ಕೊಹ್ಲಿ ಪಾಲಾದ ಆರೆಂಜ್ ಕ್ಯಾಪ್, ಆದ್ರೆ ಆರ್‌ಸಿಬಿ ನಾಯಕನಿಂದಲೇ ಪೈಪೋಟಿ! ಟಾಪ್-5 ಪಟ್ಟಿಯಿಂದ ಸಂಜು ಸ್ಯಾಮ್ಸನ್ ಔಟ್

Published : Apr 16, 2026, 06:25 PM IST
Virat Kohli

ಸಾರಾಂಶ

ಐಪಿಎಲ್ 19ನೇ ಸೀಸನ್‌ನಲ್ಲಿ ವಿರಾಟ್ ಕೊಹ್ಲಿ ಆರೆಂಜ್ ಕ್ಯಾಪ್ ಪಡೆದಿದ್ದಾರೆ. ಆದರೆ, ಅವರದೇ ತಂಡದ ಆಟಗಾರ ರಜತ್ ಪಾಟಿದಾರ್ ಕೇವಲ 6 ರನ್‌ಗಳ ಅಂತರದಿಂದ ತೀವ್ರ ಪೈಪೋಟಿ ನೀಡುತ್ತಿದ್ದು, ಕೊಹ್ಲಿಯ ಅಗ್ರಸ್ಥಾನಕ್ಕೆ ಸವಾಲು ಹಾಕಿದ್ದಾರೆ. ಇದೇ ವೇಳೆ, ಕೊಹ್ಲಿ ತಮ್ಮ ಐಪಿಎಲ್ ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಇಂಪ್ಯಾಕ್ಟ್ ಪ್ಲೇಯರ್ ಆಗಿ ಆಡಿದ್ದು ವಿಶೇಷವಾಗಿತ್ತು.

ಬೆಂಗಳೂರು: 19ನೇ ಸೀಸನ್ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು ಭರ್ಜರಿಯಾಗಿ ಸಾಗುತ್ತಿದೆ. ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತವರಿನಲ್ಲಿ ಲಖನೌ ಸೂಪರ್ ಜೈಂಟ್ಸ್ ಎದುರು ಭರ್ಜರಿ ಜಯ ಸಾಧಿಸುವ ಮೂಲಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರುವಲ್ಲಿ ಯಶಸ್ವಿಯಾಗಿದೆ. ಇನ್ನು ಇದೇ ವೇಳೆ ಆರ್‌ಸಿಬಿ ರನ್ ಮಷೀನ್ ವಿರಾಟ್ ಕೊಹ್ಲಿ, ಟೂರ್ನಿಯಲ್ಲಿ ಗರಿಷ್ಠ ರನ್ ಬಾರಿಸುವ ಮೂಲಕ ಆರೆಂಜ್ ಕ್ಯಾಪ್ ತಮ್ಮದಾಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಕೊಹ್ಲಿಗೆ ಇದೀಗ ತಮ್ಮದೇ ತಂಡದ ನಾಯಕನಿಂದ ದೊಡ್ಡ ಪೈಪೋಟಿ ಶುರವಾಗಿದೆ.

ಹೌದು, ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಏಪ್ರಿಲ್ 15ರಂದು ನಡೆದ ಲಖನೌ ಸೂಪರ್ ಜೈಂಟ್ಸ್ ಎದುರಿನ ಪಂದ್ಯದ ಬಳಿಕ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಿಗೆ ಸಿಗುವ ಆರೆಂಜ್ ಕ್ಯಾಪ್ ಅನ್ನು ವಿರಾಟ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ. ಲಖನೌ ಸೂಪರ್ ಜೈಂಟ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಕೊಹ್ಲಿ 34 ಎಸೆತಗಳಲ್ಲಿ 49 ರನ್ ಗಳಿಸಿದರು. ಈ ಮೂಲಕ ಅವರು ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದ್ದಾರೆ. 147 ರನ್‌ಗಳ ಗುರಿ ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕೊಹ್ಲಿಯೇ ಅತಿ ಹೆಚ್ಚು ರನ್ ಗಳಿಸಿದ್ದು. ಈ ಮೂಲಕ ಈ ಸೀಸನ್‌ನಲ್ಲಿ ಕೊಹ್ಲಿಯ ಒಟ್ಟು ರನ್ ಗಳಿಕೆ 5 ಪಂದ್ಯಗಳಿಂದ 228ಕ್ಕೆ ಏರಿದೆ.

