
ವೈಝಾಗ್ (ಡಿ.07) ಸೌತ್ ಆಫ್ರಿಕಾ ವಿರುದ್ದದ ಏಕದಿನ ಸರಣಿಯನ್ನು ಭಾರತ 2-1 ಅಂತರದಲ್ಲಿ ಗೆದ್ದುಕೊಂಡಿದೆ. ಸರಣಿಯಲ್ಲಿ ಅದ್ಬುತ ಪ್ರದರ್ಶನ ನೀಡಿದ ವಿರಾಟ್ ಕೊಹ್ಲಿ ತಮ್ಮ ಕಳಪೆ ಫಾರ್ಮ್‌ನಿಂದ ಹೊರಬಂದಿದ್ದಾರೆ. ಮೂರು ಪಂದ್ಯಗಳ ಸರಣಿಯಲ್ಲಿ ವಿರಾಟ್ ಕೊಹ್ಲಿ ಸತತ 2 ಶತಕ ಸಿಡಿಸಿ ದಾಖಲೆ ಬರೆದಿದ್ದಾರೆ. ಆಸ್ಟ್ರೇಲಿಯಾ ಪ್ರವಾಸದಲ್ಲಿ ಕಳಪೆ ಫಾರ್ಮ್‌ನಲ್ಲಿದ್ದ ವಿರಾಟ್ ಕೊಹ್ಲಿ ಟೀಕೆಗೆ ಗುರಿಯಾಗಿದ್ದರು. ಆದರೆ ಸೌತ್ ಆಫ್ರಿಕಾ ವಿರುದ್ದ ಅದ್ಭುತ ಪ್ರದರ್ಶನ ನೀಡಿ ಫಾರ್ಮ್ ಕಂಡುಕೊಂಡಿದ್ದಾರೆ. ತಮ್ಮ ಸಂಕಷ್ಟ ಸಮಯದಿಂದ ಹೊರಬಂದ ವಿರಾಟ್ ಕೊಹ್ಲಿ ವಿಶಾಖಪಟ್ಟಣಂನ ಸಿಂಹಾಚಾಲ ದೇವಸ್ಥಾನಕ್ಕೆ ಭೇಟ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಸಿಂಹಾಚಲಂನಲ್ಲಿರುವ ವರಾಹ ಲಕ್ಷ್ಮಿ ನರಸಿಂಹ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ ವಿರಾಟ್ ಕೊಹ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ವಿರಾಟ್ ಕೊಹ್ಲಿಯನ್ನು ಆತ್ಮೀಯವಾಗಿ ಬರಮಾಡಿಕೊಂಡು ದೇವಸ್ಥಾನ ಆಡಳಿತ ಸಮಿತಿ, ದರ್ಶನಕ್ಕೆ ವ್ಯವಸ್ಥೆ ಮಾಡಿತ್ತು. ವಿರಾಟ್ ಕೊಹ್ಲಿ ಕುಟುಂಬ ಸಮೇತ ಈ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಕೊಹ್ಲಿ ಜೊತೆಗೆ ಟೀಂ ಇಂಡಿಯಾ ಕೆಲ ಆಟಗಾರರು ಭೇಟಿ ನೀಡಿದ್ದರು. ಇಲ್ಲಿ ವಿಶೇಷ ಪೂಜೆ ಸಲ್ಲಿಸಿದ ವಿರಾಟ್ ಕೊಹ್ಲಿಗೆ ಬಳಿಕ ವೇದ ಆಶೀರ್ವಚನದ ನಾದಸ್ವರಂ ಪಠಣ ಮಾಡಲಾಗಿದೆ.
ವರಾಹ ಲಕ್ಷ್ಮಿ ನರಸಿಂಹ ಸ್ವಾಮಿ ದೇವಸ್ಥಾನ ಪ್ರಮುಖವಾಗಿ ಸಂಕಷ್ಟ ನಿವಾರಣೆಗೂ ಪ್ರಸಿದ್ಧಿಯಾಗಿದೆ. ವಿರಾಟ್ ಕೊಹ್ಲಿ ಟೆಸ್ಟ್ ಹಾಗೂ ಟಿ20 ಮಾದಿರಿಯಿಂದ ನಿವೃತ್ತಿ ಪಡೆದುಕೊಂಡಿದ್ದಾರೆ. ಸುದೀರ್ಘ ದಿನಗಳ ಬಳಿಕ ಆಸ್ಟ್ರೇಲಿಯಾ ಪ್ರವಾಸ ಮಾಡಿದ್ದ ವಿರಾಟ್ ಕೊಹ್ಲಿ ಕಳಪೆ ಪ್ರದರ್ಶನ ನೀಡಿದ್ದರು. ಕಠಿಣ ಅಭಾಸ ಹಾಗೂ ಸತತ ಪರಿಶ್ರಮದಿಂದ ವಿರಾಟ್ ಕೊಹ್ಲಿ ಸೌತ್ ಆಫ್ರಿಕಾ ವಿರುದ್ದ ದಿಟ್ಟ ಹೋರಾಟ ನೀಡಿದ ಭಾರತದ ಸರಣಿ ಗೆಲುವಿನಲ್ಲಿ ಪ್ರಮುಖ ಪಾತ್ರ ನಿರ್ಹಿಸಿದ್ದಾರೆ. ಸರಣಿ ಗೆಲುವಿನ ಬೆನ್ನಲ್ಲೇ ಟೀಂ ಇಂಡಿಯಾ ಸದಸ್ಯ ವಾಶಿಂಗ್ಟನ್ ಸುಂದರ್ ಸೇರಿದಂತೆ ಇತರ ಸದಸ್ಯರ ಜೊತೆ ವರಾಹ ಲಕ್ಷ್ಮಿ ನರಸಿಂಹ ಸ್ವಾಮಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ.
ವಿರಾಟ್ ಕೊಹ್ಲಿ ಈ ವರ್ಷದ ಭಾರತದ ಟಾಪ್ ಸ್ಕೋರರ್ ಆಗಿ ಗುರುತಿಸಿಕೊಂಡಿದ್ದಾರೆ. ಸೌತ್ ಆಫ್ರಿಕಾ ವಿರುದ್ದ ಎರಡು ಸೆಂಚುರಿ ಸಿಡಿಸುವ ಮೂಲಕ ಕೊಹ್ಲಿ 2025ರ ಸಾಲಿನ ಏಕದಿನ ಪಂದ್ಯಗಳಲ್ಲಿ ಗರಿಷ್ಠ ರನ್ ಸಿಡಿಸಿದ ಟೀಂ ಇಂಡಿಯಾ ಕ್ರಿಕೆಟಿಗನಾಗಿದ್ದಾರೆ. ಈ ವರ್ಷ ಕೊಹ್ಲಿ 65ರ ಸರಾಸರಿಯಲ್ಲಿ 651 ರನ್ ಸಿಡಿಸಿದ್ದಾರೆ. ಸೌತ್ ಆಫ್ರಿಕಾ ವಿರುದ್ದದ ಮೂರು ಏಕದಿನ ಪಂದ್ಯಗಳಿಂದ ವಿರಾಟ್ ಕೊಹ್ಲಿ 117.05ರ ಸ್ಟ್ರೈಕ್‌ರೇಟ್‌ನಲ್ಲಿ 302 ರನ್ ಸಿಡಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.