಹುಬ್ಬೇರಿಸುವಂತೆ ಮಾಡಿತ್ತು. ಈ ಮೂಲಕ ಐಪಿಎಲ್ ಇತಿಹಾಸದಲ್ಲಿಯೇ ಅತ್ಯಂತ ದುಬಾರಿ ಮೊತ್ತಕ್ಕೆ ಮಾರಾಟವಾದ ತಂಡ ಎನ್ನುವ ಅಪರೂಪದ ದಾಖಲೆಗೆ ಪಾತ್ರವಾಗಿತ್ತು.

ಇನ್ನು 2026ರ ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ರಜತ್ ಪಾಟೀದಾರ್ ನೇತೃತ್ವದ ಆರ್‌ಸಿಬಿ ತಂಡವು ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು 6 ವಿಕೆಟ್‌ಗಳಿಂದ ಮಣಿಸುವ ಮೂಲಕ ಶುಭಾರಂಭ ಮಾಡಿದೆ. ಗೆಲ್ಲಲು 202 ರನ್‌ಗಳ ಕಠಿಣ ಗುರಿ ಬೆನ್ನತ್ತಿದ ಆರ್‌ಸಿಬಿ ತಂಡವು ಕೇವಲ 4 ವಿಕೆಟ್ ಕಳೆದುಕೊಂಡು ಇನ್ನೂ 26 ಎಸೆತ ಬಾಕಿಯಿರುವಂತೆಯೇ ಗೆಲುವಿನ ನಗೆ ಬೀರಿತು. ಈ ಮೂಲಕ ಅತಿ ಕಡಿಮೆ ಎಸೆತಗಳನ್ನು ಎದುರಿಸಿ 200+ ರನ್ ಚೇಸ್ ಮಾಡಿ ಗೆದ್ದ ಮೊದಲ ತಂಡ ಎನ್ನುವ ಅಪರೂಪದ ದಾಖಲೆಗೂ ಆರ್‌ಸಿಬಿ ಪಾತ್ರವಾಗಿದೆ.

ಆರ್‌ಸಿಬಿ ಫ್ರಾಂಚೈಸಿಯ ನೂತನ ಮಾಲೀಕರಾದ ಆರ್ಯಮನ್ ಬಿರ್ಲಾ ಹಾಗೂ ಅವರ ಸಹೋದರಿ ಅನನ್ಯಾ ಬಿರ್ಲಾ ಕೂಡಾ ಚಿನ್ನಸ್ವಾಮಿ ಸ್ಟೇಡಿಯಂಗೆ ಬಂದು ತಮ್ಮ ತಂಡವನ್ನು ಬೆಂಬಲಿಸುವ ಮೂಲಕ ಗಮನ ಸೆಳೆದರು.

ಅನುಷ್ಕಾಗೆ ಪ್ಲೈಯಿಂಗ್ ಕಿಸ್ ಕೊಟ್ಟ ಕೊಹ್ಲಿ:

ಇನ್ನು ಸವಾಲಿನ ಗುರಿ ಬೆನ್ನತ್ತಿದ್ದ ಆರ್‌ಸಿಬಿ ತಂಡವು ಆರಂಭದಲ್ಲೇ ಫಿಲ್ ಸಾಲ್ಟ್ ವಿಕೆಟ್ ಕಳೆದುಕೊಂಡಿತು. ಈ ವೇಳೆ ಎರಡನೇ ವಿಕೆಟ್‌ಗೆ ಜತೆಯಾದ ವಿರಾಟ್ ಕೊಹ್ಲಿ ಹಾಗೂ ದೇವದತ್ ಪಡಿಕ್ಕಲ್ ಸ್ಪೋಟಕ ಬ್ಯಾಟಿಂಗ್ ನಡೆಸುವ ಮೂಲಕ ತಂಡಕ್ಕೆ ಆಸರೆಯಾದರು. ಪಡಿಕ್ಕಲ್ 61 ರನ್ ಸಿಡಿಸಿದರೆ, ಮಾಜಿ ನಾಯಕ ವಿರಾಟ್ ಕೊಹ್ಲಿ ಕೇವಲ 38 ಎಸೆತಗಳಲ್ಲಿ 69 ರನ್ ಸಿಡಿಸುವ ಮೂಲಕ ತಂಡವನ್ನು ಯಾವುದೇ ಅಪಾಯವಿಲ್ಲದೇ ಗೆಲುವಿನ ದಡ ಸೇರಿಸಿದರು. ಪಂದ್ಯವನ್ನು ಗೆಲ್ಲಿಸಿ ಪೆವಿಲಿಯನ್ ಕಡೆ ವಾಪಾಸ್ಸಾಗುವ ವೇಳೆ ವಿರಾಟ್ ಕೊಹ್ಲಿ, ಸ್ಟೇಡಿಯಂನಲ್ಲಿದ್ದ ಅನುಷ್ಕಾ ಶರ್ಮಾಗೆ ಹೂಮುತ್ತು ಕೊಟ್ಟು ಗಮನ ಸೆಳೆದರು. ಈ ವೇಳೆ ಪಕ್ಕದಲ್ಲೇ ಇದ್ದ ಅನನ್ಯಾ ಬಿರ್ಲಾ ಅವರ ರಿಯಾಕ್ಷನ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಹೀಗಿತ್ತು ನೋಡಿ ಆ ಕ್ಷಣ:

 

 

 

ಸದ್ಯ 19ನೇ ಸೀಸನ್ ಐಪಿಎಲ್ ಟೂರ್ನಿಯಲ್ಲಿ ಆರ್‌ಸಿಬಿ ತಂಡವು ಶುಭಾರಂಭ ಮಾಡುವ ಮೂಲಕ ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ. ಇದೀಗ ಆರ್‌ಸಿಬಿ ತಂಡವು ಮೇ 05ರಂದು ನಡೆಯಲಿರುವ ತನ್ನ ಪಾಲಿನ ಮುಂದಿನ ಪಂದ್ಯದಲ್ಲಿ ಬದ್ದ ಎದುರಾಳಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯ ವಹಿಸಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಐಪಿಎಲ್ ಲೈವ್ ಕಾಮೆಂಟರಿಯಲ್ಲೇ ಕಿತ್ತಾಡಿಕೊಂಡ ಸೆಹ್ವಾಗ್, ಆರ್ ಅಶ್ವಿನ್: ಇಬ್ಬರ ವಿರುದ್ಧ ಬಿಸಿಸಿಐ ಕ್ರಮ ಸಾಧ್ಯತೆ
'2 ವರ್ಷ ಬ್ಯಾನ್ ಮಾಡಿದ್ರೆ ಸಾಕಾಗಲ್ಲ'; IPL ಆಟಗಾರರಿಗೆ ಖಡಕ್ ವಾರ್ನಿಂಗ್ ಕೊಟ್ಟ ಸುನಿಲ್ ಗವಾಸ್ಕರ್!