ಸನ್‌ರೈಸರ್ಸ್ ಹೈದರಾಬಾದ್‌ನ ಹೆನ್ರಿಚ್ ಕ್ಲಾಸೆನ್ 224 ರನ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಬುಧವಾರದ ಪ್ರದರ್ಶನದ ನಂತರ ರಜತ್ ಪಾಟಿದಾರ್ ಮೂರನೇ ಸ್ಥಾನಕ್ಕೇರಿದ್ದಾರೆ. ಅವರು 5 ಪಂದ್ಯಗಳಿಂದ 222 ರನ್ ಗಳಿಸಿದ್ದಾರೆ. ಈ ಮೂಲಕ ವಿರಾಟ್ ಕೊಹ್ಲಿ ಅವರಿಗಿಂತ ಕೇವಲ 6 ರನ್ ಹಿಂದಿದ್ದಾರೆ. ಹೀಗಾಗಿ ಮುಂಬರುವ ಪಂದ್ಯಗಳಲ್ಲೂ ರಜತ್ ಪಾಟೀದಾರ್ ಉತ್ತಮ ಪ್ರದರ್ಶನ ತೋರಿದರೆ, ಕೊಹ್ಲಿಯಿಂದ ಆರೆಂಜ್ ಕ್ಯಾಪ್ ರಜತ್ ಪಾಟೀದಾರ್ ಪಾಲಾದರೂ ಅಚ್ಚರಿಯಿಲ್ಲ.

ಇವರಲ್ಲದೆ, ಸನ್‌ರೈಸರ್ಸ್ ಹೈದರಾಬಾದ್ ತಂಡದ ಇಶಾನ್ ಕಿಶನ್ (213) ಮತ್ತು 15 ವರ್ಷದ ಯುವ ಪ್ರತಿಭೆ ರಾಜಸ್ಥಾನ ರಾಯಲ್ಸ್ ತಂಡದ ಆರಂಭಿಕ ಬ್ಯಾಟರ್ ವೈಭವ್ ಸೂರ್ಯವಂಶಿ (200) ಈ ಸೀಸನ್‌ನಲ್ಲಿ 200ಕ್ಕೂ ಹೆಚ್ಚು ರನ್ ಗಳಿಸಿದ ಇತರ ಆಟಗಾರರು. ಇವರ ನಂತರ, ಚೆನ್ನೈ ಸೂಪರ್ ಕಿಂಗ್ಸ್‌ನ ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ 6ನೇ ಸ್ಥಾನದಲ್ಲಿದ್ದಾರೆ. ಸಂಜು 5 ಪಂದ್ಯಗಳಿಂದ 185 ರನ್ ಗಳಿಸಿದ್ದಾರೆ.

