ವಿರಾಟ್ ಕೊಹ್ಲಿ ಸತತ ಎರಡನೇ ಶತಕ ಬಾರಿಸುತ್ತಿದ್ದಂತೆಯೇ ಗೌತಮ್ ಗಂಭೀರ್ ರಿಯಾಕ್ಷನ್ ಹೇಗಿತ್ತು ನೋಡಿ; ವಿಡಿಯೋ ವೈರಲ್

Published : Dec 04, 2025, 01:43 PM IST
Virat Kohli, Rohit Sharma, and Gautam Gambhir

ಸಾರಾಂಶ

ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ತಮ್ಮ 53ನೇ ಶತಕವನ್ನು ಬಾರಿಸಿದರು. ಕೊಹ್ಲಿ ಶತಕದ ಸಂಭ್ರಮಾಚರಣೆಯ ನಂತರ, ಟೀಂ ಇಂಡಿಯಾ ಹೆಡ್‌ಕೋಚ್ ಗೌತಮ್ ಗಂಭೀರ್ ಚಪ್ಪಾಳೆ ತಟ್ಟಿ ಮೆಚ್ಚುಗೆ ವ್ಯಕ್ತಪಡಿಸಿದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ರಾಯ್ಪುರ: ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಎರಡನೇ ಏಕದಿನ ಪಂದ್ಯದಲ್ಲೂ ವಿರಾಟ್ ಕೊಹ್ಲಿ ಆಕರ್ಷಕ ಶತಕ ಸಿಡಿಸಿ ಮಿಂಚಿದರು. ರಾಂಚಿಯಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ 135 ರನ್ ಸಿಡಿಸಿದ್ದ ಕೊಹ್ಲಿ, ಇದೀಗ ರಾಯ್ಪುರದಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಆಕರ್ಷಕ 102 ರನ್ ಸಿಡಿಸಿ ವಿಕೆಟ್ ಒಪ್ಪಿಸಿದರು. ಇದು ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್‌ನಲ್ಲಿ ಬಾರಿಸಿದ 53ನೇ ಅಂತಾರಾಷ್ಟ್ರೀಯ ಏಕದಿನ ಶತಕ ಎನಿಸಿಕೊಂಡಿತು. ಇನ್ನು ವಿರಾಟ್ ಕೊಹ್ಲಿ ಶತಕದ ಬೆನ್ನಲ್ಲೇ ಟೀಂ ಇಂಡಿಯಾ ಹೆಡ್‌ಕೋಚ್ ಗೌತಮ್ ಗಂಭೀರ್ ಅವರ ರಿಯಾಕ್ಷನ್ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಕೊಹ್ಲಿ ಬಳಿಕ ವೈರಲ್ ಆದ ಗಂಭೀರ್ ರಿಯಾಕ್ಷನ್:

ವಿರಾಟ್ ಕೊಹ್ಲಿ, ದಕ್ಷಿಣ ಆಫ್ರಿಕಾ ಎದುರಿನ ಎರಡನೇ ಪಂದ್ಯದಲ್ಲಿ ಚುರುಕಿನ ಶತಕ ಸಿಡಿಸಿ ಸಂಭ್ರಮಿಸಿದರು. ಅಂದಹಾಗೆ ಇದು ಹರಿಣಗಳ ಎದುರು ಸತತ ಎರಡು ಪಂದ್ಯಗಳಲ್ಲಿ ಎರಡನೇ ಶತಕ ಎನಿಸಿಕೊಂಡಿತು. ಎರಡನೇ ಶತಕ ಸಿಡಿಸಿದ ಬೆನ್ನಲ್ಲೇ ವಿರಾಟ್ ಕೊಹ್ಲಿ ಜಿಗಿದು ಶತಕದ ಸಂಭ್ರಮಾಚರಣೆ ಮಾಡಿದರು. ಈ ವಿಡಿಯೋ ವೈರಲ್ ಆಗಿತ್ತು. ಇನ್ನು ಇದರ ಬೆನ್ನಲ್ಲೇ ಹೆಡ್‌ ಕೋಚ್ ಗೌತಮ್ ಗಂಭೀರ್ ಕೂಡಾ ಖುಷಿಯಿಂದ ಚಪ್ಪಾಳೆ ತಟ್ಟುವ ವಿಡಿಯೋ ಹಾಗೂ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

 

 

ಮೊದಲಿನಿಂದಲೂ ವಿರಾಟ್ ಕೊಹ್ಲಿ ಹಾಗೂ ಗೌತಮ್ ಗಂಭೀರ್ ನಡುವೆ ಉತ್ತಮ ಒಡನಾಟವಿಲ್ಲ ಎನ್ನುವಂತಹ ಮಾತುಗಳು ಆಗಾಗ ಕೇಳಿ ಬರುತ್ತಲೇ ಇರುತ್ತವೆ. ಗಂಭೀರ್ ಅವರ ಈ ರಿಯಾಕ್ಷನ್ ಅಭಿಮಾನಿಗಳ ಮನಗೆಲ್ಲುವಲ್ಲಿ ಯಶಸ್ವಿಯಾಗಿದೆ.

