ವಿರಾಟ್ ಕೊಹ್ಲಿ ಖಾತೆಗೆ ಮತ್ತೊಂದು ಸೆಂಚುರಿ; ಚೊಚ್ಚಲ ಶತಕ ಚಚ್ಚಿದ ಋತುರಾಜ್ ಗಾಯಕ್ವಾಡ್!

Published : Dec 03, 2025, 04:24 PM IST
India vs South Africa 2nd ODI

ಸಾರಾಂಶ

ರಾಯ್ಪುರದಲ್ಲಿ ನಡೆದ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮತ್ತು ಋತುರಾಜ್ ಗಾಯಕ್ವಾಡ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಗಾಯಕ್ವಾಡ್ ಚೊಚ್ಚಲ ಶತಕ (105) ಬಾರಿಸಿದರೆ, ಕೊಹ್ಲಿ ತಮ್ಮ 53ನೇ ಏಕದಿನ ಶತಕವನ್ನು ಪೂರೈಸಿದರು. ಈ ಜೋಡಿಯ ಶತಕದ ಜೊತೆಯಾಟವು ಆರಂಭಿಕ ಕುಸಿತದ ನಂತರ ಭಾರತ ತಂಡಕ್ಕೆ ಆಸರೆಯಾಯಿತು

ರಾಯ್ಪುರ: ಟೀಂ ಇಂಡಿಯಾ ರನ್ ಮಷೀನ್ ವಿರಾಟ್ ಕೊಹ್ಲಿ ಖಾತೆಗೆ ಮತ್ತೊಂದು ಶತಕ ಸೇರ್ಪಡೆಯಾಗಿದೆ. ರಾಂಚಿಯಲ್ಲಿ ಆಕರ್ಷಕ ಶತಕ ಸಿಡಿಸಿದ್ದ ಕೊಹ್ಲಿ, ಇದೀಗ ಅದೇ ಫಾರ್ಮ್‌ ರಾಯ್ಪುರಲ್ಲೂ ಮುಂದುವರೆಸಿದ್ದಾರೆ. ಇನ್ನು ಮತ್ತೊಂದು ತುದಿಯಲ್ಲಿ ಪುಣೆ ಮೂಲದ ಋತುರಾಜ್ ಗಾಯಕ್ವಾಡ್ ಕೂಡಾ ಚೊಚ್ಚಲ ಶತಕ ಸಿಡಿಸಿ ಸ್ಮರಣೀಯವಾಗಿಸಿಕೊಂಡಿದ್ದಾರೆ.

ಟಾಸ್ ಸೋತು ಮೊದಲು ಬ್ಯಾಟ್ ಮಾಡಲಿಳಿದ ಟೀಂ ಇಂಡಿಯಾ 62 ರನ್‌ ಗಳಿಸುವಷ್ಟರಲ್ಲಿ ಆರಂಭಿಕರಿಬ್ಬರೂ ಪೆವಿಲಿಯನ್ ಸೇರಿದರು. ಈ ವೇಳೆ ಮೂರನೇ ವಿಕೆಟ್‌ಗೆ ಜತೆಯಾದ ವಿರಾಟ್ ಕೊಹ್ಲಿ ಹಾಗೂ ಋತುರಾಜ್ ಗಾಯಕ್ವಾಡ್ ಆಕರ್ಷಕ ಶತಕದ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ವಿರಾಟ್ ಕೊಹ್ಲಿ ಆರಂಭದಿಂದಲೇ ಚುರುಕಿನ ಆಟಕ್ಕೆ ಒತ್ತು ನೀಡಿದರು. ಕೊಹ್ಲಿಗೆ ಗಾಯಕ್ವಾಡ್‌ ಉತ್ತಮ ಸಾಥ್ ನೀಡಿದರು.

