
ನವದೆಹಲಿ: ಟೀಂ ಇಂಡಿಯಾದ ರನ್ಮಷಿನ್ ವಿರಾಟ್ ಕೊಹ್ಲಿ ತಮ್ಮ ಅದ್ಭುತ ಬ್ಯಾಟಿಂಗ್ ಮೂಲಕ ಮತ್ತೊಂದು ಐತಿಹಾಸಿಕ ವಿಶ್ವದಾಖಲೆ ನಿರ್ಮಿಸಿದ್ದಾರೆ. SENA ರಾಷ್ಟ್ರಗಳ ವಿರುದ್ಧ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತಿ ಹೆಚ್ಚು ಬಾರಿ 50ಕ್ಕೂ ಹೆಚ್ಚು ರನ್ ಗಳಿಸಿದ ವಿಶ್ವದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಕಿಂಗ್ ಕೊಹ್ಲಿ ಪಾತ್ರರಾಗಿದ್ದಾರೆ.
ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ ಗೆಲುವು ಸಾಧಿಸಿದ ಬೆನ್ನಲ್ಲೇ ಕೊಹ್ಲಿ ಅವರ ಈ ದಾಖಲೆ ಕ್ರಿಕೆಟ್ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ, ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ತಂಡಗಳನ್ನು ಒಳಗೊಂಡ SENA ರಾಷ್ಟ್ರಗಳ ವಿರುದ್ಧ ಕೊಹ್ಲಿ ಈವರೆಗೆ ಒಟ್ಟು 134 ಬಾರಿ 50ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಈ ಮೂಲಕ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಹಿಂದಿಕ್ಕಿರುವ ಕೊಹ್ಲಿ, ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ತಮ್ಮ ಪ್ರಾಬಲ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.
SENA ತಂಡಗಳ ವಿರುದ್ಧ ಅತಿ ಹೆಚ್ಚು 50+ ಸ್ಕೋರ್ ದಾಖಲಿಸಿದ ಬ್ಯಾಟರ್ಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಸಚಿನ್ ತೆಂಡೂಲ್ಕರ್ 133 ಬಾರಿ ಈ ಸಾಧನೆ ಮಾಡಿದ್ದು, ಎರಡನೇ ಸ್ಥಾನದಲ್ಲಿದ್ದಾರೆ. ವೆಸ್ಟ್ ಇಂಡೀಸ್ನ ದಿಗ್ಗಜ ಬ್ರಿಯಾನ್ ಲಾರಾ 100 ಬಾರಿ 50ಕ್ಕೂ ಹೆಚ್ಚು ರನ್ ಗಳಿಸಿ ಮೂರನೇ ಸ್ಥಾನದಲ್ಲಿದ್ದಾರೆ. ಶ್ರೀಲಂಕಾದ ಕುಮಾರ್ ಸಂಗಕ್ಕಾರ 97 ಬಾರಿ, ವೆಸ್ಟ್ ಇಂಡೀಸ್ನ ಶಿವನಾರಾಯಣ್ ಚಂದ್ರಪಾಲ್ ಮತ್ತು ಭಾರತದ ರಾಹುಲ್ ದ್ರಾವಿಡ್ ತಲಾ 89 ಬಾರಿ 50+ ಸ್ಕೋರ್ ದಾಖಲಿಸಿದ್ದಾರೆ.
ವಿರಾಟ್ ಕೊಹ್ಲಿ (ಭಾರತ) – 134 ಬಾರಿ
ಸಚಿನ್ ತೆಂಡೂಲ್ಕರ್ (ಭಾರತ) – 133 ಬಾರಿ
ಬ್ರಿಯಾನ್ ಲಾರಾ (ವೆಸ್ಟ್ ಇಂಡೀಸ್) – 100 ಬಾರಿ
ಕುಮಾರ್ ಸಂಗಕ್ಕಾರ (ಶ್ರೀಲಂಕಾ) – 97 ಬಾರಿ
ಶಿವನಾರಾಯಣ್ ಚಂದ್ರಪಾಲ್ (ವೆಸ್ಟ್ ಇಂಡೀಸ್) – 89 ಬಾರಿ
ರಾಹುಲ್ ದ್ರಾವಿಡ್ (ಭಾರತ) – 89 ಬಾರಿ
ಮಹೇಲ ಜಯವರ್ಧನೆ (ಶ್ರೀಲಂಕಾ) – 87 ಬಾರಿ
ವಿವ್ ರಿಚರ್ಡ್ಸ್ (ವೆಸ್ಟ್ ಇಂಡೀಸ್) – 86 ಬಾರಿ
ಬಾಬರ್ ಅಜಂ (ಪಾಕಿಸ್ತಾನ) – 83 ಬಾರಿ
ಡೆಸ್ಮಂಡ್ ಹೇನ್ಸ್ (ವೆಸ್ಟ್ ಇಂಡೀಸ್) – 81 ಬಾರಿ
MOST 50+ SCORES AGAINST SENA IN INTERNATIONAL CRICKET HISTORY ✨
Virat Kohli - 134* times.
Sachin Tendulkar - 133.
Brian Lara - 100.
THE GOAT OF ODI - KING KOHLI ❤️
#NZvsIND https://t.co/lUKkvOxCUF
— Nafees (@Nafees_018) November 4, 2026
ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು
ಟಿ20 ಸರಣಿ ಜಯಿಸಿದ ಬಳಿಕ ಇದೀಗ ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲೂ ಭಾರತ ತಂಡ ಉತ್ತಮ ಪ್ರದರ್ಶನ ನೀಡಿದೆ. ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡ ಭಾರತೀಯ ಬೌಲರ್ಗಳ ದಾಳಿಗೆ ತತ್ತರಿಸಿ 185 ರನ್ಗಳಿಗೆ ಆಲೌಟ್ ಆಗಿತ್ತು. ಈ ಗುರಿಯನ್ನು ಬೆನ್ನಟ್ಟಿದ ಭಾರತ ತಂಡ ಗೆಲುವು ಸಾಧಿಸುವ ಮೂಲಕ ಸರಣಿಯಲ್ಲಿ ಶುಭಾರಂಭ ಮಾಡಿತು.
ಈ ಪಂದ್ಯದಲ್ಲಿ ಕೊಹ್ಲಿ ಅವರ ದಾಖಲೆಯ ಸಾಧನೆ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಮತ್ತೊಂದು ಸಂಭ್ರಮದ ಕ್ಷಣವಾಗಿದೆ. ಈಗಾಗಲೇ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಹಲವು ದಾಖಲೆಗಳನ್ನು ನಿರ್ಮಿಸಿರುವ ಕೊಹ್ಲಿ, SENA ರಾಷ್ಟ್ರಗಳ ವಿರುದ್ಧ 50+ ಸ್ಕೋರ್ಗಳ ಪಟ್ಟಿಯಲ್ಲಿ ಸಚಿನ್ ಅವರನ್ನೂ ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ್ದಾರೆ. ಒಟ್ಟಿನಲ್ಲಿ, ವಯಸ್ಸು ಹೆಚ್ಚಾದರೂ ಬ್ಯಾಟಿಂಗ್ನಲ್ಲಿ ರನ್ ಗಳಿಸುವ ಹಸಿವು ಕಡಿಮೆಯಾಗಿಲ್ಲ ಎಂಬುದನ್ನು ವಿರಾಟ್ ಕೊಹ್ಲಿ ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.