ICC ODI Rankings: ಎರಡನೇ ಸ್ಥಾನ ಉಳಿಸಿಕೊಂಡ ವಿರಾಟ್ ಕೊಹ್ಲಿ..!

By Suvarna NewsFirst Published Jan 26, 2022, 5:43 PM IST
Highlights

* ಐಸಿಸಿ ನೂತನ ಏಕದಿನ ಬ್ಯಾಟಿಂಗ್‌ ರ‍್ಯಾಂಕಿಂಗ್‌ ಪ್ರಕಟ, ಕೊಹ್ಲಿಗೆ 2ನೇ ಸ್ಥಾನ

* ಬ್ಯಾಟಿಂಗ್‌ ರ‍್ಯಾಂಕಿಂಗ್‌ನಲ್ಲಿ ಮೊದಲ ಸ್ಥಾನದಲ್ಲೇ ಮುಂದುವರೆದ ಬಾಬರ್ ಅಜಂ

* ಇನ್ನು ಬ್ಯಾಟಿಂಗ್‌ನಲ್ಲಿ ಮೂರನೇ ಸ್ಥಾನ ಉಳಿಸಿಕೊಂಡ ರೋಹಿತ್ ಶರ್ಮಾ

ದುಬೈ(ಜ.26): ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ(Virat Kohli), ಐಸಿಸಿ ಏಕದಿನ ಬ್ಯಾಟಿಂಗ್‌ ರ‍್ಯಾಂಕಿಂಗ್‌ನಲ್ಲಿ (ICC ODI Rankings) ಎರಡನೇ ಸ್ಥಾನ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇತ್ತೀಚೆಗಷ್ಟೇ ಮುಕ್ತಾಯವಾದ ದಕ್ಷಿಣ ಆಫ್ರಿಕಾ ವಿರುದ್ದದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ವಿರಾಟ್ ಕೊಹ್ಲಿ ಎರಡು ಅರ್ಧಶತಕ ಸಹಿತ 116 ರನ್ ಬಾರಿಸಿದ್ದರು. ಇನ್ನು ದಕ್ಷಿಣ ಆಫ್ರಿಕಾ ಪ್ರವಾಸದಿಂದ ಹೊರಗುಳಿದಿದ್ದ ಭಾರತ ಸೀಮಿತ ಓವರ್‌ಗಳ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ (Rohit Sharma) ರ‍್ಯಾಂಕಿಂಗ್‌ನಲ್ಲಿ ಮೂರನೇ ಸ್ಥಾನದಲ್ಲೇ ಮುಂದುವರೆದಿದ್ದಾರೆ.

ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಬಾಬರ್ ಅಜಂ(Babar Azam) 873 ರೇಟಿಂಗ್ ಅಂಕಗಳೊಂದಿಗೆ ಮೊದಲ ಸ್ಥಾನದಲ್ಲೇ ಮುಂದುವರೆದಿದ್ದಾರೆ. ಇನ್ನು ವಿರಾಟ್ ಕೊಹ್ಲಿ ಖಾತೆಯಲ್ಲಿ 836 ರೇಟಿಂಗ್ ಅಂಕಗಳನ್ನು ಹೊಂದಿದ್ದು ಎರಡನೇ ಸ್ಥಾನ ಉಳಿಸಿಕೊಂಡಿದ್ದಾರೆ. ಇನ್ನು ರೋಹಿತ್ ಶರ್ಮಾ 801 ರೇಟಿಂಗ್ ಅಂಕಗಳ ಸಹಿತ ಮೂರನೇ ಸ್ಥಾನ ಕಾಯ್ದುಕೊಂಡಿದ್ದಾರೆ. 

ದಕ್ಷಿಣ ಆಫ್ರಿಕಾದ ಅತ್ಯಂತ ನಂಬಿಗಸ್ಥ ಬ್ಯಾಟರ್ ರಾಸ್ಸಿ ವ್ಯಾನ್ ಡರ್ ಡುಸೇನ್‌(Rassie van der Dussen), ಭಾರತ ವಿರುದ್ದದ ಏಕದಿನ ಸರಣಿಯಲ್ಲಿ ಆಕರ್ಷಕ ಶತಕ ಚಚ್ಚುವುದರೊಂದಿಗೆ ಒಟ್ಟು 216 ರನ್ ಬಾರಿಸಿದ್ದರು. ಈ ಮೂಲಕ ಏಕದಿನ ಬ್ಯಾಟಿಂಗ್ ರ‍್ಯಾಂಕಿಂಗ್‌ನಲ್ಲಿ ರಾಸ್ಸಿ ಟಾಪ್ 10 ಪಟ್ಟಿಯೊಳಗೆ ಲಗ್ಗೆಯಿಡುವ ಯಶಸ್ವಿಯಾಗಿದ್ದಾರೆ. ಇನ್ನು ದಕ್ಷಿಣ ಆಫ್ರಿಕಾ ತಂಡದ ವಿಕೆಟ್ ಕೀಪರ್ ಬ್ಯಾಟರ್‌ ಕ್ವಿಂಟನ್ ಡಿ ಕಾಕ್ (Quinton de Kock) ಕೊನೆಯ ಏಕದಿನ ಪಂದ್ಯದಲ್ಲಿ ಸಮಯೋಚಿತ ಶತಕ ಚಚ್ಚುವ ಮೂಲಕ ನಾಲ್ಕು ಸ್ಥಾನ ಮೇಲೇರಿ 5ನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ. ದಕ್ಷಿಣ ಆಫ್ರಿಕಾ ಸೀಮಿತ ಓವರ್‌ಗಳ ತಂಡದ ನಾಯಕ ತೆಂಬ ಬವುಮಾ(Temba Bavuma), ಟೀಂ ಇಂಡಿಯಾ ಎದುರು ಆಕರ್ಷಕ ಶತಕ ಸಹಿತ 51ರ ಬ್ಯಾಟಿಂಗ್ ಸರಾಸರಿಯಲ್ಲಿ 153 ರನ್ ಬಾರಿಸಿದ್ದರು. ಇದರೊಂದಿಗೆ ಬರೋಬ್ಬರಿ 21 ಸ್ಥಾನಗಳು ಜಿಗಿತ ಕಂಡು 59ನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ.

