ಟಿ20 ವಿಶ್ವಕಪ್ ಟೂರ್ನಿಯಿಂದ ವಿರಾಟ್ ಕೊಹ್ಲಿಗೆ ಕೊಕ್ ಸಾಧ್ಯತೆ, ಐಪಿಎಲ್ ಪ್ರದರ್ಶನ ನಿರ್ಣಾಯಕ!

Published : Mar 12, 2024, 05:39 PM IST
ಟಿ20 ವಿಶ್ವಕಪ್ ಟೂರ್ನಿಯಿಂದ ವಿರಾಟ್ ಕೊಹ್ಲಿಗೆ ಕೊಕ್ ಸಾಧ್ಯತೆ, ಐಪಿಎಲ್ ಪ್ರದರ್ಶನ ನಿರ್ಣಾಯಕ!

ಸಾರಾಂಶ

ಟಿ20 ವಿಶ್ವಕಪ್ ಟೂರ್ನಿಗೆ ಸಿದ್ಧತೆಗಳು ನಡೆಯುತ್ತಿದೆ. ಇದೀಗ ಅಭಿಮಾನಿಗಳಿಗೆ ಆಘಾತಕಾರಿ ಮಾಹಿತಿಯೊಂದು ಹೊರಬಿದ್ದಿದೆ. ಟಿ20 ವಿಶ್ವಕಪ್‌ನಿಂದ ವಿರಾಟ್ ಕೊಹ್ಲಿಗೆ ಕೊಕ್ ನೀಡುವ ಸಾಧ್ಯತೆ ಇದೆ. ಐಪಿಎಲ್ ಟೂರ್ನಿ ಪ್ರದರ್ಶನ ಆಧರಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲು ಬಿಸಿಸಿಐ ನಿರ್ಧರಿಸಿದೆ.

ಮುಂಬೈ(ಮಾ.12) ಭಾರತದಲ್ಲಿ ಇದೀಗ ಐಪಿಎಲ್ ಜ್ವರ ಶುರುವಾಗಿದೆ. ತಂಡಗಳ ಅಭ್ಯಾಸ ಆರಂಭಗೊಂಡಿದೆ. ವರ್ಣರಂಜಿತ ಟೂರ್ನಿಗೆ ಕೆಲ ದಿನಗಳು ಮಾತ್ರ ಬಾಕಿ. ಟೀಂ ಇಂಡಿಯಾ ಕ್ರಿಕೆಟಿಗರು ಸೇರಿದಂತೆ ಯುವ ಕ್ರಿಕೆಟಿಗರು ಇದೀಗ ಐಪಿಎಲ್ ತಯಾರಿಯಲ್ಲಿ ಮುಳುಗಿದ್ದಾರೆ. ಇದರ ಜೊತೆಗೆ ಬಿಸಿಸಿಐ ಟಿ20 ವಿಶ್ವಕಪ್ ಟೂರ್ನಿಗೆ ತಯಾರಿ ನಡೆಸುತ್ತಿದೆ. ಈ ತಯಾರಿ ನಡುವೆ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಈ ಬಾರಿಯ ಟಿ20 ವಿಶ್ವಕಪ್ ಟೂರ್ನಿಗೆ ವಿರಾಟ್ ಕೊಹ್ಲಿ ಆಯ್ಕೆ ಮಾಡಲು ಬಿಸಿಸಿಐ ಆಸಕ್ತಿ ತೋರಿಲ್ಲ. ಕೊಹ್ಲಿಗೆ ಕೊಕ್ ನೀಡಿ ಯುವ ಆಟಗಾರರಿಗೆ ಮಣೆ ಹಾಕಲು ಬಿಸಿಸಿಐ ನಿರ್ಧರಿಸಿದೆ. ಆದರೆ ತಂಡಕ್ಕೆ ಕೊಡುಗೆ ನೀಡಿರುವ ವಿರಾಟ್ ಕೊಹ್ಲಿ ಆಯ್ಕೆಗೆ ಕೊನೆಯ ಒಂದು ಅವಕಾಶ ನೀಡಲು ಬಿಸಿಸಿಐ ನಿರ್ಧರಿಸಿದೆ.ಕೊಹ್ಲಿ ಐಪಿಎಲ್ ಟೂರ್ನಿ ಪ್ರದರ್ಶನ ಆಧರಿಸಿ ಅಂತಿಮ ನಿರ್ಧಾರ ಕೈಗೊಳ್ಳಲು ಬಿಸಿಸಿಐ ಮುಂದಾಗಿದೆ.

ಟಿ20 ಮಾದರಿಯಲ್ಲಿ ವಿರಾಟ್ ಕೊಹ್ಲಿ ತಮ್ಮ ಸಾಮರ್ಥ್ಯ ಸಾಬೀತುಪಡಿಸಲು ವಿಫಲವಾಗಿದ್ದಾರೆ. ಕೊಹ್ಲಿ ನೈಜ ಪ್ರದರ್ಶನ ಅಂತಾರಾಷ್ಟ್ರೀಯ ಟಿ20 ಮಾದರಿಯಲ್ಲಿ ವಿರಳವಾಗಿದೆ. ಜನವರಿ ತಿಂಗಳಲ್ಲಿ ವಿರಾಟ್ ಕೊಹ್ಲಿ ಆಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿ ಆಡಿದ್ದರು. ಇದಾದ ಬಳಿಕ ಟೆಸ್ಟ್, ಏಕದಿನ ಹಾಗೂ ಟಿ20 ಯಾವುದರಲ್ಲೂ ಕಾಣಿಸಿಕೊಂಡಿಲ್ಲ. ಮತ್ತೊಂದೆಡೆ ಶಾರ್ಟ್ ಮಾದರಿಯಲ್ಲಿ ಕೊಹ್ಲಿ ಪ್ರದರ್ಶನ ಎಲ್ಲವನ್ನೂ ಗಮನದಲ್ಲಿಟ್ಟುಕೊಂಡು ನೇರವಾಗಿ ಟಿ20 ವಿಶ್ವಕಪ್ ಟೂರ್ನಿಗೆ ಆಯ್ಕೆ ಮಾಡದಿರಲು ಬಿಸಿಐ ಮುಂದಾಗಿದೆ.

