'ICC T20 World Cup ಬಳಿಕ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಟಿ20 ವಿದಾಯ ಘೋಷಿಸಬಹುದು..!'

Published : Sep 15, 2022, 12:23 PM IST
'ICC T20 World Cup ಬಳಿಕ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಟಿ20 ವಿದಾಯ ಘೋಷಿಸಬಹುದು..!'

ಸಾರಾಂಶ

* ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಕ್ಷಣಗಣನೆ  * ಟಿ20 ವಿಶ್ವಕಪ್ ಟೂರ್ನಿ ಬಳಿಕ ವಿರಾಟ್ ಕೊಹ್ಲಿ ಚುಟುಕು ಕ್ರಿಕೆಟ್‌ಗೆ ಗುಡ್‌ಬೈ * ಪಾಕಿಸ್ತಾನ ಮಾಜಿ ಕ್ರಿಕೆಟಿಗ ಕೊಹ್ಲಿ ಕುರಿತು ಅಚ್ಚರಿಯ ಹೇಳಿಕೆ   

ಲಾಹೋರ್(ಸೆ.15): ಮುಂಬರುವ ಅಕ್ಟೋಬರ್ 16ರಿಂದ ಆಸ್ಟ್ರೇಲಿಯಾದಲ್ಲಿ ಆರಂಭವಾಗಲಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಕ್ಷಣಗಣನೆ ಆರಂಭವಾಗಿದೆ. 2022ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಮುಕ್ತಾಯದ ಬಳಿಕ, ಏಕದಿನ ಹಾಗೂ ಟೆಸ್ಟ್ ಕ್ರಿಕೆಟ್‌ ಮಾದರಿಯಲ್ಲಿ ಹೆಚ್ಚು ಗಮನ ಹರಿಸುವ ಉದ್ದೇಶದಿಂದ ವಿರಾಟ್ ಕೊಹ್ಲಿ, ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ವಿದಾಯ ಹೇಳಬಹುದು ಎಂದು ಪಾಕಿಸ್ತಾನದ ಮಾಜಿ ವೇಗಿ ಶೋಯೆಬ್ ಅಖ್ತರ್ ಅಭಿಪ್ರಾಯಪಟ್ಟಿದ್ದಾರೆ. ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯು ಅಕ್ಟೋಬರ್ 16ರಿಂದ ನವೆಂಬರ್ 13ರ ವರೆಗೆ ಟಿ20 ವಿಶ್ವಕಪ್‌ ಜರುಗಲಿದೆ.

ಐಸಿಸಿ ಟಿ20 ವಿಶ್ವಕಪ್‌ ಟೂರ್ನಿ ಮುಕ್ತಾಯದ ಬಳಿಕ ವಿರಾಟ್ ಕೊಹ್ಲಿ, ಚುಟುಕು ಕ್ರಿಕೆಟ್‌ಗೆ ವಿದಾಯ ಘೋಷಿಸಬಹುದು. ಇನ್ನುಳಿದ ಕ್ರಿಕೆಟ್‌ ಮಾದರಿಯಲ್ಲಿ ದೀರ್ಘಕಾಲಿಕವಾಗಿ ಮುಂದುವರೆಯುವ ಉದ್ದೇಶದಿಂದ ವಿರಾಟ್ ಕೊಹ್ಲಿ, ಚುಟುಕು ಕ್ರಿಕೆಟ್‌ಗೆ ವಿದಾಯ ಘೋಷಿಸಬಹುದು ಎಂದು ಶೋಯೆಬ್ ಅಖ್ತರ್ ಹೇಳಿದ್ದಾರೆ.

ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ, ಬರೋಬ್ಬರಿ ಎರಡೂವರೆ ವರ್ಷಗಳ ಬಳಿಕ 71ನೇ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಶತಕ ಬಾರಿಸಲು ಯಶಸ್ವಿಯಾಗಿದ್ದರು. ಏಷ್ಯಾಕಪ್ ಟಿ20 ಟೂರ್ನಿಯಲ್ಲಿ ಆಫ್ಘಾನಿಸ್ತಾನ ವಿರುದ್ದದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅಜೇಯ 122 ರನ್ ಬಾರಿಸಿ ಮಿಂಚಿದ್ದರು. ಇದು ಅಂತಾರಾಷ್ಟ್ರೀಯ ಟಿ20 ತಂಡದಲ್ಲಿ ವಿರಾಟ್ ಕೊಹ್ಲಿ ಬಾರಿಸಿದ ಮೊದಲ ಶತಕ ಎನಿಸಿಕೊಂಡಿತ್ತು. ಏಷ್ಯಾಕಪ್ ಟೂರ್ನಿಯಲ್ಲಿ ಒಟ್ಟು 276 ರನ್ ಬಾರಿಸುವ ಮೂಲಕ ವಿರಾಟ್ ಕೊಹ್ಲಿ, ಟೂರ್ನಿಯಲ್ಲಿ ಎರಡನೇ ಗರಿಷ್ಠ ರನ್ ಸ್ಕೋರರ್‌ ದಾಖಲಿಸಿದ ಬ್ಯಾಟರ್‌ ಆಗಿ ಹೊರಹೊಮ್ಮಿದ್ದರು.