ದಕ್ಷಿಣ ಆಫ್ರಿಕಾ ವಿರುದ್ಧ ಕೊಹ್ಲಿ ಹ್ಯಾಟ್ರಿಕ್‌ ಶತಕ

ವಿರಾಟ್‌ ಕೊಹ್ಲಿ ಏಕದಿನದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಹ್ಯಾಟ್ರಿಕ್‌ ಶತಕ ಸಿಡಿಸಿದರು. 2023ರ ಏಕದಿನ ವಿಶ್ವಕಪ್‌ನಲ್ಲಿ ಕೋಲ್ಕತಾದಲ್ಲಿ ನಡೆದಿದ್ದ ದ.ಆಫ್ರಿಕಾ ವಿರುದ್ಧ ಪಂದ್ಯದಲ್ಲಿ ಔಟಾಗದೆ 101 ರನ್‌ ಸಿಡಿಸಿದ್ದ ಕೊಹ್ಲಿ, ಈ ಬಾರಿ ಸರಣಿಯ ಎರಡೂ ಪಂದ್ಯಗಳಲ್ಲಿ ಕ್ರಮವಾಗಿ 135 ಹಾಗೂ 102 ರನ್‌ ಗಳಿಸಿದ್ದಾರೆ. ಒಟ್ಟಾರೆ ಇದು ದ.ಆಫ್ರಿಕಾ ವಿರುದ್ಧ ಕೊಹ್ಲಿಯ 7ನೇ ಏಕದಿನ ಶತಕ.

4 ದೇಶಗಳ ವಿರುದ್ಧ ತಲಾ 7+ ಸೆಂಚುರಿ

ಕೊಹ್ಲಿ ಏಕದಿನದಲ್ಲಿ 4 ದೇಶಗಳ ವಿರುದ್ಧ ತಲಾ 7 ಅಥವಾ ಅದಕ್ಕಿಂತ ಹೆಚ್ಚು ಶತಕ ಬಾರಿಸಿದ್ದಾರೆ. ಶ್ರೀಲಂಕಾ ವಿರುದ್ಧ 10, ವೆಸ್ಟ್‌ಇಂಡೀಸ್‌ ವಿರುದ್ಧ 9, ಆಸ್ಟ್ರೇಲಿಯಾ ವಿರುದ್ಧ 8 ಹಾಗೂ ದ.ಆಫ್ರಿಕಾ ವಿರುದ್ಧ 7 ಶತಕ ಬಾರಿಸಿದ್ದಾರೆ. ಕೊಹ್ಲಿ ಹೊರತುಪಡಿಸಿದರೆ ಸಚಿನ್‌ ತೆಂಡುಲ್ಕರ್‌ ಮಾತ್ರ ಒಂದಕ್ಕಿಂತ ಹೆಚ್ಚು ದೇಶಗಳ ವಿರುದ್ಧ 7ಕ್ಕಿಂತ ಹೆಚ್ಚು ಶತಕ ಬಾರಿಸಿದ್ದಾರೆ. ಅವರು ಆಸ್ಟ್ರೇಲಿಯಾ ವಿರುದ್ಧ 9, ಶ್ರೀಲಂಕಾ ವಿರುದ್ಧ 8 ಬಾರಿ ಸೆಂಚುರಿ ಸಿಡಿಸಿದ್ದಾರೆ.

ಭಾರತದಲ್ಲಿ 40 ಅಂ.ರಾ. ಶತಕ ಸಿಡಿಸಿದ ವಿರಾಟ್‌

ವಿರಾಟ್‌ ಕೊಹ್ಲಿ ಭಾರತದಲ್ಲಿ ನಡೆದ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 40ನೇ ಶತಕ ಬಾರಿಸಿದ್ದಾರೆ. ಇದರೊಂದಿಗೆ ತವರಿನಲ್ಲಿ ಗರಿಷ್ಠ ಶತಕ ಸಿಡಿಸಿದ ಆಟಗಾರರ ಪಟ್ಟಿಯಲ್ಲಿ ಸಚಿನ್‌ ತೆಂಡುಲ್ಕರ್‌ ದಾಖಲೆ ಮುರಿಯುವತ್ತ ದಾಪುಗಾಲಿಟ್ಟಿದ್ದಾರೆ. ಸಚಿನ್ ಭಾರತದಲ್ಲಿ 42 ಶತಕ ಬಾರಿಸಿದ್ದಾರೆ.

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಮೇಲ್ಮನವಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್, ಡಿ.7ಕ್ಕೆ ಕರ್ನಾಟಕ ಕ್ರಿಕೆಚ್ ಸಂಸ್ಥೆ ಚುನಾವಣೆ
ಕಾಂಗರೂ ನಾಡಲ್ಲಿ ಶತಕದ ಬರ ನೀಗಿಸಿಕೊಂಡ ಜೋ ರೂಟ್! ಕೊನೆಗೂ ತಪ್ಪಿದ ಹೇಡನ್ 'ಬೆತ್ತಲೆ ಸೇವೆ'!