ನಿಯತ್ತು ಎಲ್ಲಕ್ಕಿಂತ ಮಿಗಿಲು: RCB ಪರ ಕೊಹ್ಲಿ ಪಾದಾರ್ಪಣೆಗೆ 16ರ ಹರೆಯ..! KGF ಟಚ್ ಕೊಟ್ಟ ಬೆಂಗಳೂರು ಫ್ರಾಂಚೈಸಿ

ಆಫ್ಘಾನಿಸ್ತಾನ ವಿರುದ್ಧದ ಸರಣಿ ಮೊದಲು 14 ತಿಂಗಳು ಕೊಹ್ಲಿ ಯಾವುದೇ ಟಿ20 ಪಂದ್ಯ ಆಡಿಲ್ಲ. ಬರೋಬ್ಬರಿ ಒಂದು ವರ್ಷ 2 ತಿಂಗಳ ಬಳಿಕ ಆಫ್ಘಾನಿಸ್ತಾನ ಸರಣಿಯಲ್ಲಿ ಕಾಣಿಸಿಕೊಂಡಿದ್ದರು. ಕಳೆದೆರಡು ವರ್ಷದಲ್ಲಿ ಕೊಹ್ಲಿ ಬೆರೆಳೆಣಿಕೆ ಅಂತಾರಾಷ್ಟ್ರೀಯ ಟಿ20 ಪಂದ್ಯಗಳನ್ನಾಡಿದ್ದಾರೆ. ಆಡಿದ ಪಂದ್ಯದಲ್ಲೂ ಸ್ಫೋಟಕ ಬ್ಯಾಟಿಂಗ್ ಮಾಡುವಲ್ಲಿ ವಿಫಲವಾಗಿದ್ದಾರೆ ಅನ್ನೋದು ಬಿಸಿಸಿಐ ಪರಾಮರ್ಶೆಯಾಗಿದೆ.

ಐಪಿಎಲ್ 2024 ಟೂರ್ನಿಯಲ್ಲಿ ಕೊಹ್ಲಿ ಪ್ರದರ್ಶನ ಆಧರಿಸಿ ಅಂತಿಮ ನಿರ್ಧಾರ ಕೈಗೊಲ್ಳಲು ಬಿಸಿಸಿಐ ಆಯ್ಕೆ ಸಮಿತಿ ಮುಂದಾಗಿದೆ. ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಕೊಹ್ಲಿ ಸ್ಫೋಟಕ ಪ್ರದರ್ಶನದ ಮೂಲಕ ಅಬ್ಬರಿಸಿದರೆ ಟಿ20 ವಿಶ್ವಕಪ್ ಟೂರ್ನಿಗೆ ಆಯ್ಕೆಯಾಗುವ ಸಾಧ್ಯತೆ ಇದೆ. ಇತ್ತ ಕೊಹ್ಲಿ ಚೊಚ್ಚಲ ಐಪಿಎಲ್ ಟ್ರೋಫಿಗೆ ಮುತ್ತಿಕ್ಕಲು ಉತ್ಸುಕರಾಗಿದ್ದಾರೆ. ಎಲ್ಲಾ ಆವೃತ್ತಿಗಳಲ್ಲಿ ಆರ್‌ಸಿಬಿಗೆ ಪ್ರಶಸ್ತಿ ಮಿಸ್ ಆಗಿದೆ. ಈ ಬಾರಿ ಪ್ರಶಸ್ತಿ ಒಲಿಸಿಕೊಳ್ಳುವ ಮೂಲಕ ಟಿ20 ವಿಶ್ವಕಪ್ ಟೂರ್ನಿಗೂ ಆಯ್ಕೆಯಾಗಲು ಕೊಹ್ಲಿ ತಯಾರಿ ಮಾಡಿಕೊಳ್ಳಬೇಕಿದೆ.

RCB ಫ್ರಾಂಚೈಸಿಗೆ ದುಡ್ಡೇ ದೊಡ್ಡಪ್ಪ..! CSK ನೋಡಿ ಕಲಿಯಬೇಕಿದೆ ರಾಯಲ್‌ ಚಾಲೆಂಜರ್ಸ್ ಬೆಂಗಳೂರು

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಮುಂಬೈಗೆ ಬಂದಿಳಿದ ವಿರುಷ್ಕಾ ದಂಪತಿ; ಮೆಸ್ಸಿಯನ್ನು ಭೇಟಿಯಾಗ್ತಾರಾ ವಿರಾಟ್ ಕೊಹ್ಲಿ?
ಟೀಂ ಇಂಡಿಯಾ ಕ್ರಿಕೆಟಿಗರಿಗೆ ದುಶ್ಚಟವಿದೆ, ಆದರೆ ನನ್ನ ಪತಿಗಿಲ್ಲ! ಈ ಕ್ರಿಕೆಟರ್ ಪತ್ನಿಯಿಂದ ವಿವಾದಾತ್ಮಕ ಹೇಳಿಕೆ