ವಿರಾಟ್ ಕೊಹ್ಲಿ, 2019ರ ನವೆಂಬರ್ ಬಳಿಕ ಸತತ ಎರಡೂವರೆ ವರ್ಷಗಳ ಕಾಲ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮೂರಂಕಿ ಮೊತ್ತ ದಾಖಲಿಸಲು ವಿಫಲವಾಗುತ್ತಲೇ ಬಂದಿದ್ದರು. ಆದರೆ ಮುಂಬರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೂ ಮುನ್ನ ವಿರಾಟ್ ಕೊಹ್ಲಿ, ಫಾರ್ಮ್‌ಗೆ ಮರಳಿರುವುದು ತಂಡದ ಆತ್ಮವಿಶ್ವಾಸ ಹೆಚ್ಚಾಗುವಂತೆ ಮಾಡಿದೆ. 

ಯಾರೊಬ್ಬರಿಗೂ ಕೊಹ್ಲಿಗೆ ಸಿಕ್ಕಷ್ಟು ಸುದೀರ್ಘ ಅವಕಾಶ ಸಿಕ್ಕಿಲ್ಲ: ಮತ್ತೆ ವಿರಾಟ್ ಕಾಲೆಳೆದ ಗಂಭೀರ್..!

ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಏಷ್ಯಾಕಪ್‌ ಕ್ರಿಕೆಟ್‌ ಟೂರ್ನಿಯ ಸೂಪರ್ 4  ಹಂತದಲ್ಲಿ ಸತತ ಎರಡು ಸೋಲು ಕಾಣುವ ಮೂಲಕ ಏಷ್ಯಾಕಪ್‌ ಫೈನಲ್‌ ಪ್ರವೇಶಿಸಲು ವಿಫಲವಾಗಿತ್ತು. ಇದರ ಬೆನ್ನಲ್ಲೇ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್, ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿಗೆ ಶತಕ ಬಾರಿಸಲು ಸಿಕ್ಕಷ್ಟು ಸುದೀರ್ಘ ಅವಕಾಶ ಯೊವೊಬ್ಬ ಆಟಗಾರನಿಗೂ ಸಿಕ್ಕಿಲ್ಲ ಎಂದು ಹೇಳಿದ್ದರು.

ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ನವೆಂಬರ್ 23, 2019ರಂದು ಕೋಲ್ಕತಾದಲ್ಲಿ ನಡೆದಿದ್ದ ಬಾಂಗ್ಲಾದೇಶ ವಿರುದ್ಧದ ಪಿಂಕ್ ಬಾಲ್ ಟೆಸ್ಟ್‌ನಲ್ಲಿ ಶತಕ ಬಾರಿಸಿದ್ದರು. ಆ ಬಳಿಕ ಮತ್ತೊಂದು ಶತಕಕ್ಕೆ 1020 ದಿನ ಕಾಯಬೇಕಾಯಿತು. 70 ಹಾಗೂ 71ನೇ ಶತಕದ ನಡುವೆ ವಿರಾಟ್‌ 72 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ್ದು 2,708 ರನ್‌ ಗಳಿಸಿದ್ದರು. 26 ಅರ್ಧಶತಕ ಬಾರಿಸಿದ್ದ ಅವರ ವೈಯಕ್ತಿಕ ಗರಿಷ್ಠ ಮೊತ್ತ ಔಟಾಗದೆ 94 ರನ್‌ ಆಗಿತ್ತು. ಆದರೆ ಬರೋಬ್ಬರಿ 1020 ದಿನಗಳ ಬಳಿಕ ಕೊನೆಗೂ ವಿರಾಟ್ ಕೊಹ್ಲಿ, ಮೂರಂಕಿ ಮೊತ್ತ ದಾಖಲಿಸುವ ಮೂಲಕ ಎಲ್ಲಾ ಟೀಕಾಕಾರರಿಗೆ ಬ್ಯಾಟ್‌ ಮೂಲಕವೇ ಉತ್ತರಿಸಿದ್ದರು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಡಿಕಾಕ್‌ ಡ್ಯಾಶಿಂಗ್‌ ಆಟದ ಮುಂದೆ ಥಂಡಾ ಹೊಡೆದ ಟೀಮ್‌ ಇಂಡಿಯಾ!
ಭಾರತ-ಪಾಕಿಸ್ತಾನ ಟಿ20 ವಿಶ್ವಕಪ್ ಪಂದ್ಯದ ಟಿಕೆಟ್ ಮಾರಾಟ ಆರಂಭ, 450 ರೂಗೆ ಬುಕಿಂಗ್ ಹೇಗೆ?