ಐಪಿಎಲ್‌ನಲ್ಲಿ ಮೊದಲ ಸಲ ಇಂಪ್ಯಾಕ್ಟ್ ಪ್ಲೇಯರ್ ಆದ ವಿರಾಟ್

ಮುಂಬೈ ಇಂಡಿಯನ್ಸ್ ವಿರುದ್ದದ ಪಂದ್ಯದಲ್ಲಿ ಗಾಯಗೊಂಡು ಕೇವಲ ಬ್ಯಾಟಿಂಗ್‌ನಲ್ಲಿ ಕಾಣಿಸಿಕೊಂಡಿದ್ದ ವಿರಾಟ್ ಕೊಹ್ಲಿ, ಲಖನೌ ಎದುರು ಇಂಪ್ಯಾಕ್ಟ್ ಬ್ಯಾಟರ್ ಆಗಿ ಕಣಕ್ಕಿಳಿಯುವ ಮೂಲಕ ಗಮನ ಸೆಳೆದರು. ತಮ್ಮ ಐಪಿಎಲ್ ವೃತ್ತಿಜೀವನದಲ್ಲಿ ವಿರಾಟ್ ಕೊಹ್ಲಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿದಿದ್ದು ಇದೇ ಮೊದಲು. ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡ ಆರ್‌ಸಿಬಿಯ ಆರಂಭಿಕ ತಂಡದಲ್ಲಿ ಕೊಹ್ಲಿ ಇರಲಿಲ್ಲ. ಆದರೆ ಗುರಿ ಬೆನ್ನತ್ತುವಾಗ ಆರಂಭಿಕ ಬ್ಯಾಟರ್ ಆಗಿ ಕಣಕ್ಕಿಳಿದು, ಈ ಪಂದ್ಯದಲ್ಲಿ ಆರ್‌ಸಿಬಿ ಪರ ಗರಿಷ್ಠ ವೈಯುಕ್ತಿಕ ಸ್ಕೋರ್ ಗಳಿಸಿದರು.

ಪರ್ಪಲ್ ಕ್ಯಾಪ್ ಪೈಪೋಟಿಯಲ್ಲಿ ಬದಲಾವಣೆ ಇಲ್ಲ

ವಿಕೆಟ್ ಬೇಟೆಗಾರರ ಪಟ್ಟಿಯಲ್ಲಿ ಯಾವುದೇ ದೊಡ್ಡ ಬದಲಾವಣೆಗಳಾಗಿಲ್ಲ. ತಲಾ 10 ವಿಕೆಟ್ ಪಡೆದಿರುವ ಚೆನ್ನೈ ಸೂಪರ್ ಕಿಂಗ್ಸ್‌ನ ಅನ್ಸೂಲ್ ಕಂಬೋಜ್ ಮತ್ತು ಗುಜರಾತ್ ಟೈಟಾನ್ಸ್‌ನ ಪ್ರಸಿದ್ಧ್ ಕೃಷ್ಣ ಜಂಟಿಯಾಗಿ ಮೊದಲ ಸ್ಥಾನದಲ್ಲಿದ್ದಾರೆ. ರಾಜಸ್ಥಾನ ರಾಯಲ್ಸ್‌ನ ರವಿ ಬಿಷ್ಣೋಯ್ ಮತ್ತು ಲಖನೌ ಸೂಪರ್ ಜೈಂಟ್ಸ್‌ನ ಪ್ರಿನ್ಸ್ ಯಾದವ್ ತಲಾ 9 ವಿಕೆಟ್‌ಗಳೊಂದಿಗೆ ನಂತರದ ಸ್ಥಾನಗಳಲ್ಲಿದ್ದಾರೆ. ಭುವನೇಶ್ವರ್ ಕುಮಾರ್ ಮತ್ತು ಕೃನಾಲ್ ಪಾಂಡ್ಯ 5 ಪಂದ್ಯಗಳಿಂದ ತಲಾ 7 ವಿಕೆಟ್ ಪಡೆದಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

CSK ತಂಡಕ್ಕೆ ಬಡಿದ 440 ವೋಲ್ಟ್ ಶಾಕ್! ಸತತ ಎರಡು ಗೆಲುವಿನ ಬೆನ್ನಲ್ಲೇ ಪ್ರಮುಖ ವೇಗಿ ಟೂರ್ನಿಯಿಂದಲೇ ಔಟ್
ಆಟವಲ್ಲ, ಆರ್‌ಸಿಬಿಯ ಇಡ್ಲಿ-ದೋಸೆ-ಚಟ್ನಿ ಹಾಡು ಕೇಳಿ ಕಿವಿಯಲ್ಲಿ ರಕ್ತ ತಂದುಕೊಂಡ ಚೆನ್ನೈ, ಬಿಸಿಸಿಐಗೆ ಪತ್ರ ಬರೆದು ದೂರು!