ಅಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಬಳಿಕ ವಿರಾಟ್ ಕೊಹ್ಲಿ ತವರಿಗೆ ವಾಪಾಸಾಗುವ ಬಗ್ಗೆ ಕೋಚ್ ರವಿಶಾಸ್ತ್ರಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ
ಸಿಡ್ನಿ(ನ.23): ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮೊದಲ ಟೆಸ್ಟ್ ಪಂದ್ಯದ ಬಳಿಕ ತವರಿಗೆ ಮರಳುತ್ತಿರುವುದು ಒಳ್ಳೆಯ ನಿರ್ಧಾರ ಎಂದು ಭಾರತ ಕ್ರಿಕೆಟ್ ತಂಡದ ಕೋಚ್ ರವಿಶಾಸ್ತ್ರಿ ಹೇಳಿದ್ದಾರೆ.
ಡಿಸೆಂಬರ್ 17ರಿಂದ ಆರಂಭವಾಗಲಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ವಿರಾಟ್ ಕೊಹ್ಲಿ ಅಡಿಲೇಡ್‌ನಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯವನ್ನು ಆಡಲಿದ್ದಾರೆ. ಆ ಬಳಿಕ ತವರಿಗೆ ವಾಪಾಸಾಗಲಿದ್ದಾರೆ. ಹೀಗಾಗಿ ವಿರಾಟ್ ಕೊಹ್ಲಿ ಇನ್ನುಳಿದ 3 ಟೆಸ್ಟ್ ಪಂದ್ಯಗಳಿಂದ ವಂಚಿತರಾಗಲಿದ್ದಾರೆ. ಬಿಸಿಸಿಐ ನಾಯಕ ವಿರಾಟ್ ಕೊಹ್ಲಿಗೆ ಪಿತೃತ್ವದ ರಜೆ ನೀಡಿದೆ.
undefined
ವಿರಾಟ್ ಕೊಹ್ಲಿ ಸರಿಯಾದ ನಿರ್ಧಾರವನ್ನೇ ತಗೆದುಕೊಂಡಿದ್ದಾರೆ ಎಂದು ನನಗನಿಸುತ್ತಿದೆ. ಅಂತಹ ಕ್ಷಣಗಳು ಜೀವನದಲ್ಲಿ ಮತ್ತೆ ಮತ್ತೆ ಬರುವುದಿಲ್ಲ. ಇದೊಂದು ಒಳ್ಳೆಯ ಅವಕಾಶ. ವಿರಾಟ್‌ಗೆ ತಾವು ತೆಗೆದುಕೊಂಡ ತೀರ್ಮಾನದಿಂದ ಅವರಿಗೆ ಖುಷಿಯಾಗಿರಬಹುದು ಎಂದು ಎಬಿಸಿ ಸ್ಪೋರ್ಟ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ ಎಂದು ಇಎಸ್‌ಪಿಎನ್ ಕ್ರಿಕ್‌ಇನ್ಫೋ ವರದಿ ಮಾಡಿದೆ.
ರೋಹಿತ್-ಇಶಾಂತ್ ಆಸೀಸ್ ಪ್ರವಾಸ ಯಾವಾಗ? ಕೋಚ್ ರವಿಶಾಸ್ತ್ರಿ ಕೊಟ್ರು ಸುಳಿವು
ಭಾರತ-ಆಸ್ಟ್ರೇಲಿಯಾ ನಡುವಿನ ಸೀಮಿತ ಓವರ್‌ಗಳ ಸರಣಿ ನವೆಂಬರ್ 27ರಿಂದ ಆರಂಭವಾಗಲಿದೆ. ಮೊದಲಿಗೆ 3 ಪಂದ್ಯಗಳ ಏಕದಿನ ಸರಣಿ ನಡೆಯಲಿದ್ದು, ಆ ಬಳಿಕ 3 ಪಂದ್ಯಗಳ ಟಿ20 ಸರಣಿ ಜರುಗಲಿದೆ. ಕೊನೆಯಲ್ಲಿ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಆರಂಭವಾಗಲಿದೆ.