ಚೊಚ್ಚಲ ಟೆಸ್ಟ್ ಶತಕ ಸಿಡಿಸಿದ ಗಾಯಕ್ವಾಡ್:

ದೇಶಿ ಕ್ರಿಕೆಟ್‌ನಲ್ಲಿ 17 ಶತಕ ಸಿಡಿಸಿ ಆಯ್ಕೆ ಸಮಿತಿಯ ಮನಗೆದ್ದು ಭಾರತ ತಂಡಕ್ಕೆ ಎಂಟ್ರಿಕೊಟ್ಟಿರುವ ಗಾಯಕ್ವಾಡ್, ಸಿಕ್ಕ ಅವಕಾಶವನ್ನು ಚೆನ್ನಾಗಿಯೇ ಬಳಸಿಕೊಳ್ಳುವಲ್ಲಿ ಯಶಸ್ವಿಯಾದರು. ಕಳೆದ ಪಂದ್ಯದಲ್ಲಿ ಕೇವಲ 8 ರನ್ ಗಳಿಸಿ ವಿಕೆಟ್ ಒಪ್ಪಿಸಿದ್ದ ಗಾಯಕ್ವಾಡ್, ಎರಡನೇ ಏಕದಿನ ಪಂದ್ಯದಲ್ಲಿ ಸಾಕಷ್ಟು ಜವಾಬ್ದಾರಿಯುತ ಬ್ಯಾಟಿಂಗ್ ನಡೆಸುವ ಮೂಲಕ ತಂಡಕ್ಕೆ ಆಸರೆಯಾದರು. ಕೇವಲ 77 ಎಸೆತಗಳನ್ನು ಎದುರಿಸಿ ಗಾಯಕ್ವಾಡ್ ಚೊಚ್ಚಲ ಏಕದಿನ ಶತಕ ಸಿಡಿಸಿ ಸಂಭ್ರಮಿಸಿದರು. ಅಂತಿಮವಾಗಿ ಋತುರಾಜ್ ಗಾಯಕ್ವಾಡ್ 83 ಎಸೆತಗಳನ್ನು ಎದುರಿಸಿ 12 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 105 ರನ್ ಬಾರಿಸಿ ಮಾರ್ಕೊ ಯಾನ್ಸನ್‌ಗೆ ವಿಕೆಟ್‌ ಒಪ್ಪಿಸಿದರು.

ಸತತ ಎರಡನೇ ಏಕದಿನ ಶತಕ ಸಿಡಿಸಿದ ಕೊಹ್ಲಿ

ಇನ್ನು ರಾಂಚಿ ಏಕದಿನ ಪಂದ್ಯದಲ್ಲಿ ಆಕರ್ಷಕ 135 ರನ್ ಸಿಡಿಸಿದ್ದ ವಿರಾಟ್ ಕೊಹ್ಲಿ, ಇದೀಗ ದಕ್ಷಿಣ ಆಫ್ರಿಕಾ ಎದುರಿನ ಎರಡನೇ ಏಕದಿನ ಪಂದ್ಯದಲ್ಲೂ ಶತಕ ಸಿಡಿಸುವ ಮೂಲಕ ಅಬ್ಬರಿಸಿದ್ದಾರೆ. ಕೇವಲ 90 ಎಸೆತಗಳನ್ನು ಎದುರಿಸಿದ ಕೊಹ್ಲಿ 7 ಬೌಂಡರಿ ಹಾಗೂ 2 ಸಿಕ್ಸರ್‌ಗಳ ನೆರವಿನಿಂದ ಏಕದಿನ ಕ್ರಿಕೆಟ್ ವೃತ್ತಿಜೀವನದ 53ನೇ ಶತಕ ಸಿಡಿಸಿ ಸಂಭ್ರಮಿಸಿದರು.

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಮೇಲ್ಮನವಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್, ಡಿ.7ಕ್ಕೆ ಕರ್ನಾಟಕ ಕ್ರಿಕೆಚ್ ಸಂಸ್ಥೆ ಚುನಾವಣೆ
ಕಾಂಗರೂ ನಾಡಲ್ಲಿ ಶತಕದ ಬರ ನೀಗಿಸಿಕೊಂಡ ಜೋ ರೂಟ್! ಕೊನೆಗೂ ತಪ್ಪಿದ ಹೇಡನ್ 'ಬೆತ್ತಲೆ ಸೇವೆ'!