ಅಭ್ಯಾಸ ಪಂದ್ಯ: ರಾಹುಲ್ ಪಡೆಯೆದುರು ವಿರಾಟ್ ಕೊಹ್ಲಿ ತಂಡಕ್ಕೆ ಭರ್ಜರಿ ಗೆಲುವು

Kannadaprabha News   | Asianet News
Published : Nov 23, 2020, 09:39 AM IST
ಅಭ್ಯಾಸ ಪಂದ್ಯ: ರಾಹುಲ್ ಪಡೆಯೆದುರು ವಿರಾಟ್ ಕೊಹ್ಲಿ ತಂಡಕ್ಕೆ ಭರ್ಜರಿ ಗೆಲುವು

ಸಾರಾಂಶ

ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಭಾರತ ಕ್ರಿಕೆಟ್‌ ತಂಡ ಭಾನುವಾರ ಅಭ್ಯಾಸ ಪಂದ್ಯವನ್ನಾಡಿದೆ. ಈ ಪಂದ್ಯದಲ್ಲಿ ವಿರಾಟ್ ಪಡೆ ಭರ್ಜರಿ ಗೆಲುವು ದಾಖಲಿಸಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

ಸಿಡ್ನಿ(ನ.23): ಆಸ್ಪ್ರೇಲಿಯಾ ವಿರುದ್ಧದ ಸರಣಿಗಾಗಿ ಇಲ್ಲಿನ ಒಲಿಂಪಿಕ್‌ ಪಾರ್ಕ್‌ನಲ್ಲಿ ಕ್ವಾರಂಟೈನ್‌ನಲ್ಲಿರುವ ಟೀಂ ಇಂಡಿಯಾ, ಭಾನುವಾರ ಅಂತರ ತಂಡಗಳ ನಡುವೆ ಅಭ್ಯಾಸ ಪಂದ್ಯವನ್ನಾಡಿತು. 

ಈ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ ಸಿ.ಕೆ. ನಾಯ್ಡು ಇಲೆವೆನ್‌, ಕೆ.ಎಲ್‌. ರಾಹುಲ್‌ ರಂಜಿತ್‌ಸಿನ್‌ಜಿ ಇಲೆವೆನ್‌ ವಿರುದ್ಧ 5 ವಿಕೆಟ್‌ಗಳ ಗೆಲುವು ಸಾಧಿಸಿತು. 40 ಓವರ್‌ಗಳ ಪಂದ್ಯ ಇದಾಗಿದ್ದು, ಉಭಯ ತಂಡಗಳು ತಲಾ 40 ಓವರ್‌ ಆಟದಲ್ಲಿ ಭಾಗಿಯಾಗಿವೆ. ನ.27 ರಿಂದ ಆಸ್ಪ್ರೇಲಿಯಾ ವಿರುದ್ಧ ಸೀಮಿತ ಓವರ್‌ಗಳ ಸರಣಿ ನಡೆಯಲಿದೆ. ಹೀಗಾಗಿ ಪೂರ್ವಭಾವಿ ಅಭ್ಯಾಸಕ್ಕಾಗಿ ಭಾರತ ತಂಡ, ಈ ಅಭ್ಯಾಸ ಪಂದ್ಯವನ್ನಾಡಿದೆ.

ಕ್ವಾರಂಟೈನ್‌ನಲ್ಲಿ ಗಿಟಾರ್ ನುಡಿಸಿದ ದೀಪಕ್ ಚಹರ್

ರಾಹುಲ್‌ ಇಲೆವೆನ್‌ ಪರ ಮಯಾಂಕ್‌ ಅಗರ್‌ವಾಲ್‌ ಹಾಗೂ ಶಿಖರ್‌ ಧವನ್‌ ಆರಂಭಿಕರಾಗಿ ಕಣಕ್ಕಿಳಿದಿದ್ದರು. ರಾಹುಲ್‌ (83 ರನ್‌, 66 ಎಸೆತ) ಅತ್ಯದ್ಭುತ ಬ್ಯಾಟಿಂಗ್‌ ನೆರವಿನಿಂದ 235 ರನ್‌ಗಳಿಸಿತು. ಇದಕ್ಕುತ್ತರವಾಗಿ ಬ್ಯಾಟಿಂಗ್‌ ಮಾಡಿದ ಕೊಹ್ಲಿ ಪಡೆ, 26 ಎಸೆತ ಬಾಕಿ ಇರುವಂತೆ ಗೆಲುವಿನ ನಗೆ ಬೀರಿತು. ಕೊಹ್ಲಿ ತಂಡದ ಪರ ಪೃಥ್ವಿ ಶಾ ಹಾಗೂ ಶುಭ್‌ಮನ್‌ ಗಿಲ್‌ ಇನ್ನಿಂಗ್ಸ್‌ ಆರಂಭಿಸಿದರು. ನಾಯಕ ವಿರಾಟ್ ಕೊಹ್ಲಿ‌ 58 ಎಸೆತಗಳಲ್ಲಿ 91 ರನ್‌ ಚಚ್ಚುವ ಮೂಲಕ ಕೊಹ್ಲಿ ಪಡೆಗೆ ಜಯ ತಂದುಕೊಟ್ಟರು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಜೈಸ್ವಾಲ್‌ ಸಖತ್‌ ಸೆಂಚುರಿ, ಟೆಸ್ಟ್‌ ಸರಣಿ ಸೋಲಿಗೆ ಏಕದಿನದಲ್ಲಿ ಸೇಡು ತೀರಿಸಿಕೊಂಡ ಭಾರತ!
ಫೋಟೋ ಹಂಚಿಕೊಂಡು 'ಡಾರ್ಲಿಂಗ್‌..' ಎಂದು ಬರೆದ ಸಾರಾ ತೆಂಡುಲ್ಕರ್‌