
ಮುಂಬೈ (ಜೂ.12) ಕ್ರಿಕೆಟಿಗ ವಿರಾಟ್ ಕೊಹ್ಲಿ ಸದ್ಯ ವಿಶ್ರಾಂತಿಯಲ್ಲಿದ್ದಾರೆ. ಇಂಜುರಿ ಕಾರಣದಿಂದ ಟೀಂ ಇಂಡಿಯಾದಿಂದ ಹೊರಗುಳಿದಿರುವ ವಿರಾಟ್ ಕೊಹ್ಲಿ ಕುಟುಂಬದ ಜೊತೆಗೆ ಕಾಲ ಕಳೆಯುತ್ತಿದ್ದಾರೆ. ಐಪಿಎಲ್ ಟೂರ್ನಿಯಲ್ಲಿ ಸತತ 2ನೇ ಬಾರಿಗೆ ಆರ್‌ಸಿಬಿ ಟ್ರೋಫಿ ಗೆಲ್ಲುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ ವಿರಾಟ್ ಕೊಹ್ಲಿ ಇದೀಗ ಹೊಸ ಹೇರ್‌ಸ್ಟೈಲ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಬಾರಿ ಕೊಹ್ಲಿ ಪಾಸ್ಟೆಲ್ ಹೇರ್ ಕಲರ್ ಮಾಡಿಸಿಕೊಂಡಿದ್ದಾರೆ.
ವಿರಾಟ್ ಕೊಹ್ಲಿ ಹೊಸ ಪಾಸ್ಟೆಲ್ ಹೇರ್ ಕಲರಿಂಗ್ ಹಾಗೂ ಹೊಸ ಹೇರ್ ಸ್ಟೈಲ್‌ನಿಂದ ಮತ್ತಷ್ಟು ಯಂಗ್ ಆಗಿ ಕಾಣಿಸಿಕೊಂಡಿದ್ದಾರೆ. ಕೊಹ್ಲಿ ಹೊಸ ಹೇರ್‌ಸ್ಟೈಲ್‌ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ವಿರಾಟ್ ಕೊಹ್ಲಿ ಅವರ ಈ ಹೊಸ ಮೇಕ್ ಓವರ್ ಹಾಗೂ ಹೇರ್‌ಸ್ಟೈಲ್‌ನ ರೋಚಕ ವಿಡಿಯೋವನ್ನು ಖ್ಯಾತ ಸೆಲೆಬ್ರಿಟಿ ಹೇರ್‌ಸ್ಟೈಲಿಸ್ಟ್ ರಶೀದ್ ಸಲ್ಮಾನಿ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಕೊಹ್ಲಿ ತಮ್ಮ ಹೊಸ ಹೇರ್‌ಸ್ಟೈಲ್ ಅನ್ನು ಕನ್ನಡಿಯ ಮುಂದೆ ನಿಂತು ಸೆಲ್ಫಿ ವಿಡಿಯೋ ಮೂಲಕ ತೋರಿಸುತ್ತಿರುವ ವಿಡಿಯೋ ಪೋಸ್ಟ್ ಮಾಡಲಾಗಿದೆ. ಅಭಿಮಾನಿಗಳು ಭರ್ಜರಿ ಕಮೆಂಟ್ ಮಾಡಿದ್ದಾರೆ. ಕೊಹ್ಲಿ ಹೊಸ ಹೇರ್‌ಸ್ಟೈಲ್ ಉತ್ತಮವಾಗಿದೆ ಎಂದು ಹಲವರು ಪ್ರತಿಕ್ರಿಯಿಸಿದ್ದಾರೆ.
ಇತ್ತೀಚೆಗಷ್ಟೇ ಅಹಮದಾಬಾದ್‌ನಲ್ಲಿ ನಡೆದ ಐಪಿಎಲ್ 2026ರ ರೋಚಕ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ 5 ವಿಕೆಟ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಎರಡನೇ ಬಾರಿಗೆ ಐಪಿಎಲ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತ್ತು. ಈ ಫೈನಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅಜೇಯ 75 ರನ್ ಸಿಡಿಸಿ ಆರ್‌ಸಿಬಿ ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಆದರೆ ಗಾಯಕ್ಕೆ ತುತ್ತಾದ ಕೊಹ್ಲಿ ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ.
ಗಾಯದ ಕಾರಣದಿಂದಾಗಿ ಜೂನ್ 13 ರಿಂದ ಆರಂಭವಾಗಲಿರುವ ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಿಂದ ಅವರು ಹೊರಗುಳಿದಿದ್ದಾರೆ. ಆದರೆ ಜುಲೈನಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ವೇಳೆಗೆ ಅವರು ಸಂಪೂರ್ಣ ಫಿಟ್ ಆಗಲಿದ್ದಾರೆ ಎಂದು ವರದಿಗಳು ತಿಳಿಸಿವೆ. ಸದ್ಯ ಕ್ರಿಕೆಟ್ ಮೈದಾನದಿಂದ ಕೊಂಚ ದೂರವಿರುವ ಕೊಹ್ಲಿ, ಈ ಬಿಡುವಿನ ವೇಳೆಯಲ್ಲಿ ತಮ್ಮ ಹೊಸ ಲುಕ್ ಮೂಲಕ ಅಭಿಮಾನಿಗಳಿಗೆ ಭರ್ಜರಿ ಸರ್ಪ್ರೈಸ್ ನೀಡಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.