🔹 Quinton de Kock continues his rise 🔼
🔹 Massive gains for Rassie van der Dussen 🔥
🔹 England players move up in the T20I charts 📈

Here’s how things stand after the latest update to the ICC Men’s Player Rankings 📝

Details 👉 https://t.co/Jxktm5FBsr pic.twitter.com/HBGUPKNHsT

— ICC (@ICC)

ICC T20I Rankings: ಮತ್ತೆ ನಂ.1 ಸ್ಥಾನಕ್ಕೆ ಜಿಗಿದ ಶಫಾಲಿ ವರ್ಮಾ..!

ಇನ್ನು ಬೌಲಿಂಗ್ ವಿಭಾಗದಲ್ಲಿ ದಕ್ಷಿಣ ಆಫ್ರಿಕಾದ ಬೌಲರ್‌ಗಳಾದ ಲುಂಗಿ ಎಂಗಿಡಿ ಹಾಗೂ ಕೇಶವ್ ಮಹರಾಜ್ ರ‍್ಯಾಂಕಿಂಗ್‌ನಲ್ಲಿ ಲಾಂಗ್ ಜಂಪ್ ಮಾಡಿದ್ದಾರೆ. ವೇಗದ ಬೌಲರ್ ಲುಂಗಿ ಎಂಗಿಡಿ 4 ಸ್ಥಾನ ಜಿಗಿತ ಕಂಡು 20ನೇ ಸ್ಥಾನವನ್ನು ಆಕ್ರಮಿಸಿಕೊಂಡರೆ, ಸರಣಿಯಲ್ಲಿ ವಿರಾಟ್ ಕೊಹ್ಲಿಯನ್ನು ಎರಡು ಬಾರಿ ಔಟ್ ಮಾಡಿದ ಸ್ಪಿನ್ನರ್ ಕೇಶವ್ ಮಹರಾಜ್ ಬರೋಬ್ಬರಿ 18 ಸ್ಥಾನ ಜಿಗಿದು 33ನೇ ಸ್ಥಾನವನ್ನು ಅಲಂಕರಿಸಿದ್ದಾರೆ.

ಟೀಂ ಇಂಡಿಯಾ (Team India) ಅನುಭವಿ ವೇಗಿ ಭುವನೇಶ್ವರ್ ಕುಮಾರ್ (Bhuvneshwar Kumar) ದಕ್ಷಿಣ ಆಫ್ರಿಕಾ ಎದುರಿನ ಏಕದಿನ ಸರಣಿಯಲ್ಲಿ ನಿರಾಶಾದಾಯಕ ಪ್ರದರ್ಶನ ತೋರಿದ್ದರ ಪರಿಣಾಮ 4 ಸ್ಥಾನ ಜಾರಿ 22ನೇ ಸ್ಥಾನಕ್ಕೆ ಕುಸಿದಿದ್ದಾರೆ. ಬೌಲಿಂಗ್ ವಿಭಾಗದಲ್ಲಿ ಶ್ರೀಲಂಕಾದ ಸ್ಪಿನ್ನರ್ ವನಿಂದು ಹಸರಂಗ ಹಾಗೂ ದಕ್ಷಿಣ ಆಫ್ರಿಕಾದ ತಬ್ರೀಜ್ ಶಮ್ಸಿ ಮೊದಲೆರಡು ಸ್ಥಾನಗಳಲ್ಲಿ ಭದ್ರವಾಗಿದ್ದರೆ, ಇಂಗ್ಲೆಂಡ್‌ನ ಲೆಗ್ ಸ್ಪಿನ್ನರ್ ಆದಿಲ್ ರಶೀದ್ ಒಂದು ಸ್ಥಾನ ಮೇಲೇರಿ ಮೂರನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ. ಬೌಲರ್‌ಗಳ ಟಾಪ್ 10 ಶ್ರೇಯಾಂಕದಲ್ಲಿ ಭಾರತದ ಯಾವೊಬ್ಬ ಆಟಗಾರನೂ ಸ್ಥಾನ ಪಡೆಯಲು ಯಶಸ್ವಿಯಾಗಿಲ್ಲ. ಇನ್ನುಳಿದಂತೆ ಆಲ್ರೌಂಡರ್‌ಗಳ ವಿಭಾಗದಲ್ಲಿ ಮೊಹಮ್ಮದ್ ನಬಿ ಹಾಗೂ ಶಕೀಬ್ ಅಲ್ ಹಸನ್ ಮೊದಲೆರಡು ಸ್ಥಾನದಲ್ಲಿ ಮುಂದುವರೆದಿದ್ದಾರೆ. ಆಲ್ರೌಂಡರ್ ವಿಭಾಗದಲ್ಲೂ ಸಹಾ ಭಾರತದ ಯಾವೊಬ್ಬ ಆಟಗಾರ ಸಹ ಟಾಪ್ 10 ಪಟ್ಟಿಯೊಳಗೆ ಸ್ಥಾನ ಗಿಟ್ಟಿಸಲು ಯಶಸ್ವಿಯಾಗಲಿಲ್ಲ.

click me!